Assembly Election: “ಮಹಾ’ ಅಖಾಡದಲ್ಲಿ ಕರುನಾಡ ನಾಯಕರ ಹವಾ!

ಸಿಎಂ, ಡಿಸಿಎಂ ಸೇರಿ ಕಾಂಗ್ರೆಸ್‌ ನಾಯಕರ ದಂಡು ; ಗಡಿ ಭಾಗದ ನಾನಾ ಜಿಲ್ಲೆಗೆ ಬಿಜೆಪಿ ಮುಖಂಡರ ಲಗ್ಗೆ

Team Udayavani, Nov 14, 2024, 12:15 AM IST

Assembly Election: “ಮಹಾ’ ಅಖಾಡದಲ್ಲಿ ಕರುನಾಡ ನಾಯಕರ ಹವಾ!

ಬೆಳಗಾವಿ: ಮಹಾರಾಷ್ಟ್ರ ವಿಧಾನಸಭೆ ಕದನ ತಾರಕಕ್ಕೇರಿದೆ. ಮತದಾರರನ್ನು ಸೆಳೆಯಲು ಕರ್ನಾಟಕದ ಕಾಂಗ್ರೆಸ್‌, ಬಿಜೆಪಿ ನಾಯಕರು ತಮ್ಮ ಅಭ್ಯರ್ಥಿಗಳ ಪರ ಮತಬೇಟೆ ನಡೆಸಿದ್ದಾರೆ. ವಿವಿಧ ಜಿಲ್ಲೆಗಳಲ್ಲಿ ಬೀಡು ಬಿಟ್ಟು ರಣತಂತ್ರ ಹೆಣೆಯುತ್ತಿದ್ದಾರೆ. ಗಡಿ ಭಾಗದ ಬೆಳಗಾವಿ, ಬೀದರ್‌, ಕಲಬುರಗಿ, ವಿಜಯಪುರ ಜಿಲ್ಲೆಗಳ ಮುಖಂಡರು ಹೆಚ್ಚಾಗಿದ್ದಾರೆ.

ಕರ್ನಾಟಕದ ಹಲವು ನಾಯಕರನ್ನು ವಿವಿಧ ವಿಧಾನಸಭಾ ಕ್ಷೇತ್ರಗಳಿಗೆ ಉಸ್ತುವಾರಿಗಳಾಗಿ ನೇಮಕ ಮಾಡಲಾಗಿದೆ. ಆಯಾ ಕ್ಷೇತ್ರಗಳ ಹಳ್ಳಿ ಹಳ್ಳಿಗಳಿಗೆ ಹೋಗಿ ಮರಾಠಿ ಭಾಷೆಯಲ್ಲಿಯೇ ಪ್ರಚಾರ ನಡೆಸಿ ರಣತಂತ್ರ ಹೆಣೆಯುತ್ತಿದ್ದಾರೆ. ಪುಣೆ ಜಿಲ್ಲೆಗೆ ಮಾಜಿ ಸಚಿವ ಸಿ.ಟಿ. ರವಿ, ಸಾತಾರಾ ಜಿಲ್ಲೆಗೆ ಮಾಜಿ ಸಂಸದ ಭಗವಂತ ಖೂಬಾ, ಬೆಳಗಾವಿಯ ಬಿಜೆಪಿ ಮುಖಂಡ ಧನಂಜಯ ಜಾಧವ, ಕೊಲ್ಲಾಪುರ ಜಿಲ್ಲೆಗೆ ಮಾಜಿ ಶಾಸಕ ಸಂಜಯ ಪಾಟೀಲ, ಸಾಂಗಲಿ ಜಿಲ್ಲೆಗೆ ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ ಪಾಟೀಲ, ಮಾಜಿ ಶಾಸಕ ಅನಿಲ್‌ ಬೆನಕೆ, ಸೊಲ್ಲಾಪುರ ಜಿಲ್ಲೆಗೆ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹಾಗೂ ಮಾಜಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಅವರನ್ನು ಉಸ್ತುವಾರಿಯನ್ನಾಗಿ ಮಾಡಲಾಗಿದೆ.

ಕಾಂಗ್ರೆಸ್‌ ನಾಯಕರಾದ ಸಚಿವ ಎಂ.ಬಿ. ಪಾಟೀಲ ಅವರನ್ನು ಪುಣೆ ಹಾಗೂ ಮುಂಬಯಿಗೆ ಗೃಹ ಸಚಿವ ಡಾ| ಜಿ. ಪರಮೇಶ್ವರ ಅವರನ್ನು ಉಸ್ತುವಾರಿಯನ್ನಾಗಿ ನೇಮಕ ಮಾಡಲಾಗಿದೆ. ಕೊಲ್ಲಾಪುರದ ಹಾತಕಣಗಲೆ ಕ್ಷೇತ್ರದಲ್ಲಿ ಎಐಸಿಸಿ ಕಾರ್ಯದರ್ಶಿ ಡಾ| ಅಂಜಲಿ ನಿಂಬಾಳ್ಕರ್‌ ಉಸ್ತುವಾರಿಯಾಗಿ ಪ್ರಚಾರದಲ್ಲಿ ತೊಡಗಿದ್ದಾರೆ. ಕಲಬುರಗಿ, ಬೀದರ್‌, ಬೆಳಗಾವಿ, ವಿಜಯಪುರ ಜಿಲ್ಲೆಗಳ ವಿವಿಧ ಕಾಂಗ್ರೆಸ್‌ ಮುಖಂಡರು ಪ್ರಚಾರ ನಡೆಸುತ್ತಿದ್ದಾರೆ.

ಸಾತಾರಾ ಜಿಲ್ಲೆಯಲ್ಲಿ ಭಗವಂತ ಖೂಬಾ ಹಾಗೂ ಧನಂಜಯ ಜಾಧವ ನೇತೃತ್ವದಲ್ಲಿ ಫಲಟಣ, ಮಾಣ, ಕೋರೇಗಾಂವ, ಸಾತಾರಾ, ವಾಯಿ, ಕರಾಡ ಉತ್ತರ, ಕರಾಡ ದಕ್ಷಿಣ ಕ್ಷೇತ್ರಗಳಲ್ಲಿ ನಾಯಕರಿದ್ದಾರೆ. ಶಶಿ ಕುಲಕರ್ಣಿ, ಶ್ರೀಕಾಂತ ಕುಲಕರ್ಣಿ, ರಾಜು ಟಂಕಸಾಳಿ ಇತರರು ಇದ್ದಾರೆ. ಕೊಲ್ಲಾಪುರ ಜಿಲ್ಲೆಯ ಕಾಗಲಕ್ಕೆ ಮುರುಘೇಂದ್ರಗೌಡ ಪಾಟೀಲ, ಕೊಲ್ಲಾಪುರ ದಕ್ಷಿಣಕ್ಕೆ ಖಾನಾಪುರ ಶಾಸಕ ವಿಠuಲ ಹಲಗೇಕರ ಹಾಗೂ ಡಾ|ಸೋನಾಲಿ ಸರ್ನಬೋತ್‌, ಇಚಲಕರಂಜಿಗೆ ಶಶಿಕಲಾ ಜೊಲ್ಲೆ, ಶಿರೋಳ ವಿಧಾನಸಭೆಗೆ ಯುವರಾಜ ಜಾಧವ ಸೇರಿದಂತೆ ವಿವಿಧ ನಾಯಕರು ಪ್ರಚಾರ ನಡೆಸಿದ್ದಾರೆ.

ಮಹಾ ಚುನಾವಣ ಕಣದಲ್ಲೂ ವಕ್ಫ್ ಸದ್ದು
ಕರ್ನಾಟಕದಲ್ಲಿ ರೈತರ ಪಹಣಿಯಲ್ಲಿ ವಕ್ಫ್  ಹೆಸರು ನಮೂದು ಆಗಿರುವುದನ್ನೇ ಅಸ್ತ್ರವನ್ನಾಗಿಟ್ಟುಕೊಂಡಿರುವ ಬಿಜೆಪಿ ನಾಯಕರು ಮಹಾರಾಷ್ಟ್ರದಲ್ಲಿಯೂ ಇದರ ವಿರುದ್ಧ ದೊಡ್ಡ ಪ್ರಮಾಣದಲ್ಲಿ ಪ್ರಚಾರ ನಡೆಸುತ್ತಿದ್ದಾರೆ. ರಾಜ್ಯದ ಸಾವಿರಾರು ಎಕರೆ ಜಮೀನುಗಳ ಪಹಣಿಯಲ್ಲಿ ವಕ್ಫ್ ಹೆಸರು ಸೇರಿದ್ದರಿಂದ ರೈತರು ಆತಂಕಗೊಂಡಿದ್ದಾರೆ. ಮಹಾರಾಷ್ಟ್ರದಲ್ಲಿಯೂ ಇದು ಮುಂದುವರಿಯುವ ಸಾಧ್ಯತೆ ಇದೆ. ಹೀಗಾಗಿ ಕಾಂಗ್ರೆಸ್ಸನ್ನು ಸೋಲಿಸಿ ಬಿಜೆಪಿಯನ್ನು ಗೆಲ್ಲಿಸುವಂತೆ ಮನವಿ ಮಾಡುತ್ತಿದ್ದಾರೆ. ಇದಕ್ಕೆ ಪ್ರತಿಯಾಗಿ ಕೈ ನಾಯಕರೂ ಗ್ಯಾರಂಟಿ ಯೋಜನೆಗಳ ಬಗ್ಗೆ ಹೇಳಿ ಮತಬೇಟೆ ನಡೆಸಿದ್ದಾರೆ.

ಯಾಕೆ ರಾಜ್ಯ ನಾಯಕರ ಪ್ರಚಾರ?
– ಮಹಾರಾಷ್ಟ್ರ ಚುನಾವಣೆಗೆ ಗಡಿಯ ಮತದಾರರನ್ನು ಸೆಳೆಯಲು ರಾಜ್ಯ ನಾಯಕರ ಬಳಕೆ
-ನೆರೆ ರಾಜ್ಯದ ವಿವಿಧ ವಿಧಾನಸಭೆ ಕ್ಷೇತ್ರಗಳಿಗೆ ಕಾಂಗ್ರೆಸ್‌, ಬಿಜೆಪಿ ನಾಯಕರ ಉಸ್ತುವಾರಿ
-ಪಕ್ಷ ಸಂಘಟನೆ, ಮತದಾರರನ್ನು ಸೆಳೆಯುವ ವಿವಿಧ ತಂತ್ರಗಳನ್ನು ಹೆಣೆಯುತ್ತಿರುವ ನಾಯಕರು
-ಕರ್ನಾಟಕದ 3 ಕ್ಷೇತ್ರದ ಉಪಚುನಾವಣೆ ಮುಗಿಯುತ್ತಿದ್ದಂತೆ ಮಹಾರಾಷ್ಟ್ರಕ್ಕೆ ನಾಯಕರ ಲಗ್ಗೆ

ಉಪಚುನಾವಣೆ ಬಳಿಕ ಕಾಂಗ್ರೆಸ್‌ ಸಕ್ರಿಯ
ಕರ್ನಾಟಕದಲ್ಲಿ 3 ಕ್ಷೇತ್ರಗಳ ಉಪಚುನಾವಣೆಯ ಪ್ರಚಾರ ಅಂತ್ಯಗೊಳ್ಳುತ್ತಿದ್ದಂತೆ, ಕಾಂಗ್ರೆಸ್‌ ನಾಯಕರು ಮಹಾರಾಷ್ಟ್ರದತ್ತ ಮುಖ ಮಾಡಲಿದ್ದಾರೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್‌, ಸಚಿವರಾದ ಸತೀಶ್‌ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳ್ಕರ್‌ ಸೇರಿ ಅನೇಕ ನಾಯಕರು ಪ್ರಚಾರಕ್ಕೆ ತೆರಳಲಿದ್ದಾರೆ. ನ. 20ರಂದು ಚುನಾವಣೆ ಹಿನ್ನೆಲೆಯಲ್ಲಿ ಐದಾರು ದಿನಗಳ ಕಾಲ ಮಹಾ ಚುನಾವಣೆಯ ಪ್ರಚಾರದಲ್ಲಿ ತೊಡಗಿಕೊಳ್ಳಲಿದ್ದಾರೆ.

ಟಾಪ್ ನ್ಯೂಸ್

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

1-nirmala

Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್‌

Kadaba: ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ; ತಪ್ಪಿದ ಅನಾಹುತ

Kadaba: ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ; ತಪ್ಪಿದ ಅನಾಹುತ

Rain; ಕರಾವಳಿಯಲ್ಲಿ ಗುಡುಗು ಸಹಿತ ಭಾರೀ ಮಳೆ

Rain; ಕರಾವಳಿಯಲ್ಲಿ ಗುಡುಗು ಸಹಿತ ಭಾರೀ ಮಳೆ

Mangaluru: ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ನಾಪತ್ತೆ

Mangaluru: ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ನಾಪತ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-hale-beed

Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ

SOMANNA-2

Railway;ನನೆಗುದಿಗೆ ಬಿದ್ದಿದ್ದ 9 ಯೋಜನೆಗಳಿಗೆ ವೇಗ: ಸೋಮಣ್ಣ

marriage 2

Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ

Yogeshwar

C.P.Yogeshwara; ಜಮೀರ್ ಹೇಳಿಕೆ ಪರಿಣಾಮ…: ಸೋಲಿನ ಆತಂಕ ಹೊರ ಹಾಕಿದ ಸೈನಿಕ?!

ಯಾರು, ಯಾರನ್ನು, ಯಾವಾಗ ಖರೀದಿಸಲು ಪ್ರಯತ್ನಿಸಿದ್ದಾರೆ?: ಸಿಎಂಗೆ ಸಿ.ಟಿ.ರವಿ ಪ್ರಶ್ನೆ

CTRavi; ಯಾರು,ಯಾರನ್ನು,ಯಾವಾಗ ಖರೀದಿಸಲು ಪ್ರಯತ್ನಿಸಿದ್ದಾರೆ?: ಸಿಎಂಗೆ ಸಿ.ಟಿ.ರವಿ ಪ್ರಶ್ನೆ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ

Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

1-nirmala

Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.