Wayanad: ಬಂಡೀಪುರ ರಾತ್ರಿ ಸಂಚಾರ ನಿಷೇಧ ತೆರವಿಗೆ ಶೀಘ್ರ ಸಭೆ?
Team Udayavani, Nov 11, 2024, 10:08 PM IST
ವಯನಾಡ್: ಬಂಡಿಪುರ ಹುಲಿ ರಕ್ಷಿತಾರಣ್ಯದಲ್ಲಿ ರಾತ್ರಿ ಸಂಚಾರ ನಿಷೇಧ ತೆರವಿಗೆ ಸಂಬಂಧಿಸಿದಂತೆ ನ. 13ರ ಉಪಚುನಾವಣೆಯ ಬಳಿಕ ಕೇರಳ ಮತ್ತು ಕರ್ನಾಟಕ ಅಧಿಕಾರಿಗಳ ಮಧ್ಯೆ ಸಭೆ ನಡೆಸುವ ಬಗ್ಗೆ ಕರ್ನಾಟಕ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭರವಸೆ ನೀಡಿದ್ದಾರೆ.
ಕೇರಳದ ವಯನಾಡ್ ಲೋಕಸಭೆ ಕ್ಷೇತ್ರದ ಉಪಚುನಾವಣೆ ಪ್ರಚಾರದ ವೇಳೆ ಈ ವಿಷಯ ತಿಳಿಸಿದ್ದಾರೆ. ಪ್ರಿಯಾಂಕಾ ವಾದ್ರಾ ಸ್ಪರ್ಧಿಸಿರುವ ವಯನಾಡ್ ಲೋಕಸಭೆ ಕ್ಷೇತ್ರದಲ್ಲಿ ಸಂಚಾರ ನಿಷೇಧ ತೆರವು ಸ್ಥಳೀಯರ ಬೇಡಿಕೆಯಾಗಿದೆ. ವನ್ಯಜೀವಿಗಳಿಗೆ ತೊಂದರೆಯಾಗುತ್ತದೆ ಎಂಬ ಕಾರಣಕ್ಕೆ 10 ವರ್ಷಗಳ ಹಿಂದೆ ಬಂಡೀಪುರ ರಕ್ಷಿತಾರಣ್ಯದಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿಗಳಲ್ಲಿ ರಾತ್ರಿ ಸಂಚಾರವನ್ನು ಕರ್ನಾಟಕವು ನಿಷೇಧಿಸಿದೆ.
ಸರಕಾರದ ಈ ಕ್ರಮವನ್ನು ಹೈಕೋರ್ಟ್ ಎತ್ತಿ ಹಿಡಿದಿತ್ತು. ಆದರೆ ಕೇರಳದ ಸ್ಥಳೀಯರು ಮಾತ್ರ ರಾತ್ರಿ ಸಂಚಾರ ತೆರವಿಗಾಗಿ ಹೋರಾಟ ಮಾಡುತ್ತಲೇ ಬಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rajasthan: ಚುನಾವಣ ಅಧಿಕಾರಿ ಮೇಲೆ ಹಲ್ಲೆ; ಪ್ರತಿಭಟನೆ ನಡುವೆ ನರೇಶ್ ಮೀನಾ ಬಂಧನ!
ಎಡ ಕಣ್ಣಿನ ಬದಲು ಬಲ ಕಣ್ಣಿಗೆ ಶಸ್ತ್ರಚಿಕಿತ್ಸೆ… ಮನೆಗೆ ಬಂದಾಗಲೇ ಗೊತ್ತು ವೈದ್ಯರ ಯಡವಟ್ಟು
Waqf Board Case: ಆಪ್ ಶಾಸಕ ಅಮಾನತುಲ್ಲಾ ಖಾನ್ ಗೆ ಜಾಮೀನು
Mumbai: ಬಾಬಾ ಸಿದ್ದೀಕಿ ಸಾವು ದೃಢೀಕರಿಸಲು ಆಸ್ಪತ್ರೆ ಬಳಿ 30 ನಿಮಿಷ ಕಾದು ಕುಳಿತಿದ್ದ ಹಂತಕ
Ambulance ಇಂಜಿನ್ ಗೆ ಬೆಂಕಿ-ಆಕ್ಸಿಜನ್ ಸಿಲಿಂಡರ್ ಸ್ಫೋಟ;ಗರ್ಭಿಣಿ ಪ್ರಾಣಾಪಾಯದಿಂದ ಪಾರು!
MUST WATCH
ಹೊಸ ಸೇರ್ಪಡೆ
Rajasthan: ಚುನಾವಣ ಅಧಿಕಾರಿ ಮೇಲೆ ಹಲ್ಲೆ; ಪ್ರತಿಭಟನೆ ನಡುವೆ ನರೇಶ್ ಮೀನಾ ಬಂಧನ!
Maryade Prashne: ಪ್ರಶ್ನೆ ಕೇಳಲು ಬಂದ ಮರ್ಯಾದಸ್ತರು
CTRavi; ಯಾರು,ಯಾರನ್ನು,ಯಾವಾಗ ಖರೀದಿಸಲು ಪ್ರಯತ್ನಿಸಿದ್ದಾರೆ?: ಸಿಎಂಗೆ ಸಿ.ಟಿ.ರವಿ ಪ್ರಶ್ನೆ
Hosanagara: ಚಾಲಕನ ನಿಯಂತ್ರಣ ತಪ್ಪಿ ಕ್ಯಾಂಟರ್ ಪಲ್ಟಿ; ದೇಗುಲಕ್ಕೆ ಹಾನಿ
Shikhar Dhawan: ನೇಪಾಳದಲ್ಲಿ ಟಿ20 ಕ್ರಿಕೆಟ್ ಲೀಗ್ ಆಡಲಿದ್ದಾರೆ ಶಿಖರ್ ಧವನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.