UBI: ಸಿಬಿಐಗೆ ವಾಲ್ಮೀಕಿ ನಿಗಮ ಕೇಸ್: ಹೈಕೋರ್ಟ್ ನಕಾರ
ಯುಬಿಐ ಅರ್ಜಿಯನ್ನು ವಜಾಗೊಳಿಸಿದ ಹೈಕೋರ್ಟ್; ಕೋಟ್ಯಂತರ ರೂ. ವರ್ಗಾವಣೆ ಹಗರಣದ ತನಿಖೆ ಪ್ರಕರಣ
Team Udayavani, Nov 14, 2024, 6:40 AM IST
ಬೆಂಗಳೂರು: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಕೋಟ್ಯಂತರ ರೂ. ಅಕ್ರಮ ವರ್ಗಾವಣೆ ಹಗರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಕೋರಿ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.
ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಸಲ್ಲಿಸಿದ್ದ ಅರ್ಜಿ ವಿಚಾರಣೆ ಪೂರ್ಣಗೊಳಿಸಿ 2024ರ ಸೆ. 30ರಂದು ಕಾದಿರಿಸಿದ್ದ ತೀರ್ಪನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕ ಸದಸ್ಯ ನ್ಯಾಯಪೀಠ ಬುಧವಾರ ಪ್ರಕಟಿಸಿದೆ.
ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಅರ್ಜಿಯನ್ನು ಸಮರ್ಥಿಸಿ ಪ್ರಕರಣವನ್ನು ಸಿಬಿಐಗೆ ವಹಿಸುವ ವಿಚಾರವಾಗಿ ಬ್ಯಾಂಕಿಂಗ್ ನಿಬಂಧನೆಗಳ ಕಾಯ್ದೆ-1949ರ ಸೆಕ್ಷನ್ 35ಎಬಗ್ಗೆ ಅಟಾರ್ನಿ ಜನರಲ್ ವಾಖ್ಯಾನ ಮಾಡಿರುವುದನ್ನು ಒಪ್ಪಲಾಗದು. ಸೆಕ್ಷನ್ 35ಎ ಕೇವಲ ಬ್ಯಾಂಕಿಂಗ್ ಸಂಸ್ಥೆಗಳ ವ್ಯವಹಾರಗಳನ್ನು ಸಂಪೂರ್ಣವಾಗಿ ನಿಯಂತ್ರಿಸುವ ಮತ್ತು ಮೇಲ್ವಿಚಾರಣೆ ನಡೆಸುವುದಕ್ಕೆ ಸಂಬಂಧಿಸಿ ರುತ್ತದೆ. ಯಾವುದೇ ಬ್ಯಾಂಕಿಂಗ್ ಸಂಸ್ಥೆಗೆ ತನಿಖೆ ಯನ್ನು ಸಿಬಿಐ ಕೈಗೆ ವರ್ಗಾಯಿಸಲು ಅನುಮತಿ ನೀಡಿದರೆ ಅದು ಸೆಕ್ಷನ್ 35ಎಗೆ ಶಾಸನವು ನೀಡದ ಅಧಿಕಾರವನ್ನು ನೀಡಿದಂತಾಗುತ್ತದೆ ಎಂದು ಹೈಕೋರ್ಟ್ ಆದೇಶದಲ್ಲಿ ಹೇಳಿದೆ.
ವಾಲ್ಮೀಕಿ ಹಗರಣದ ಕುರಿತು ದೂರು ದಾಖ ಲಾದ ಸಂದರ್ಭ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಕೆಲವು ಅಧಿಕಾರಿಗಳು ಆರೋಪಿ ಗಳಾಗಿದ್ದರು ಎಂಬ ಕಾರಣಕ್ಕೆ ಹಗರಣವನ್ನು ಸಿಬಿಐಗೆ ವಹಿಸುವಂತೆ ಬ್ಯಾಂಕ್ ಕೋರಿದೆ. ಬ್ಯಾಂಕ್ ಮನವಿ ಮಾಡಿದೆ ಎಂಬ ಮಾತ್ರಕ್ಕೆ ಅಟಾರ್ನಿ ಜನರಲ್ ಹೇಳಿರುವಂತೆ ಸೆಕ್ಷನ್ 35ಎ ವ್ಯಾಖ್ಯಾನವನ್ನು ನ್ಯಾಯಾಲಯವು ಒಪ್ಪಬೇಕಿಲ್ಲ ಎಂದು ಹೈಕೋರ್ಟ್ ತನ್ನ ಆದೇಶದಲ್ಲಿ ತಿಳಿಸಿದೆ.
ಪ್ರಕರಣದ ಕುರಿತು ದೂರು ದಾಖಲಾದಾಗ ಯೂನಿಯನ್ ಬ್ಯಾಂಕಿನ ಅಧಿಕಾರಿಗಳು ಸಹ ಆರೋಪಿಗಳಾಗಿದ್ದರು.
ಅದಕ್ಕಾಗಿಯೇ ಯೂನಿಯನ್ ಬ್ಯಾಂಕ್ ತನಿಖೆಯನ್ನು ಸಿಬಿಐ ವಹಿಸಲು ಕೋರಿದೆ. ಬ್ಯಾಂಕ್ ಸಿಬಿಐ ತನಿಖೆ ಕೇಳಿದ ಮಾತ್ರಕ್ಕೆ ಸೆಕ್ಷನ್ 35ಎ ವ್ಯಾಖ್ಯಾನದ ಆಧಾರದಲ್ಲಿ ಸಿಬಿಐ ತನಿಖೆಗೆ ವಹಿಸಲು ಸಾಧ್ಯವಿಲ್ಲ. ಇನ್ನು ಎಸ್‌ಐಟಿಯ ದೋಷಾರೋಪ ಪಟ್ಟಿ ಯಿಂದ ಬ್ಯಾಂಕ್ ಅಧಿಕಾರಿಗಳನ್ನು ಕೈಬಿಡ ಲಾಗಿದೆ. ಆದರೆ ಕಾನೂನು ಅನುಗುಣವಾದ ಮಾರ್ಗದಲ್ಲಿ ಸಿಬಿಐ ತನಿಖೆಗೆ ಅಭ್ಯಂತರವಿಲ್ಲ. ಆಗ ರಾಜ್ಯದ ತನಿಖಾ ಸಂಸ್ಥೆಯು ಹಗರಣದಿಂದ ಕೈಬಿಟ್ಟಿರುವ ವ್ಯಕ್ತಿಗಳನ್ನೂ ಸಿಬಿಐ ತನಿಖೆ ಗೊಳಪಡಿಸಬಹುದು ಎಂದು ಹೈಕೋರ್ಟ್ ಸ್ಪಷ್ಟಪಡಿಸಿ ಅರ್ಜಿ ವಜಾಗೊಳಿಸಿದೆ.
ಬ್ಯಾಂಕ್ ವಾದ ಏನಿತ್ತು?
ಬ್ಯಾಂಕಿಂಗ್ ನಿಬಂಧನೆಗಳ ಕಾಯ್ದೆ- 1949ರ ಸೆಕ್ಷನ್ 35ಎ ಪ್ರಕಾರ ಬ್ಯಾಂಕ್ ವ್ಯವಹಾರಗಳ ಕುರಿತು ಯಾವುದೇ ಬ್ಯಾಂಕುಗಳಿಗೆ ಕಾಲಕಾಲಕ್ಕೆ ನಿರ್ದೇಶನ ನೀಡುವ ಅಧಿಕಾರವನ್ನು ಭಾರತೀಯ ರಿಸರ್ವ್ ಬ್ಯಾಂಕ್ ಹೊಂದಿದೆ. ಅದರಂತೆ ಸೆಕ್ಷನ್ ಅನ್ವಯ ಬ್ಯಾಂಕ್ ವ್ಯವಹಾರಗಳಲ್ಲಿ ನಡೆದಿರುವ ವಂಚನೆ ಹಾಗೂ ಅಕ್ರಮದ ಬಗ್ಗೆ ಸಿಬಿಐ ಅಂತಹ ಸ್ವತಂತ್ರ ಸಂಸ್ಥೆಯ ತನಿಖೆಗೆ ವಹಿಸಲು ಕೋರಬಹುದಾಗಿದೆ. ಬ್ಯಾಂಕಿಂಗ್ ವ್ಯವಹಾರದಲ್ಲಿ 50 ಕೋಟಿ ರೂ. ಅಧಿಕ ಅಕ್ರಮ ವ್ಯವಹಾರ ನಡೆದ ಪಕ್ಷದಲ್ಲಿ ಅಂತಹ ಪ್ರಕರಣವನ್ನು ಸಿಬಿಐಗೆ ವಹಿಸಬಹದಾಗಿದೆ. ಹಗರಣದಲ್ಲಿ ವಾಲ್ಮೀಕಿ ನಿಗಮದ ವ್ಯವಸ್ಥಾಪಕ ನಿರ್ದೇಶಕರು ಉನ್ನತ ಶ್ರೇಣಿಯ ಅಧಿಕಾರಿಗಳು ಮತ್ತು ನಿಗಮದ ಅಧ್ಯಕ್ಷರು ಶಾಸಕರು ಭಾಗಿಯಾಗಿ¨ªಾರೆ. ಇದರಿಂದ ರಾಜ್ಯ ಸರ್ಕಾರವು ವಾಲ್ಮೀಕಿ ಪ್ರಕರಣದ ತನಿಖೆಗೆ ರಚಿಸಿರುವ ಎಸ್‌ಐಟಿ ನ್ಯಾಯಯುತ ತನಿಖೆ ನಡೆಸುವುದಿಲ್ಲ. ಹಾಗಾಗಿ, ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಯೂನಿಯನ್ ಬ್ಯಾಂಕ್ ವಾದಿಸಿತ್ತು.
ನ್ಯಾಯಾಲಯದ
ಆತ್ಮಸಾಕ್ಷಿಗೆ ಆಘಾತ
ಪರಿಶಿಷ್ಟ ಪಂಗಡದ ಸಮುದಾಯ ದವರು ಆರ್ಥಿಕವಾಗಿ ಅಭಿವೃದ್ಧಿ ಹೊಂದುವುದಕ್ಕೆ ಅವಕಾಶ ಮಾಡಿಕೊಡುವ ನಿಟ್ಟಿನಲ್ಲಿ ಹಣಕಾಸು ನೆರವು ಕಲ್ಪಿಸಲು, ಸಮುದಾಯದ ಕೃಷಿ ಕಾರ್ಮಿಕರಿಗೆ ಬೆಂಬಲ ನೀಡಲು ವಾಲ್ಮೀಕಿ ನಿಗಮ ಸ್ಥಾಪಿಸಲಾಗಿದೆ. ಆದರೆ ಪರಿಶಿಷ್ಟ ಪಂಗಡದ ಸಮುದಾಯಕ್ಕೆ ಸಂಬಂಧಿಸಿದ ನಿಗಮಕ್ಕೆ ಸೇರಿದ ಹಣದಲ್ಲಿ ಅವ್ಯವಹಾರ ಮಾಡಿರುವುದು ನ್ಯಾಯಾಲಯದ ಆತ್ಮಸಾಕ್ಷಿಗೆ ಆಘಾತ ತರಿಸಿದೆ ಎಂದು ಹೈಕೋರ್ಟ್ ತೀರ್ಪಿನಲ್ಲಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ
Railway;ನನೆಗುದಿಗೆ ಬಿದ್ದಿದ್ದ 9 ಯೋಜನೆಗಳಿಗೆ ವೇಗ: ಸೋಮಣ್ಣ
Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ
C.P.Yogeshwara; ಜಮೀರ್ ಹೇಳಿಕೆ ಪರಿಣಾಮ…: ಸೋಲಿನ ಆತಂಕ ಹೊರ ಹಾಕಿದ ಸೈನಿಕ?!
CTRavi; ಯಾರು,ಯಾರನ್ನು,ಯಾವಾಗ ಖರೀದಿಸಲು ಪ್ರಯತ್ನಿಸಿದ್ದಾರೆ?: ಸಿಎಂಗೆ ಸಿ.ಟಿ.ರವಿ ಪ್ರಶ್ನೆ
MUST WATCH
ಹೊಸ ಸೇರ್ಪಡೆ
Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್
Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ
Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ
Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ
Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.