Invitation ನಲ್ಲಿ ಮೋದಿ ಪರ ಮತ: ಮದುಮಗನ ವಿರುದ್ಧದ ಕೇಸ್ಗೆ ತಡೆ
ಪುತ್ತೂರು ಜೆಎಂಎಫ್ಸಿ ನ್ಯಾಯಾಲಯದಲ್ಲಿ ವಿಚಾರಣೆಗೆ ತಡೆ
Team Udayavani, Nov 12, 2024, 6:11 AM IST
ಬೆಂಗಳೂರು: “ಮೋದಿಗೆ ಮತ ಹಾಕಿದರೆ ಅದೇ ನನಗೆ ಉಡುಗೊರೆ (ಗಿಫ್ಟ್) ನೀಡಿದಂತೆ’ ಎಂದು ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಅಚ್ಚು ಹಾಕಿಸಿಕೊಂಡದ್ದಕ್ಕೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಆಲಂತಾಯ ಗ್ರಾಮದ ಮದುಮಗ ಶಿವಪ್ರಸಾದ್ ವಿರುದ್ಧ ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಆರೋಪದಲ್ಲಿ ಚುನಾವಣಾಧಿಕಾರಿ ದಾಖಲಿಸಿದ್ದ ಪ್ರಕರಣಕ್ಕೆ ಹೈಕೋರ್ಟ್ ತಡೆ ನೀಡಿದೆ.
ತಮ್ಮ ವಿರುದ್ಧದ ಪ್ರಕರಣ ರದ್ದುಪಡಿಸಬೇಕು ಎಂದು ಕೋರಿ ಶಿವಪ್ರಸಾದ್ ಹಾಗೂ ಆಮಂತ್ರಣ ಪತ್ರಿಕೆಯ ಮುದ್ರಕ ಎ. ಬಾಲಕೃಷ್ಣ ಸಲ್ಲಿಸಿದ್ದ ಅರ್ಜಿಯು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ಸೋಮವಾರ ವಿಚಾರಣೆಗೆ ಬಂದಿತ್ತು.
ಅರ್ಜಿದಾರರ ಪರ ವಕೀಲ ಎಂ. ವಿನೋದ್ ಕುಮಾರ್ ವಾದ ಮಂಡಿಸಿ, 2024ರ ಮಾರ್ಚ್ 1ರಂದು ಮದುವೆ ಆಹ್ವಾನ ಪತ್ರಿಕೆ ಮುದ್ರಣವಾಗಿದೆ. ಚುನಾವಣೆ ನೀತಿಸಂಹಿತೆ ಜಾರಿಯಾಗಿರುವುದು ಮಾ. 16ರಂದು. ಆಹ್ವಾನಪತ್ರಿಕೆ ಮುದ್ರಣ ಮಾಡಿಸಿದಾಗ ನೀತಿ ಸಂಹಿತೆ ವಿಚಾರವೇ ಇರಲಿಲ್ಲ. ಆದರೂ ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಆರೋಪದಲ್ಲಿ ಪ್ರಜಾಪ್ರತಿನಿಧಿ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದು ಕಾನೂನು ಬಾಹಿರವಾಗಿದೆ. ಆದ್ದರಿಂದ ಪ್ರಕರಣ ರದ್ದುಪಡಿಸಬೇಕು ಎಂದು ಮನವಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್ಬುಕ್ನಲ್ಲಿ ಹಣಕ್ಕೆ ಬೇಡಿಕೆ: ದೂರು
NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ
Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ
Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ
Congress: ಜಮೀರ್ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.