Muddebihal: ಕಬ್ಬು ತುಂಬಿದ್ದ ಟ್ರ್ಯಾಕ್ಟರ್ – ಟ್ರ್ಯಾಲಿ ಉರುಳಿ ಬೈಕ್ ಸವಾರ ಮೃತ್ಯು
Team Udayavani, Nov 12, 2024, 9:13 PM IST
ಮುದ್ದೇಬಿಹಾಳ: ಕಬ್ಬನ್ನು ಸಾಗಿಸುತ್ತಿದ್ದ ಟ್ರ್ಯಾಕ್ಟರ್-ಟ್ರ್ಯಾಲಿ ಕಬ್ಬಿನ ರಾಶಿ ಸಮೇತ ಮೇಲೆ ಬಿದ್ದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ಗರಸಂಗಿ ಕ್ರಾಸ್ ಬಳಿ ನ.12ರ ಮಂಗಳವಾರ ಸಂಜೆ ಸುಮಾರು 7 ಗಂಟೆಗೆ ನಡೆದಿದೆ.
ಹಿರೇಮುರಾಳ ಗ್ರಾಮದ ಸಂಗಮೇಶ ಚಲವಾದಿ (35) ಮೃತಪಟ್ಟ ವ್ಯಕ್ತಿ.
ಸಂಗಮೇಶ ಬಾಲಾಜಿ ಸಕ್ಕರೆ ಕಾರ್ಖಾನೆಯಲ್ಲಿ ಜೆಸಿಬಿ ಚಾಲಕನಾಗಿ ಕೆಲಸ ಮಾಡುತ್ತಿದ್ದು, ತನ್ನ ಕೆಲಸ ಮುಗಿದ ನಂತರ ಬೈಕ್ ನಲ್ಲಿ ತನ್ನೂರಿಗೆ ಹೊರಟಿದ್ದರು. ಎದುರಿಗೆ ಕಬ್ಬು ತುಂಬಿದ್ದ ಟ್ರ್ಯಾಕ್ಟರ್ ವೇಗವಾಗಿ ಬರುತ್ತಿರುವುದನ್ನು ಕಂಡು ಬೈಕ್ ಅನ್ನು ಪಕ್ಕದಲ್ಲಿ ನಿಲ್ಲಿಸಿದ್ದ. ಆದರೆ ಆತನ ಹತ್ತಿರ ಬರುತ್ತಿದ್ದಂತೆ ಟ್ರ್ಯಾಕ್ಟರ್ ಎಂಜಿನ್ ಮುಂದಕ್ಕೆ ಚಲಿಸುವಾಗ ಹಿಂಭಾಗದ ಟ್ರ್ಯಾಲಿಗಳು ಕಬ್ಬು ಸಮೇತ ಆಯತಪ್ಪಿ ಆತನ ಮೇಲೆ ಬಿದ್ದಿವೆ.
ಘಟನೆ ನಡೆದ ಕೂಡಲೇ ಇನ್ನೂ ಉಸಿರಾಡುತ್ತಿದ್ದ ಆತನನ್ನು ಹೊರಗೆ ತೆಗೆಯಲು ಸ್ಥಳೀಯರು ಜೆಸಿಬಿ ತರಿಸಲು ಯತ್ನಿಸಿದರೂ ಸಕಾಲಕ್ಕೆ ಜೆಸಿಬಿ ದೊರೆಯದ ಕಾರಣ ಆತ ತೀವ್ರ ನೋವಿನಿಂದ ಒದ್ದಾಡಿ ಸಾವನ್ನಪ್ಪಿದ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಘಟನಾ ಸ್ಥಳಕ್ಕೆ ಮುದ್ದೇಬಿಹಾಳ ಪೊಲೀಸರು ಧಾವಿಸಿ, ಕಾನೂನು ಕ್ರಮ ಕೈಕೊಂಡಿದ್ದಾರೆ.
ಕಾರ್ಖಾನೆಗೆ ಕಬ್ಬು ಹೊತ್ತು ತರುವ ಟ್ರ್ಯಾಕ್ಟರ್ ಗಳ ಚಾಲಕರು ರಸ್ತೆಯಲ್ಲಿ ಬೇಕಾಬಿಟ್ಟಿಯಾಗಿ ಟ್ರ್ಯಾಕ್ಟರ್ ಚಲಾಯಿಸಿಕೊಂಡು ಬರುತ್ತಾರೆ. ಇದನ್ನು ನಿಯಂತ್ರಿಸುವಂತೆ ಪೊಲೀಸರಿಗೆ ಮನವಿ ಮಾಡಿಕೊಂಡಿದ್ದರೂ ಅವರು ನಿರ್ಲಕ್ಷ್ಯ ತೋರಿದ್ದು ಈ ದುರಂತಕ್ಕೆ ಕಾರಣ ಎಂದು ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Old Parliament House: ಭಾರತದ ಸಂವಿಧಾನವು ಜೀವಂತಿಕೆಯ, ಪ್ರಗತಿಪರ ದಾಖಲೆ: ರಾಷ್ಟ್ರಪತಿ
Cleanliness: ಮನೆ ಮನೆಯಿಂದ ದೇಶವೇ ಸ್ವಚ್ಚ
Congress: ದ.ಕ ಗ್ರಾಮ ಪಂಚಾಯತ್; 24ರಲ್ಲಿ 19 ಸ್ಥಾನ ಕಾಂಗ್ರೆಸ್ ಬೆಂಬಲಿತರಿಗೆ ಗೆಲುವು
Siddapura: ಬುಲೆಟ್ ಬೈಕಿಗೆ ಜೆಸಿಬಿ ಡಿಕ್ಕಿ; ಸವಾರರಿಗೆ ಗಾಯ
Moodabidri: ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಪಿ.ನೇಮಿರಾಜ ಹೆಗ್ಡೆ ನಿಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.