Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!
ಕುರ್ಚಿ, ಟೇಬಲ್, ಕಂಪ್ಯೂಟರ್ ಹೊತ್ತೂಯ್ದ ಸಂತ್ರಸ್ತರು
Team Udayavani, Nov 13, 2024, 11:25 PM IST
ಚಿಕ್ಕಬಳ್ಳಾಪುರ: ಭೂ ಸ್ವಾಧೀನಕ್ಕೆ ಸೂಕ್ತ ಪರಿಹಾರ ಕೊಡದ ಹಿನ್ನೆಲೆಯಲ್ಲಿ ಜಿಲ್ಲೆಯ ಬಾಗೇಪಲ್ಲಿ ಹಿರಿಯ ಸಿವಿಲ್ ನ್ಯಾಯಾಲಯದ ಆದೇಶದ ಮೇರೆಗೆ ಜಿಲ್ಲಾ ಕೇಂದ್ರದಲ್ಲಿರುವ ಉಪ ವಿಭಾಗಾಧಿಕಾರಿಗಳ ಕಚೇರಿಯ ಕಂಪ್ಯೂಟರ್ ಸೇರಿ ಪೀಠೊಪಕರಣಗಳನ್ನು ಭೂಮಿ ಕಳೆದುಕೊಂಡ ಸಂತ್ರಸ್ತರೇ ಕಚೇರಿಗೆ ಬಂದು ಜಪ್ತಿ ಮಾಡಿದ ಅಪರೂಪದ ಪ್ರಸಂಗ ಬುಧವಾರ ನಗರದಲ್ಲಿ ನಡೆಯಿತು.
ಬಾಗೇಪಲ್ಲಿ ರಸ್ತೆ ಅಗಲೀಕರಣಕ್ಕೆ 2009ರಲ್ಲಿ ಭೂ ಸ್ವಾಧೀನಪಡಿಸಿಕೊಂಡಿದ್ದು, ಸಂತ್ರಸ್ತರಿಗೆ ಪರಿಹಾರ ವಿತರಿಸಲು ನ್ಯಾಯಾಲಯ ಆದೇಶಿಸಿದ್ದರೂ, ಉಪ ವಿಭಾಗಾಧಿಕಾರಿಗಳ ಕಚೇರಿ ವಿತರಿಸಿರಲಿಲ್ಲ. ಈ ಹಿನ್ನೆಲೆಯಲ್ಲಿ ಬಾಗೇಪಲ್ಲಿ ಸ್ಥಳೀಯ ನ್ಯಾಯಾಲಯದ ಆದೇಶದಂತೆ ದೂರುದಾರರು ಕಚೇರಿಗೆ ಜಪ್ತಿ ಆದೇಶದೊಂದಿಗೆ ಬೆಳಗ್ಗೆ ಆಗಮಿಸಿ ಅಧಿಕಾರಿ, ಸಿಬಂದಿ ಕೂರುವ ಎಲ್ಲ ಕುರ್ಚಿ, ಟೇಬಲ್, ಕಂಪ್ಯೂಟರ್‌ಗಳನ್ನು ತೆಗೆದುಕೊಂಡು ಹೊರಬಂದರು.
ಒಂದಡಿಗೆ 895 ರೂ.
2009ರಲ್ಲಿ ಅಡಿಗೆ ಕೇವಲ 240 ರೂ. ಪರಿಹಾರ ನಿಗದಿಗೊಳಿಸಿದ್ದನ್ನು ಜಿಲ್ಲಾ ನ್ಯಾಯಾಲಯದಲ್ಲಿ 7 ಮಂದಿ ಪ್ರಶ್ನಿಸಿದ್ದರು. ಪ್ರಕರಣ ಬಾಗೇಪಲ್ಲಿ ಪಟ್ಟಣದ ಹಿರಿಯ ಸಿವಿಲ್ ನ್ಯಾಯಾಲಯಕ್ಕೆ ವರ್ಗಾವಣೆಗೊಂಡು ಒಂದಡಿಗೆ 895 ರೂ. ನಿಗದಿಪಡಿಸಲಾಗಿತ್ತು. ಪರಿಹಾರ ವಿತರಿಸುವಂತೆ ಭೂಸ್ವಾಧೀನ ಅಧಿಕಾರಿಯಾಗಿದ್ದ ಚಿಕ್ಕಬಳ್ಳಾಪುರ ಉಪ ವಿಭಾಗಾಧಿಕಾರಿಗಳಿಗೆ ಕೋರ್ಟ್ ಆದೇಶಿಸಿತ್ತು. ಆದರೆ, ಪರಿಹಾರವೂ ನೀಡಿರಲಿಲ್ಲ, ವಿಚಾರಣೆಗೂ ಹಾಜರಾಗಿರಲಿಲ್ಲ. ಆದ್ದರಿಂದ ನ್ಯಾಯಾಲಯ ಉಪ ವಿಭಾಗಾಧಿಕಾರಿಗಳ ಕಚೇರಿಯನ್ನೇ ಜಪ್ತಿ ಮಾಡಲು ಆದೇಶಿಸಿದ್ದರ ಮೇರೆಗೆ ಸಂತ್ರಸ್ತರು ಪೀಠೊಪಕರಣ ಜಪ್ತಿ ಮಾಡಿಕೊಂಡದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chintamani: ಭೀಕರ ಅಪಘಾತ; ಬಸ್ ಚಕ್ರದ ಕೆಳಗೆ ಬೈಕ್ ಸಿಲುಕಿ ದಂಪತಿ ಸಾವು
Chikkaballapura: ಕಾರಿನಲ್ಲಿ ಸಾಗಿಸುತ್ತಿದ್ದ 7.20 ಲಕ್ಷ ರೂ. ಮೌಲ್ಯದ ಗಾಂಜಾ ವಶ
Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್: ಆರ್. ಅಶೋಕ್ ಆರೋಪ
Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ
Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
TAMATE MOVIE: ಟೀಸರ್‌ನಲ್ಲಿ ತಮಟೆ ಸದ್ದು
Sirasi: ಭಾರತಕ್ಕೆ ಆಮದಾಗುವ ಅಕ್ರಮ ಅಡಿಕೆಗಳಿಗೆ ತಡೆಯೊಡ್ಡಿ; ಬೆಳೆಗಾರರ ಪ್ರತಿನಿಧಿಗಳ ನಿಯೋಗ
Jalandhara Kannada Movie: ಜಲಂಧರ ಮೇಲೆ ಪ್ರಮೋದ್ ಕಣ್ಣು
Rishab Shetty: ʼಜೈ ಹನುಮಾನ್ʼ ಬಳಿಕ ಮತ್ತೊಂದು ತೆಲುಗು ಸಿನಿಮಾದಲ್ಲಿ ರಿಷಬ್ ಶೆಟ್ಟಿ?
Kambala: ಶಿರ್ವ ನಡಿಬೆಟ್ಟು ಸಾಂಪ್ರದಾಯಿಕ ಜೋಡುಕರೆ ಕಂಬಳ ಸಂಪನ್ನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.