Bengaluru: ಮಾವನ ಮಗನ ಕಿರುಕುಳಕ್ಕೆ ಬೇಸತ್ತು ವಿದ್ಯಾರ್ಥಿನಿ ಆತ್ಮಹತ್ಯೆ
Team Udayavani, Nov 14, 2024, 11:05 AM IST
ಬೆಂಗಳೂರು: ಮಾವನ ಮಗನ ಕಿರುಕುಳಕ್ಕೆ ಬೇಸತ್ತ ವಿದ್ಯಾರ್ಥಿನಿಯೊಬ್ಬಳು ಮನೆಯಲ್ಲೇ ನೇಣುಬಿಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಾಗಲಗುಂಟೆಯ ಶೆಟ್ಟಿಹಳ್ಳಿಯಲ್ಲಿ ನಡೆದಿದೆ.
ಖಾಸಗಿ ಕಾಲೇಜಿನಲ್ಲಿ ಪ್ರಥಮ ಪಿಯು ಓದುತ್ತಿದ್ದ 16 ವರ್ಷದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಸಂಬಂಧ ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಿರುಕುಳ ನೀಡು ತ್ತಿದ್ದ ಆರೋಪದಡಿ ಮಾವನ ಮಗ ಸ್ವಾಗತ್ (28) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ವೈದ್ಯ ಕೀಯ ಪರೀಕ್ಷೆಗೆ ಒಳಪಡಿಸಿ ನ್ಯಾಯಾಲ ಯಕ್ಕೆ ಹಾಜರು ಪಡಿಸಲಾಗಿತ್ತು. ಬಳಿಕ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಸ್ವಾಗತ್ ಹಾಗೂ ಆತ್ಮಹತ್ಯೆ ಮಾಡಿ ಕೊಂಡಿರುವ ವಿದ್ಯಾರ್ಥಿನಿ ಹಲವು ವರ್ಷಗಳಿಂದ ಚೆನ್ನಾಗಿದ್ದರು. ಆದರೆ, ಇತ್ತೀಚೆಗೆ ಇಬ್ಬರ ಮಧ್ಯೆ ಭಿನ್ನಾಭಿಪ್ರಾಯ ಉಂಟಾಗಿ ಗಲಾಟೆ ಮಾಡಿಕೊಳ್ಳುತ್ತಿದ್ದರು. ಅದಕ್ಕೆ ಕೋಪಗೊಂಡಿದ್ದ ಆರೋಪಿ, ವಿದ್ಯಾರ್ಥಿನಿಗೆ ಕರೆ ಮಾಡಿ ಅಸಭ್ಯವಾಗಿ ಮಾತನಾಡುವುದು, ಸಾರ್ವಜನಿಕವಾಗಿ ಸಿಕ್ಕ ಕಡೆಯಲ್ಲಿ ನಿಂದಿಸುವುದು ಮಾಡುತ್ತಿದ್ದ. ಅದರಿಂದ ಬೇಸತ್ತ ವಿದ್ಯಾರ್ಥಿನಿ ಮಂಗಳವಾರ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಸಂಜೆ ವಿದ್ಯಾರ್ಥಿನಿ ತಾಯಿ ಮನೆಗೆ ಬಂದಾಗ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ತಾಯಿ ದೂರು ನೀಡಿದ ಮೇರೆಗೆ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು. ಬಾಗಲಗುಂಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Smart Bus Stan: ಕೋರಮಂಗಲದಲ್ಲಿ ಸ್ಮಾರ್ಟ್ ಬಸ್ ನಿಲ್ದಾಣ!
Bengaluru: ಇವಿ ಬೈಕ್ ಶೋರೂಮ್ನಲ್ಲಿ ಬೆಂಕಿ ಅವಘಡ; ಮಾಲೀಕ, ಮ್ಯಾನೇಜರ್ ಬಂಧನ, ಬಿಡುಗಡೆ
Bengaluru: ನಗರದಲ್ಲಿ ನಿಷೇಧಿತ ಕಲರ್ ಕಾಟನ್ ಕ್ಯಾಂಡಿ ತಯಾರಿಕಾ ಘಟಕ ಬಂದ್
Shobha Karandlaje: ಶೋಭಾ ಲೋಕಸಭಾ ಸದಸ್ಯತ್ವ ರದ್ದು ಕೋರಿ ಅರ್ಜಿ: ಡಿ.6ಕ್ಕೆ ವಿಚಾರಣೆ
Arrested: ನಕಲಿ ದಾಖಲೆ ನೀಡಿ ಟಿಡಿಎಸ್ ಪಡೆಯುತ್ತಿದ್ದ ಆರೋಪಿಯ ಬಂಧಿಸಿದ ಜಾರಿ ನಿರ್ದೇಶನಾಲಯ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.