Maha Election; ಚು.ಆಯೋಗದಿಂದ ಉದ್ಧವ್ ಠಾಕ್ರೆ ಬ್ಯಾಗ್ ಪರಿಶೀಲನೆ, ವಿವಾದ
Team Udayavani, Nov 12, 2024, 11:35 PM IST
ಮುಂಬಯಿ: ಮಹಾರಾಷ್ಟ್ರ ಮಾಜಿ ಸಿಎಂ ಮತ್ತು ಶಿವಸೇನೆ (ಯುಬಿಟಿ) ನಾಯಕ ಉದ್ಧವ್ ಠಾಕ್ರೆ ಅವರ ಬ್ಯಾಗ್ಗಳನ್ನು ಯವತ್ಮಾಳ್ನಲ್ಲಿ ಪರಿಶೀಲನೆ ನಡೆಸಿದ್ದಾರೆ. ಅದಕ್ಕೆ ಅವರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಅವರು ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋಗಳನ್ನೂ ಅಪ್ಲೋಡ್ ಮಾಡಿದ್ದಾರೆ.
ಈ ಪ್ರಕರಣ ಮಂಗಳವಾರ ರಾಜಕೀಯ ಬಣ್ಣ ಪಡೆದುಕೊಂಡಿದ್ದು, “ಮಹಾಯುತಿ ನಾಯಕರ ಬ್ಯಾಗ್ಗಳನ್ನು ಆಯೋಗದ ಅಧಿಕಾರಿಗಳು ಏಕೆ ಪರಿಶೀಲಿಸುತ್ತಿಲ್ಲ. ಅವರು ಬ್ಯಾಗ್ನಲ್ಲಿ ಒಳವಸ್ತ್ರ ಮಾತ್ರ ಕೊಂಡೊಯ್ಯುತ್ತಾರಾ ಎಂದು ಸಂಸದ ಸಂಜಯ ರಾವತ್ ಪ್ರಶ್ನಿಸಿದ್ದಾರೆ. ಜತೆಗೆ ಮಹಾರಾಷ್ಟ್ರಕ್ಕೆ ಬರುವ ಪ್ರಧಾನಿ ಮೋದಿ ಹಾಗೂ ಅಮಿತ್ ಶಾ ಅವರ ಬ್ಯಾಗನ್ನು ಪರಿಶೀಲನೆ ಮಾಡು ತ್ತೀರಾ ಎಂದು ಪ್ರಶ್ನಿಸಿದ್ದರು. ಆಪ್ ನಾಯಕರೂ ಕೂಡ ಬೆಳವಣಿಗೆಯನ್ನು ಖಂಡಿಸಿ ದ್ದಾರೆ.
ನಿಯಮದಂತೆ ನಡೆದುಕೊಂಡಿದ್ದೇವೆ: ಉದ್ಧವ್ ಠಾಕ್ರೆ ಅವರ ಬ್ಯಾಗ್ ಪರಿಶೀಲನೆಗೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ಚುನಾವಣ ಆಯೋಗ ನಾವು ಕಾನೂನಿನ ಪ್ರಕಾರ ನಡೆದುಕೊಂಡಿದ್ದೇವೆ. ಮತದಾರರನ್ನು ಸೆಳೆಯಲು ಉಡುಗೊರೆ ಕೊಡು ವುದನ್ನು ತಪ್ಪಿಸಲು ನಿಯಮಿತವಾಗಿ ಇಂತಹ ಪರಿಶೀಲನೆಗಳು ನಡೆಯುತ್ತಿರುತ್ತವೆ ಎಂದು ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ
Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…
MUST WATCH
ಹೊಸ ಸೇರ್ಪಡೆ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ,ಮಗಳು
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.