Chennai: ತಮಿಳುನಾಡಿನಲ್ಲಿ ಮತ್ತೊಬ್ಬ ವೈದ್ಯನ ಮೇಲೆ ದಾಳಿ, ಪರಾರಿ
ಮನೋವೈದ್ಯನಿಗೆ ಹಲ್ಲೆ ಮಾಡಿದ ಮಾನಸಿಕ ಅಸ್ವಸ್ಥ
Team Udayavani, Nov 14, 2024, 10:59 PM IST
ಚೆನ್ನೈ: ನಗರದ ಕಲೈನಾರ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಬುಧವಾರ ರೋಗಿಯ ಮಗನೊಬ್ಬ ಕ್ಯಾನ್ಸರ್ ತಜ್ಞನ ಮೇಲೆ ಚಾಕುವಿನಿಂದ ದಾಳಿ ನಡೆಸಿ ಕೆಲವೇ ಗಂಟೆಗಳ ಬಳಿಕ ಇನ್ನೊಂದು ಸರ್ಕಾರಿ ಆಸ್ಪತ್ರೆಯಲ್ಲಿ ಮನೋವೈದ್ಯನ ಮೇಲೆ ಮಾನಸಿಕ ಅಸ್ವಸ್ಥನೊಬ್ಬ ಹಲ್ಲೆ ನಡೆಸಿದ್ದಾನೆ.
ಸ್ಟಾನ್ಲಿ ಆಸ್ಪತ್ರೆಯ ಮನೋವೈದ್ಯಶಾಸ್ತ್ರ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿರುವ ವಿಲ್ಲಿವಾಕ್ಕಂ ಸಿಡ್ಕೊ ನಗರದ ಡಾ.ಪಿ.ಹರಿಹರನ್ (49) ಎಂಬುವವರ ಮೇಲೆ ಹಲ್ಲೆ ನಡೆದಿದೆ.
ಅವರು ಬುಧವಾರ ಹೊರರೋಗಿ ವಾರ್ಡ್ನಲ್ಲಿ 24 ವರ್ಷದ ಭರತ್ ಎಂಬಾತನಿಗೆ ಚಿಕಿತ್ಸೆ ನೀಡುವಾಗ ಗಲಾಟೆ ಮಾಡಿದ ಭರತ್ ಇವರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದಾನೆ. ಈ ಸಂಬಂಧ ದೂರು ದಾಖಲಾಗಿದೆ.
ಭರತ್ 1 ವರ್ಷದ ಹಿಂದೆ ಇದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದ ಎಂದು ತಿಳಿದುಬಂದಿದೆ.
ವೈದ್ಯರ ಪ್ರತಿಭಟನೆ: ಕ್ಯಾನ್ಸರ್ ತಜ್ಞನ ಮೇಲೆ ನಡೆದ ದಾಳಿ ಖಂಡಿಸಿ, ವೈದ್ಯರಿಗೆ ಸುರಕ್ಷತೆ ನೀಡುವಂತೆ ಒತ್ತಾಯಿಸಿ ತಮಿಳುನಾಡಿನಾದ್ಯಂತ ವೈದ್ಯರು ಗುರುವಾರ ಪ್ರತಿಭಟನೆ ನಡೆಸಿದ್ದಾರೆ. ಇನ್ನು ಗಾಯಾಳು ವೈದ್ಯ ಬಾಲಾಜಿ ಜಗನ್ನಾಥ್ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ವೈದ್ಯರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್ ಮುಖ್ಯಸ್ಥೆ
Daily Horoscope: ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ, ಸ್ವರ್ಣೋದ್ಯಮಕ್ಕೆ ಲಾಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.