Controversy: ಅಂಬೇಡ್ಕರ್ ಇಸ್ಲಾಂ ಸ್ವೀಕಾರ ವಿಚಾರ: ಖಾದ್ರಿ ಹೇಳಿಕೆಗೆ ಬಿಜೆಪಿ ಆಕ್ರೋಶ
ಇಸ್ಲಾಂ ಧರ್ಮದ ಗುಣವನ್ನು ಅಂಬೇಡ್ಕರ್ ಬಹಳ ಹಿಂದೆಯೇ ಬಣ್ಣಿಸಿದ್ದಾರೆ: ವಿಪಕ್ಷ ನಾಯಕ ಆರ್.ಅಶೋಕ್
Team Udayavani, Nov 13, 2024, 7:25 AM IST
ಬೆಂಗಳೂರು: ಡಾ.ಬಿ.ಆರ್.ಅಂಬೇಡ್ಕರ್ ಅವರು ಇಸ್ಲಾಂ ಧರ್ಮ ಸ್ವೀಕರಿಸಲು ಸಿದ್ಧರಾಗಿದ್ದರು ಎಂದು ಕಾಂಗ್ರೆಸ್ ನಾಯಕ ಅಜ್ಜಂಪೀರ್ ಖಾದ್ರಿ ನೀಡಿರುವ ಹೇಳಿಕೆ ವಿವಾದಕ್ಕೆ ಕಾರಣವಾಗಿದ್ದು, ಬಿಜೆಪಿ ಪಾಳಯ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.
ವಿಪಕ್ಷ ನಾಯಕ ಆರ್.ಅಶೋಕ್, ಛಲವಾದಿ ನಾರಾಯಣಸ್ವಾಮಿ ಈ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಖಾದ್ರಿ ಕ್ಷಮೆಯಾಚನೆಗೆ ಆಗ್ರಹಿಸಿದ್ದಾರೆ.
ಅಂಬೇಡ್ಕರ್ ಅವರು ಇಸ್ಲಾಂ ಧರ್ಮ ಸ್ವೀಕರಿಸುವುದು ದೂರದ ಮಾತು. ಅವರಿಗೆ ಇಸ್ಲಾಂ ಧರ್ಮದ ಬಗ್ಗೆ ಇದ್ದ ಅಭಿಪ್ರಾಯ ಎಂಥದ್ದು ಎನ್ನುವುದನ್ನ ಕಾಂಗ್ರೆಸ್ ನಾಯಕರು ಒಮ್ಮೆ ಓದಿಕೊಳ್ಳಬೇಕು. ಇಸ್ಲಾಂಗೆ ತಲೆ ಎತ್ತುವ ಅವಕಾಶ ಸಿಕ್ಕಾಗಲೆಲ್ಲ ಇನ್ನೊಂದು ಸಂಸ್ಕೃತಿಯನ್ನು ನಾಶ ಮಾಡಿದೆ. ಇಸ್ಲಾಂ ಜೊತೆ ಒಂದು ದೇಶದೊಳಗೆ ನೆಮ್ಮದಿಯಾಗಿರಲು ಸಾಧ್ಯವಿಲ್ಲ ಎಂದು ಇಸ್ಲಾಂ ಧರ್ಮದ ಗುಣವನ್ನು ಅಂಬೇಡ್ಕರ್ ಅವರು ಬಹಳ ಹಿಂದೆಯೇ ಸ್ಪಷ್ಟವಾಗಿ ಬಣ್ಣಿಸಿದ್ದಾರೆ ಎಂದು ಆರ್.ಅಶೋಕ್ ಹೇಳಿದರು.
ಅಜ್ಜಂ ಪೀರ್ ಖಾದ್ರಿ ಮೊದಲು ಏನಾಗಿದ್ದರು ಎಂದು ಕೇಳಿ. ಅವರೂ ಮೊದಲು ಹಿಂದೂನೇ ಆಗಿದ್ದರು. ಅಂಬೇಡ್ಕರ್ ಹಿಂದುತ್ವದ ವಿರೋಧಿ ಆಗಿರಲಿಲ್ಲ. ಆದರೆ ಹಿಂದೂ ಧರ್ಮದಲ್ಲಿ ಕೆಲ ನ್ಯೂನತೆಗಳಿವೆ, ಸರಿಪಡಿಸಿ ಅಂದಿದ್ದರು. ಹಿಂದೂ ಧರ್ಮ ವಿರೋಧಿಸಿ ಅವರು ಬೌದ್ಧ ಧರ್ಮಕ್ಕೆ ಸೇರಲಿಲ್ಲ, ನ್ಯೂನತೆಗಳನ್ನು ವಿರೋಧಿಸಿ ಹೋದರು ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ
C.P.Yogeshwara; ಜಮೀರ್ ಹೇಳಿಕೆ ಪರಿಣಾಮ…: ಸೋಲಿನ ಆತಂಕ ಹೊರ ಹಾಕಿದ ಸೈನಿಕ?!
CTRavi; ಯಾರು,ಯಾರನ್ನು,ಯಾವಾಗ ಖರೀದಿಸಲು ಪ್ರಯತ್ನಿಸಿದ್ದಾರೆ?: ಸಿಎಂಗೆ ಸಿ.ಟಿ.ರವಿ ಪ್ರಶ್ನೆ
Belagavi: ಸಿಎಂ ಮುಟ್ಟೋಕೆ ಆಗುತ್ತಾ…: ಸಿದ್ದರಾಮಯ್ಯ ಹೇಳಿಕೆಗೆ ವ್ಯಂಗ್ಯವಾಡಿದ ಸೋಮಣ್ಣ
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.