Sullia: ಆತ್ಮಹ*ತ್ಯೆಗೆ ಯತ್ನಿಸಿದ್ದ ಯುವಕ ಸಾವು
Team Udayavani, Nov 12, 2024, 10:50 PM IST
ಸುಳ್ಯ: ವ್ಯಾಪಾರ ವ್ಯವಹಾರದಲ್ಲಿ ವಂಚನೆಗೊಳಗಾಗಿ ಮನನೊಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಆಸ್ಪತ್ರೆಯಲ್ಲಿ ಮಂಗಳವಾರ ಮೃತಪಟ್ಟ ಘಟನೆ ನಡೆದಿದೆ.
ಸುಳ್ಯದ ಗಾಂಧಿನಗರ ಅಡಿಕೆ ಅಂಗಡಿಯಲ್ಲಿ ಅಕೌಂಟ್ ವಿಭಾಗದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಮಂಗಳೂರು ಕೊಣಾಜೆ ಸಮೀಪದ ಯುವಕ ಅಭಿಲಾಷ್ ಕಂಬ್ಲಿಪದವು (30) ಮೃತರು. ಮೃತರು ತಂದೆ, ತಾಯಿ, ಪತ್ನಿ, ಸಹೋದರಿಯನ್ನು ಅಗಲಿದ್ದಾರೆ.
ಅಭಿಲಾಷ್ ನ. 5ರಂದು ಮಂಗಳೂರಿನಲ್ಲಿರುವ ತನ್ನ ಮನೆಯಿಂದ ಹಿಂದಿರುಗುವ ಸಂದರ್ಭದಲ್ಲಿ ಕಲ್ಲಡ್ಕದಲ್ಲಿರುವ ಅಂಗಡಿಯೊಂದರಿಂದ ರ್ಯಾಟೋಲ್ ಖರೀದಿಸಿ ವಿಟ್ಲದ ಹೊಟೇಲ್ವೊಂದರಲ್ಲಿ ಸೇವಿಸಿದ್ದರು. ಸ್ಲೋ ಪಾಯಸನ್ ಸೇವಿಸಿದ್ದರಿಂದ ವೈದ್ಯರು ಪರೀಕ್ಷೆ ನಡೆಸಿ ವಿಷ ಪದಾರ್ಥವನ್ನು ಶರೀರದಿಂದ ಹೊರತೆಗೆಯುವ ಚಿಕಿತ್ಸಾ ಕ್ರಮವನ್ನು ಕೈಗೊಂಡಿದ್ದರು. ಆದರೆ ಅವರು ಮಂಗಳವಾರ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಅಭಿಲಾಷ್ ಕೆಲವು ವರ್ಷಗಳ ಹಿಂದೆ ಸುಳ್ಯದಲ್ಲಿ ಖಾಸಗಿ ಟಿವಿ ಚಾನೆಲ್ವೊಂದನ್ನು ನಡೆಸುತ್ತಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.