Viral: ಜನಪ್ರಿಯ ಟಿಕ್ ಟಾಕ್ ತಾರೆಯ ಖಾಸಗಿ ವಿಡಿಯೋ ಲೀಕ್.. ಭಾರೀ ವೈರಲ್
Team Udayavani, Nov 13, 2024, 3:29 PM IST
ಕರಾಚಿ: ಜನಪ್ರಿಯ ಟಿಕ್ ಟಾಕ್ ಸ್ಟಾರ್ ( TikTok star) ಒಬ್ಬರ ಖಾಸಗಿ ಕ್ಷಣದ ವಿಡಿಯೋಗಳು (Private Video) ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ.
ಪಾಕಿಸ್ತಾನದ 23 ವರ್ಷದ ಟಿಕ್‌ಟಾಕ್ ತಾರೆ ಇಮ್ಶಾ ರೆಹಮಾನ್ (Imsha Rehman) ಅವರ ಖಾಸಗಿ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ. ಪರಿಣಾಮ ಮುಜುಗರಕ್ಕೆ ಒಳಗಾದ ಇಮ್ಶಾ ತಮ್ಮ ಟಿಕ್ ಟಾಕ್ ಹಾಗೂ ಸೋಶಿಯಲ್ ಮೀಡಿಯಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ದಾರೆ.
ಭಾರತದಲ್ಲಿ ಇಮ್ಶಾ ರೆಹಮಾನ್ ಅವರ ವಿಚಾರ ಟ್ರೆಂಡ್ ಆಗಿದೆ. ಇಮ್ಶಾ ರೆಹಮಾನ್ ವೈರಲ್ ವಿಡಿಯೋ ಎನ್ನುವುದನ್ನು ಭಾರತದಲ್ಲಿ ಅತೀ ಹೆಚ್ಚು ಮಂದಿ ಗೂಗಲ್ ಮಾಡಿ ಸರ್ಚ್ ಮಾಡಿದ್ದಾರೆ. ಪಾಕಿಸ್ತಾನ ಮಾತ್ರವಲ್ಲದೆ ಭಾರತದಲ್ಲಿ ಅವರಿಗೂ ಅಪಾರ ಫಾಲೋವರ್ಸ್ ಗಳಿರುವುದು ಇದಕ್ಕೆ ಕಾರಣವಾಗಿದೆ.
ಇಮ್ಶಾ ತನ್ನ ಗೆಳೆಯನ ಜತೆ ಕಳೆದಿರುವ ಖಾಸಗಿ ಕ್ಷಣದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಲೀಕ್ ಆಗಿದೆ. ಈ ವಿಡಿಯೋ ವಾಟ್ಸಾಪ್ ಗ್ರೂಪ್ ಸೇರಿದಂತೆ ಇತರೆ ಮಾಧ್ಯಮಗಳಲ್ಲಿ ಭಾರೀ ವೈರಲ್ ಆಗಿದೆ.
ನೆಟ್ಟಿಗರು ಇಮ್ಶಾ ಅವರು ಉದ್ದೇಶಪೂರ್ವಕವಾಗಿ ಇದನ್ನು ಲೀಕ್ ಮಾಡಿದ್ದಾರೆ. ಅವರಿಗೆ ಹೆಚ್ಚಿನ ಸಂಖ್ಯೆಯಲ್ಲಿ ಫಾಲೋವರ್ಸ ಬರುವ ನಿಟ್ಟಿನಲ್ಲಿ ಈ ರೀತಿ ಮಾಡಿದ್ದಾರೆ ಎಂದು ಕಮೆಂಟ್ ಮಾಡಿದ್ದಾರೆ.
ಇದುವರೆಗೆ ವಿಡಿಯೋ ಲೀಕ್ ಮಾಡಿದ್ದು ಯಾರು ಎನ್ನುವ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ಯಾರೋ ಬೇಕಂತಲೇ ಇದನ್ನು ಲೀಕ್ ಮಾಡಿದ್ದಾರೆ ಎನ್ನಲಾಗಿದೆ. ಸೈಬರ್ ವಂಚರ ಕೈವಾಡದಿಂದ ಈ ಕೃತ್ಯ ನಡೆದಿದೆ ಎನ್ನಲಾಗಿದೆ.
ಇಮ್ಶಾ ಅವರ ಪರವಾಗಿ ಕೆಲವರು ನಿಂತಿದ್ದು, ಇಂಟರ್ ನೆಟ್ ಯುಗ ಅತ್ಯಂತ ಅಪಾಯಕಾರಿ ಯಾವ ಕ್ಷಣದಲ್ಲಿ ಬೇಕಾದರೂ ನಮ್ಮ ಗೌಪ್ಯತೆಗೆ ಹಾನಿ ಆಗಬಹುದೆಂದು ಕಮೆಂಟ್ ಮಾಡಿದ್ದಾರೆ.
ವಿಡಿಯೋ ಲೀಕ್‌ನಿಂದ ಮನನೊಂದಿರುವ ಇಮ್ಶಾ ತಮ್ಮ ಟಿಕ್ ಟಾಕ್ ಹಾಗೂ ಇನ್ಸ್ಟಾಗ್ರಾಮ್ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ದಾರೆ. ಎಲ್ಲಿಯವರೆಗೆ ವಿಡಿಯೋ ವೈರಲ್ ಆಗಿರುತ್ತದೆ. ಅಲ್ಲಿಯವರೆಗೆ ನನ್ನ ಅಕೌಂಟ್ ಐಡಿ ಆಫ್ ಮಾಡಿ ಇಡುತ್ತೇನೆ ಎಂದು ಇಮ್ಶಾ ಬರೆದುಕೊಂಡಿರುವ ಸ್ಕ್ರೀನ್ ಶಾಟ್ ವೈರಲ್ ಆಗಿದೆ.
ಈ ಹಿಂದೆ ಪಾಕಿಸ್ತಾನದ ಮಿನಾಹಿಲ್ ಮಲಿಕ್ ಎಂಬ ಸೋಶಿಯಲ್ ಮೀಡಿಯಾ ಪ್ರಭಾವಿಯ ವಿಡಿಯೋ ಕೂಡ ಸಾಮಾಜಿಕ ಜಾಲತಾಣದಲ್ಲಿ ಲೀಕ್ ಆಗಿತ್ತು. ಇದು ಫೇಕ್ ವಿಡಿಯೋವೆಂದು ಮಿನಾಹಿಲ್ ಮಲಿಕ್ ದೂರು ದಾಖಲಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chrome Browser: ಗೂಗಲ್ ಸರ್ಚ್ ಎಂಜಿನ್ ಕ್ರೋಮ್ ಮಾರಾಟ?
ವಾಯುವ್ಯ ಅಮೆರಿಕಕ್ಕೆ ಅಪ್ಪಳಿಸಿದ ಬಾಂಬ್ ಸೈಕ್ಲೋನ್, 6 ಲಕ್ಷ ಮನೆಗಳಿಗೆ ವಿದ್ಯುತ್ ಕಡಿತ
Pakistan;ಬಲೂಚಿಸ್ಥಾನದಲ್ಲಿ ಉಗ್ರರ ವಿರುದ್ಧ ಸಮಗ್ರ ಕಾರ್ಯಾಚರಣೆಗೆ ಮುಂದಾದ ಪಾಕ್
Modi; 56 ವರ್ಷಗಳಲ್ಲಿ ಗಯಾನಾಗೆ ಭೇಟಿ ನೀಡಿದ ಮೊದಲ ಭಾರತೀಯ ಪ್ರಧಾನಿ
‘New Phase’ of War: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುತಿನ್ ಅಣ್ವಸ್ತ್ರ ದಾಳಿ ಎಚ್ಚರಿಕೆ!
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ
Tulu Movie: ಎರಡು ಭಾಗದಲ್ಲಿ ಬರುತ್ತಿದೆ ತುಳು ಸಿನಿಮಾ; ಹೊಸಚಿತ್ರಕ್ಕೆ ಮುಹೂರ್ತ
Kollywood: ಧನುಷ್ – ಐಶ್ವರ್ಯಾ ವಿಚ್ಚೇದನ ಪ್ರಕರಣ; ನ.27ಕ್ಕೆ ಅಂತಿಮ ತೀರ್ಪು
Kollur; ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್
Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.