Brahmavara: ಮೃತರ ಮನೆಯವರಿಂದ ದೂರು, ಸಿಐಡಿಯಿಂದ ತನಿಖೆ ಪ್ರಾರಂಭ, ವಿಚಾರಣೆ
ಬ್ರಹ್ಮಾವರದಲ್ಲಿ ಲಾಕ್‌ಅಪ್ ಡೆತ್ ಪ್ರಕರಣ
Team Udayavani, Nov 12, 2024, 6:45 AM IST
ಬ್ರಹ್ಮಾವರ: ಚೇರ್ಕಾಡಿ ಗ್ರಾಮದಲ್ಲಿ ಮಹಿಳೆಗೆ ಕಿರುಕುಳ ನೀಡಿದ ಆರೋಪದಲ್ಲಿ ಬಂದಿಸಲ್ಪಟ್ಟ ಕೇರಳ ಕೊಲ್ಲಂ ಮೂಲದ ಬಿಜು ಯೋಹನ್ (45) ಲಾಕ್‌ಅಪ್ ಡೆತ್ ಹಿನ್ನಲೆಯಲ್ಲಿ ಸೋಮವಾರ ಮೃತರ ಮನೆಯವರು ಠಾಣೆಗೆ ದೂರು ನೀಡಿದ್ದಾರೆ.
ಬಿಜು ಯೋಹನ್ ಮೈ ಮೇಲೆ ಹೊಡೆದ ಗುರುತುಗಳು ಇರುವ ಕಾರಣ ನಿಧನದಲ್ಲಿ ಸಂದೇಹ ಇದೆ. ಈ ಕುರಿತು ಸೂಕ್ತ ತನಿಖೆ ನಡೆಸಿ ನ್ಯಾಯ ಒದಗಿಸಬೇಕೆಂದು ಮೃತರ ಸಹೋದರ ದೂರು ನೀಡಿದ್ದಾರೆ. ಕೇರಳ ಕಲ್ಚರ್ ಮತ್ತು ಸೋಶಿಯಲ್ ಸಂಘ, ಕೇರಳ ಸಮಾಜ ಸಂಘದ ಪದಾಧಿಕಾರಿಗಳು ಪಾರದರ್ಶಕ ತನಿಖೆ ಹಾಗೂ ನ್ಯಾಯಕ್ಕೆ ಮನವಿ ಮಾಡಿದ್ದಾರೆ. ಪ್ರಕರಣ ಕುರಿತು ನ್ಯಾಯಾಧೀಶರು ವಿಚಾರಣೆ ನಡೆಸಿದರು.
ಬಿಜು ಯೋಹನ್ ಕೆಲವು ದಿನಗಳ ಹಿಂದೆಯಷ್ಟೆ ಹಂಗಾರಕಟ್ಟೆಯ ಫ್ಯಾಕ್ಟರಿಯಲ್ಲಿ ಸೂಪರ್‌ವೈಸರ್ ಆಗಿ ಕೆಲಸಕ್ಕೆ ಸೇರಿಕೊಂಡಿದ್ದರು. ಚೇರ್ಕಾಡಿ ಸೂರೆಬೆಟ್ಟಿನಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದು, ಶನಿವಾರ ರಾತ್ರಿ 8 ಗಂಟೆ ಹೊತ್ತಿಗೆ ಸಮೀಪದ ಮನೆಯಲ್ಲಿ ವಾಸವಿದ್ದ ಮಹಿಳೆಗೆ ಕಿರುಕುಳ ನೀಡಿದ್ದ ಎಂದು ಆರೋಪಿಸಲಾಗಿದೆ. ಸಂತ್ರಸ್ತರ ದೂರಿನ ಮೇಲೆ ಬ್ರಹ್ಮಾವರ ಪೊಲೀಸರು ಆರೋಪಿ ಬಿಜು ಯೋಹನ್ ಅವರನ್ನು ವಶಕ್ಕೆ ಪಡೆದಿದ್ದರು. ಕಸ್ಟಡಿಯಲ್ಲಿ ಬೆಳಗಿನ ಜಾವ 3.45ಕ್ಕೆ ಆರೋಪಿ ಅಸ್ವಸ್ಥರಾಗಿದ್ದು, ಅನಂತರ ಮೃತಪಟ್ಟಿದ್ದರು.
ಇಬ್ಬರ ಅಮಾನತು
ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ನಡೆದ ಲಾಕಪ್ ಡೆತ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬ್ರಹ್ಮಾವರ ಠಾಣೆ ಪೊಲೀಸ್ ಉಪನಿರೀಕ್ಷಕ ಮತ್ತು ಹೆಡ್‌ಕಾಸ್ಟೆಬಲ್ ಅವರನ್ನು ಅಮಾನತು ಮಾಡಲಾಗಿದೆ. ಠಾಣಾಧಿಕಾರಿ ಮಧು ಬಿ.ಇ. ಮತ್ತು ಪ್ರಭಾರ ಠಾಣಾಧಿಕಾರಿ ಸುಜಾತಾ ಅವರನ್ನು ಉಡುಪಿ ಜಿಲ್ಲಾ ಎಸ್ಪಿ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.
ಮಾಹಿತಿ ಸಂಗ್ರಹಿಸಿದ ಸಿಐಡಿ ತಂಡ
ಪ್ರಕರಣದ ತನಿಖೆಗೆ ಸೋಮವಾರ ಬೆಂಗಳೂರಿನಿಂದ ಸಿಐಡಿ ಪೊಲೀಸರ ತಂಡ ಆಗಮಿಸಿದೆ. ಬ್ರಹ್ಮಾವರ ಪೊಲೀಸ್ ಠಾಣೆಯಿಂದ ಮಾಹಿತಿ ಸಂಗ್ರಹಿಸಿದ ಸಿಐಡಿ ಪೊಲೀಸರು ಸಮುದಾಯ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ, ಮೃತದೇಹ ಪರಿಶೀಲಿಸಿ, ವೈದ್ಯಾಧಿಕಾರಿಗಳನ್ನು ಭೇಟಿ ಮಾಡಿ ವಿವರಣೆ ಪಡೆದುಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್; ತನಿಖೆ ಚುರುಕು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ
Udupi:ಗೀತಾರ್ಥ ಚಿಂತನೆ 93; ಶ್ರೀಕೃಷ್ಣನಿಗೆ ಶರಣಾದ ಅರ್ಜುನ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Smart meters: ನೀರು ಸಂರಕ್ಷಿಸುವ ವಿಚಾರದಲ್ಲಿ ಕ್ರಾಂತಿ ಮಾಡಿದ ಸ್ಮಾರ್ಟ್ ವಾಟರ್ ಮೀಟರ್
Viral Pics: ಡೇಟಿಂಗ್ ರೂಮರ್ಸ್ ನಡುವೆ ವಿಜಯ್ – ರಶ್ಮಿಕಾ ಸೀಕ್ರೆಟ್ ಲಂಚ್ ಡೇಟ್
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.