High Court; ಸತೀಶ್ ಸೈಲ್ ಸೇರಿ ಇತರರಿಗೆ ರಿಲೀಫ್: ನಾಳೆ ಬಿಡುಗಡೆ ಸಾಧ್ಯತೆ
ಬೇಲೆಕೇರಿ ಬಂದರಿನಿಂದ ಅಕ್ರಮವಾಗಿ ಅದಿರು ಸಾಗಣೆ ಪ್ರಕರಣದ ಶಿಕ್ಷೆ ಅಮಾನತು
Team Udayavani, Nov 13, 2024, 4:22 PM IST
ಬೆಂಗಳೂರು: ಬೇಲೆಕೇರಿ ಬಂದರಿನಿಂದ ಅಕ್ರಮವಾಗಿ ಅದಿರು ಸಾಗಣೆ ಮತ್ತು ಮಾರಾಟಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಕಾರವಾರ ಶಾಸಕ ಸತೀಶ್ ಸೈಲ್ ಹಾಗೂ ಇತರೆ ಆರೋಪಿಗಳಿಗೆ ವಿಧಿಸಿರುವ ಶಿಕ್ಷೆಯನ್ನು ಅಮಾನತ್ತಿನಲ್ಲಿಡಲು ಹೈಕೋರ್ಟ್ ಬುಧವಾರ (ನ)ಆದೇಶ ನೀಡಿದೆ.
ನ್ಯಾ. ಎಂ. ನಾಗಪ್ರಸನ್ನ ಅವರಿದ್ದ ಪೀಠ ಆದೇಶ ನೀಡಿದ್ದು, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಿಧಿಸಿರುವ ದಂಡದ ಮೊತ್ತದಲ್ಲಿ ಶೇ 25 ರಷ್ಟು ಕೋರ್ಟ್ ನಲ್ಲಿ ಠೇವಣಿ ಇಡುವಂತೆ ಷರತ್ತು ವಿಧಿಸಿದೆ. 6 ವಾರದಲ್ಲಿ ಠೇವಣಿ ಇಡುವಂತೆ ಅಪರಾಧಿಗಳಿಗೆ ಸೂಚಿಸಿ ಶಿಕ್ಷೆ ಅಮಾನತು ಮಾಡಿದೆ. ನಾಳೆ(ಗುರುವಾರ) ಆರೋಪಿಗಳು ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ.
ಶಿಕ್ಷೆ ರದ್ದು ಪಡಿಸುವಂತೆ ಸೈಲ್ , ಉದ್ಯಮಿಗಳಾದ ಸ್ವಸ್ತಿಕ್ ನಾಗರಾಜ್, ಕೆವಿಎನ್ ಗೋವಿಂದರಾಜ್ ಮತ್ತು ಚೇತನ್ ಶಾ ಪ್ರತ್ಯೇಕ ಅರ್ಜಿಗಳನ್ನು ಸಲ್ಲಿಸಿದ್ದರು. ಹೈಕೋರ್ಟ್ ಸಿಬಿಐಗೆ ನೋಟಿಸ್ ಕೂಡ ಜಾರಿ ಮಾಡಿತ್ತು.
ಮೆಸರ್ಸ್ ಮಲ್ಲಿಕಾರ್ಜುನ್ ಶಿಪ್ಪಿಂಗ್ ಪ್ರೈ ಲಿಮಿಟೆಡ್ ಮತ್ತು ಅದರ ಮಾಲಕ ಸತೀಶ್ ಸೈಲ್ ಪ್ರತ್ಯೇಕವಾಗಿ ಸಲ್ಲಿಸಿರುವ 6 ಅರ್ಜಿಗಳು, ಉದ್ಯಮಿಗಳಾದ ಸ್ವಸ್ತಿಕ್ ನಾಗರಾಜ್, ಕೆವಿಎನ್ ಗೋವಿಂದರಾಜ್ ಮತ್ತು ಚೇತನ್ ಶಾ ಹಾಗೂ ಆಶಾಪುರ ಮೈನೆcಮ್ ಲಿಮಿಟೆಡ್, ಶ್ರೀ ಲಕ್ಷ್ಮೀ ವೆಂಕಟೇಶ್ವರ ಮಿನರಲ್ಸ್ ಸಲ್ಲಿಸಿರುವ ಪ್ರತ್ಯೇಕ ಅರ್ಜಿಗಳ ವಿಚಾರಣೆಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿ ಅಂತಿಮವಾಗಿ ಪ್ರಕರಣಕ್ಕೆ ಸಂಬಂಧಿಸಿದ ಇತರ 2ಪ್ರಕರಣಗಳಲ್ಲಿ ತೀರ್ಪು ನೀಡಿದೆ.
ಏನಿದು ಪ್ರಕರಣ?
ಅಂಕೋಲಾ ತಾಲೂಕಿನ ಬೇಲೆಕೇರಿ ವ್ಯಾಪ್ತಿಯಲ್ಲಿ 2009- 2010ರ ಅವಧಿಯಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿದ್ದ ಮಾಹಿತಿ ಮೇರೆಗೆ ಅರಣ್ಯಾಧಿಕಾರಿಗಳು ದಾಳಿ ನಡೆಸಿ, 200 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಸುಮಾರು 11,312 ಮೆಟ್ರಿಕ್ ಟನ್ ಕಬ್ಬಿಣದ ಅದಿರನ್ನು ಜಪ್ತಿ ಮಾಡಿದ್ದರು. ಈ ಅದಿರನ್ನು ಬೇಲೆಕೇರಿ ಬಂದರಿನ ಅಧಿಕಾರಿ ಮಹೇಶ್ ಬಿಳಿಯ ಅವರ ಸುಪರ್ದಿಗೆ ನೀಡಿದ್ದರು. ಆದರೆ ಮಹೇಶ್ ಬಿಳಿಯ, ಶಾಸಕ ಸತೀಶ್ ಸೈಲ್ ಹಾಗೂ ಇತರ ಆರೋಪಿಗಳು ಈ ಅದಿರು ಕಳವು ಮಾಡಲು ಒಳ ಸಂಚು ರೂಪಿಸಿದ್ದರು ಎಂದು ಆರೋಪಿಸಲಾಗಿತ್ತು. ಆರೋಪಿಗಳ ಪೈಕಿ ಕೆಲವರು ಸತೀಶ್ ಸೈಲ್‌ಗೆ ಕಡಿಮೆ ಮೊತ್ತಕ್ಕೆ ಜಪ್ತಿ ಮಾಡಿದ ಅದಿರನ್ನು ಮಾರಾಟ ಮಾಡಿದ್ದರು. ಇನ್ನು ಸತೀಶ್ ಸೈಲ್ ಪ್ರತ್ಯೇಕವಾಗಿ ತಮ್ಮ ಕಂಪೆನಿಗಳ ಮೂಲಕ ಅದಿರನ್ನು ವಿದೇಶಕ್ಕೆ ರಫ್ತು ಮಾಡಿದ್ದರು ಎನ್ನಲಾಗಿದೆ.
ಶಾಸಕ ಸತೀಶ್ ಸೈಲ್ ಮತ್ತು ಅಂದಿನ ಬಂದರು ಅಧಿಕಾರಿ ಮಹೇಶ್ ಬಿಳಿಯ ಸೇರಿ 7 ಮಂದಿ ದೋಷಿಗಳು ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ನೀಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Channaptna Result: ಕೊನೆ ಕ್ಷಣದಲ್ಲಿ ಪಕ್ಷ ಬದಲಿಸಿದರೂ ಗೆದ್ದ ಸೈನಿಕ: ನೆರವಾದ ಡಿಕೆ ತಂತ್ರ
Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್: ಇಲ್ಲಿದೆ ಮತಎಣಿಕೆಯ ಪೂರ್ಣವಿವರ
Karnataka By Poll Results: ಜೆಡಿಎಸ್ ಅಂತಿಮ ದಿನ ಎಣಿಸತೊಡಗಿದೆ: ಸಿ.ಪಿ.ಯೋಗೇಶ್ವರ್
By Poll: ಇಬ್ಬರು ಮಾಜಿ ಸಿಎಂಗಳ ಪುತ್ರರಿಗೂ ಸೋಲಿನ ರುಚಿ ತೋರಿಸಿದ ಮತದಾರ; ಎಡವಿದ್ದೆಲ್ಲಿ?
Karnataka Bypoll Results:ಮೂರು ಕ್ಷೇತ್ರಗಳಲ್ಲೂ “ಕೈ” ಮೇಲುಗೈ, ಬಿಜೆಪಿ ಮೈತ್ರಿಗೆ ಮುಖಭಂಗ
MUST WATCH
ಹೊಸ ಸೇರ್ಪಡೆ
UV Fusion: ಅಂದು ಇಂದು- ಮಕ್ಕಳೆಲ್ಲ ಈಗ ಮಾಡ್ರನೈಸ್ಡ್
By Polls Result: ಪ್ರತಿಪಕ್ಷಗಳ ಸುಳ್ಳು ಆರೋಪಕ್ಕೆ ಜನಾದೇಶದ ಉತ್ತರ: ಖಂಡ್ರೆ
Channaptna Result: ಕೊನೆ ಕ್ಷಣದಲ್ಲಿ ಪಕ್ಷ ಬದಲಿಸಿದರೂ ಗೆದ್ದ ಸೈನಿಕ: ನೆರವಾದ ಡಿಕೆ ತಂತ್ರ
Kambala ಋತುವಿನ ಪ್ರಥಮ ಕಂಬಳ; ಕೊಡಂಗೆ ವೀರ-ವಿಕ್ರಮ ಜೋಡುಕರೆ ಬಯಲು ಕಂಬಳಕ್ಕೆ ಚಾಲನೆ
Wayanad Results 2024:ವಯನಾಡ್ ನಲ್ಲಿ ಪ್ರಿಯಾಂಕಾಗೆ 3.68 ಲಕ್ಷಕ್ಕೂ ಅಧಿಕ ಮತಗಳ ಮುನ್ನಡೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.