Mangaluru: ಪಿಲಿಕುಳದಲ್ಲಿ ನ. 17ರಂದು ಕಂಬಳ ಆಯೋಜನೆ ಇಲ್ಲ
ಹೈಕೋರ್ಟ್‌ಗೆ ರಾಜ್ಯ ಸರಕಾರ ಮಾಹಿತಿ; ನ. 20ಕ್ಕೆ ವಿಚಾರಣೆ ಮುಂದೂಡಿಕೆ
Team Udayavani, Nov 13, 2024, 6:18 AM IST
ಬೆಂಗಳೂರು: ಮಂಗಳೂರು ಸಮೀಪದ ಪಿಲಿಕುಳದ ನಿಸರ್ಗ ಧಾಮದ ಬಳಿ ನ. 17ರಂದು ಕಂಬಳ ಸ್ಪರ್ಧೆ ನಡೆಸುವ ಕುರಿತು ಈವರೆಗೂ ಯಾವುದೇ ನಿರ್ಧಾರವಾಗಿಲ್ಲ ಎಂದು ಹೈಕೋರ್ಟ್‌ಗೆ ರಾಜ್ಯ ಸರಕಾರ ಮಾಹಿತಿ ನೀಡಿದೆ.
ಪಿಲಿಕುಳದ ಕಂಬಳ ಸ್ಪರ್ಧೆಯು ಪ್ರಾಣಿ ಸಂಗ್ರಹಾಲಯದ (ನಿಸರ್ಗ ಧಾಮ) ಸಮೀಪ ನಡೆಲಿರುವುದರಿಂದ ಅಲ್ಲಿನ ಪ್ರಾಣಿಗಳಿಗೆ ಸಮಸ್ಯೆಯಾಗುತ್ತದೆ ಎಂದು ಆಕ್ಷೇಪಿಸಿ “ಪೀಪಲ್ ಫಾರ್ ದಿ ಎಥಿಕಲ್ ಟ್ರೀಟ್‌ಮೆಂಟ್ ಆಫ್ ಅನಿಮಲ್’ (ಪೆಟಾ) ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಮತ್ತು ನ್ಯಾ| ಕೆ.ವಿ. ಅರವಿಂದ್ ಅವರಿದ್ದ ವಿಭಾಗೀಯ ನ್ಯಾಯಪೀಠಕ್ಕೆ ಸರಕಾರ ಮಂಗಳವಾರ ಮಾಹಿತಿ ನೀಡಿತು.
ಅರ್ಜಿದಾರರ ಪರ ಹಿರಿಯ ವಕೀಲ ಧ್ಯಾನ್ ಚಿನ್ನಪ್ಪ, ದಕ್ಷಿಣ ಕನ್ನಡ ಮತ್ತು ಉಡುಪಿಯ ಯಾವುದೇ ಭಾಗದಲ್ಲಿ ಕಂಬಳ ಸ್ಪರ್ಧೆಗೆ ಆಕ್ಷೇಪವಿಲ್ಲ. ಪಿಲಿಕುಳದಲ್ಲಿ ಆಯೋಜನೆಗೂ ಅಭ್ಯಂತರವಿಲ್ಲ. ಆದರೆ ಪ್ರಾಣಿ ಸಂಗ್ರಹಾಲಯದ ಪರಿಸರದಲ್ಲಿ ಆಯೋಜನೆಗೆ ವಿರೋಧವಿದೆ. ಉದ್ದೇಶಿತ ಸ್ಪರ್ಧೆಯು ಪ್ರಾಣಿ ಸಂಗ್ರಹಾಲಯದ ಸಮೀಪ ನಡೆಯುತ್ತಿವುದರಿಂದ ಅಲ್ಲಿರುವ ವನ್ಯಜೀವಿಗಳಿಗೆ ಸಮಸ್ಯೆಯಾಗುತ್ತದೆ. ಈ ಸಂಬಂಧ ಪ್ರಾಣಿ ಸಂಗ್ರಹಾಲಯದ ನಿರ್ದೇಶಕರು ಜಿಲ್ಲಾಧಿಕಾರಿಗೆ ಪತ್ರ ಬರೆದಿದ್ದಾರೆ ಎಂದು ಮಾಹಿತಿ ನೀಡಿದರು.
ಅಡ್ವೊಕೇಟ್ ಜನರಲ್ ಕೆ. ಶಶಿಕಿರಣ್ ಶೆಟ್ಟಿ, ನವೆಂಬರ್ 17ಕ್ಕೆ ಪಿಳಿಕುಳದಲ್ಲಿ ಕಂಬಳ ಸ್ಪರ್ಧೆ ನಡೆಸುವುದು ಇನ್ನೂ ನಿರ್ಧಾರವಾಗಿಲ್ಲ. ಪಿಳಿಕುಳ ಅಭಿವೃದ್ಧಿ ಪ್ರಾಧಿಕಾರದ ಸ್ಥಳದಲ್ಲಿ ಕಂಬಳ ಸ್ಪರ್ಧೆ ಆಯೋಜಿಸಲಾಗುತ್ತದೆ. ಅವರು ವರದಿ ನೀಡಬೇಕು. ದ.ಕ. ಜಿಲ್ಲಾಧಿಕಾರಿ ಕಂಬಳ ಸ್ಪರ್ಧೆಯ ಉಸ್ತುವಾರಿಯಾಗಿರುತ್ತಾರೆ. ಹೀಗಾಗಿ ಅವರನ್ನು ಅರ್ಜಿದಾರರು ಪ್ರಕರಣದಲ್ಲಿ ಪ್ರತಿವಾದಿಗಳನ್ನಾಗಿಸಬೇಕು ಎಂದು ಕೋರಿದರು.
ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ, ಮಂಗಳೂರು ಜಿಲ್ಲಾಧಿಕಾರಿ ಹಾಗೂ ಪಿಲಿಕುಳ ಆಭಿವೃದ್ಧಿ ಪ್ರಾಧಿಕಾರವನ್ನು ಅರ್ಜಿಯಲ್ಲಿ ಪ್ರತಿವಾದಿಯನ್ನಾಗಿ ಸೇರಿಸಲು ಅನುಮತಿಸಿ ವಿಚಾರಣೆಯನ್ನು ನವೆಂಬರ್ 20ಕ್ಕೆ ಮುಂದೂಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ
Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್
Karnataka Lokayukta: ನಾಲ್ವರಿಗೆ ಲೋಕಾ ಶಾಕ್: 27 ಕೋಟಿ ರೂ. ಆಸ್ತಿ ಪತ್ತೆ
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.