Thekkatte: ಹುಣ್ಸೆಮಕ್ಕಿ; ಟಿಪ್ಪರ್ ಲಾರಿ ಚಾಲಕನ ಓವರ್ ಟೇಕ್ ಅವಾಂತರ
ಈಚರ್, ಕಾರು, ಪಿಕಪ್ಗೆ ಢಿಕ್ಕಿಯಾದ ಟಿಪ್ಪರ್
Team Udayavani, Nov 12, 2024, 9:11 PM IST
ತೆಕ್ಕಟ್ಟೆ: ಇಲ್ಲಿನ ಹೊಂಬಾಡಿ ಮಂಡಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಹುಣ್ಸೆಮಕ್ಕಿ – ಹಾಲಾಡಿ ಪ್ರಮುಖ ಸಂಪರ್ಕ ರಸ್ತೆಯ ನ್ಯೂ ಪಾರಿಜಾತ ಹೊಟೇಲ್ ಸಮೀಪ ಅತೀ ವೇಗದಿಂದ ಬಂದ ಟಿಪ್ಪರ್ ಲಾರಿ ಚಾಲಕ ಎದುರಿನಲ್ಲಿ ಚಲಿಸುತ್ತಿದ್ದ ಈಚರ್ ವಾಹನ, ಕಾರು ಹಾಗೂ ಪಿಕಪ್ ವಾಹನಕ್ಕೆ ಢಿಕ್ಕಿ ಹೊಡೆದು ಸರಣಿ ಅಪಘಾತ ಸಂಭವಿಸಿದ ಘಟನೆ ನ. 12ರಂದು ಬೆಳಗ್ಗೆ 11.50ರ ಸುಮಾರಿಗೆ ಸಂಭವಿಸಿದೆ.
ಹುಣ್ಸೆಮಕ್ಕಿಯಿಂದ ತೆಕ್ಕಟ್ಟೆ ಕಡೆಗೆ ಅತೀ ವೇಗದಿಂದ ಚಲಿಸುತ್ತಿದ್ದ ಟಿಪ್ಪರ್ ಮೊದಲು ಎದುರಿನಿಂದ ಬರುತ್ತಿದ್ದ ಈಚರ್ ವಾಹನಕ್ಕೆ ಢಿಕ್ಕಿ ಹೊಡೆದು ಅನಂತರ ಮುಂಭಾಗದಲ್ಲಿ ಚಲಿಸುತ್ತಿದ್ದ ಸ್ಯಾಂಟ್ರೋ ಝಿಂಗ್ ಕಾರಿಗೆ ಢಿಕ್ಕಿ ಹೊಡೆದುಕೊಂಡು ಎಳೆದು ಸಾಗಿದ್ದು, ಅದೇ ಸಂದರ್ಭದಲ್ಲಿ ಕೋಟೇಶ್ವರದಿಂದ ಬಿದ್ಕಲ್ಕಟ್ಟೆ ಕಡೆಗೆ ಸಾಗುತ್ತಿದ್ದ ಮಾರುತಿ ಸುಜುಕಿ ಸೂಪರ್ ಕ್ಯಾರಿ ಪಿಕ್ಅಪ್ ವಾಹನಕ್ಕೆ ಢಿಕ್ಕಿ ಹೊಡೆದಿದೆ. ಪರಿಣಾಮ ಕಾರು ಹಾಗೂ ಪಿಕಪ್ ವಾಹನಗಳು ನಜ್ಜುಗುಜ್ಜಾಗಿದೆ. ಪಿಕಪ್ ವಾಹನ ಆಯತಪ್ಪಿ ಚರಂಡಿಗೆ ಉರುಳಿ ಬಿದ್ದಿದೆ. ಈ ಸರಣಿ ಅಪಘಾತದಿಂದ ಯಾರಿಗೂ ಪ್ರಾಣಾಪಾಯವಾಗಿಲ್ಲ.
ಅಪಘಾತದ ದೃಶ್ಯ ಸೆರೆ
ಟಿಪ್ಪರ್ ಚಾಲಕ ಅತಿವೇಗದಿಂದ ಬಂದು ಈಚರ್ ಹಾಗೂ ಸ್ಯಾಂಟ್ರೋ ಝಿಂಗ್ ಕಾರಿಗೆ ಢಿಕ್ಕಿ ಹೊಡೆದು ಎಳೆದೊಯ್ಯುತ್ತಿರುವ ದೃಶ್ಯ ಇಲ್ಲಿನ ಹೊಟೇಲ್ವೊಂದರ ಅಳವಡಿಸಿದ ಸಿಸಿ ಕೆಮರಾದಲ್ಲಿ ಸೆರೆಯಾಗಿದ್ದು, ಅಪಘಾತದ ತೀವ್ರತೆಯನ್ನು ತೋರಿಸುತ್ತಿದೆ.
ಟ್ರಾಫಿಕ್ ಜಾಮ್
ಅಪಘಾತದಿಂದಾಗಿ ಪ್ರಮುಖ ರಸ್ತೆಯಲ್ಲಿ ಕೆಲಕಾಲ ವಾಹನ ಸಂಚಾರಕ್ಕೆ ತೊಂದರೆಯಾಗಿದ್ದು, ಸಂಚಾರ ಪೊಲೀಸರು ವಾಹನಗಳ ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸಿದರು. ಘಟನೆ ಸಂಭವಿಸುತ್ತಿದ್ದಂತೆ ಕೋಟ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
KMC: ನವೀಕೃತ ವೈದ್ಯಕೀಯ ಆಂಕೊಲಾಜಿ ಹೊರರೋಗಿ, ಕಿಮೊಥೆರಪಿ ಡೇ ಕೇರ್ ಕೇಂದ್ರ ಉದ್ಘಾಟನೆ
Kollur; ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್
Naxal Encounter: ದಕ್ಷಿಣ ಭಾರತದಲ್ಲಿ ಇನ್ನುಳಿದಿರುವುದು ಎಂಟೇ ಮಂದಿ ನಕ್ಸಲರು!
Naxal Encounter: ಬಂಧಿತ ಸುರೇಶ್ ಅಂಗಡಿ ಮಾಹಿತಿಯಂತೆ ʼಆಪರೇಷನ್ ವಿಕ್ರಂ ಗೌಡʼ
Naxal Encounter: ನಕ್ಸಲ್ ವಿಕ್ರಂ ಗೌಡ ಅಪಾಯಕಾರಿ ಶಸ್ತ್ರಾಸ್ತ್ರ ಹೊಂದಿದ್ದ: ಡಿಜಿಪಿ
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
KMC: ನವೀಕೃತ ವೈದ್ಯಕೀಯ ಆಂಕೊಲಾಜಿ ಹೊರರೋಗಿ, ಕಿಮೊಥೆರಪಿ ಡೇ ಕೇರ್ ಕೇಂದ್ರ ಉದ್ಘಾಟನೆ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.