Karnataka; 7 ವೈದ್ಯಕೀಯ ಕಾಲೇಜುಗಳಲ್ಲಿ ಕ್ರಿಟಿಕಲ್ ಕೇರ್ ವಿಭಾಗ ಆರಂಭ
148.20 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ: ಸಂಪುಟ ನಿರ್ಧಾರ, 200 ಕೋಟಿ ರೂ. ಅನುದಾನದಲ್ಲಿ ಹೆಬ್ಟಾಳದಲ್ಲಿ ಸಿರಿಧಾನ್ಯ ಹಬ್
Team Udayavani, Nov 15, 2024, 6:45 AM IST
ಬೆಂಗಳೂರು: ಸುಮಾರು 148.20 ಕೋಟಿ ರೂ. ವೆಚ್ಚದಲ್ಲಿ ರಾಜ್ಯದ 7 ವೈದ್ಯಕೀಯ ಕಾಲೇಜುಗಳಲ್ಲಿ 50 ಹಾಸಿಗೆಗಳ ಸಾಮರ್ಥ್ಯದ 7 ಕ್ರಿಟಿಕಲ್ ಕೇರ್ ಬ್ಲಾಕ್ ನಿರ್ಮಾಣಕ್ಕೆ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ.
ರಾಷ್ಟ್ರೀಯ ಆರೋಗ್ಯ ಅಭಿಯಾನದ ಪಿಎಂ – ಅಭಿಮ್ ಯೋಜನೆಯನ್ವಯ ಈ ಕಾಮಗಾರಿ ನಡೆಸಲಾಗುತ್ತದೆ ಎಂದು ಸಚಿವ ಸಂಪುಟ ಸಭೆ ಬಳಿಕ ನಡೆದ ಪತ್ರಿಕಾಗೋಷ್ಠಿಯಲ್ಲಿ ಕಾನೂನು ಮತ್ತು ಸಂಸದೀಯ ವ್ಯವಹಾರ ಸಚಿವ ಎಚ್.ಕೆ. ಪಾಟೀಲ ತಿಳಿಸಿದರು.
2024-25ನೇ ಸಾಲಿನಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಅನುಮೋದನೆ ಆಗಿರುವ ಉಡುಪಿ ಮತ್ತು ದಾವಣಗೆರೆ ಜಿಲ್ಲಾ ಆಸ್ಪತ್ರೆಗಳಲ್ಲಿ 50 ಹಾಸಿಗೆ ತೀವ್ರ ನಿಗಾ ಆರೈಕೆ ಘಟಕಗಳ ನಿರ್ಮಾಣ ಹಾಗೂ ಉಡುಪಿ, ದಾವಣಗೆರೆ ಮತ್ತು ವಿಜಯಪುರ ತೀವ್ರ ನಿಗಾ ಆರೈಕೆ ಘಟಕಗಳಿಗೆ ಅಗತ್ಯವಿರುವ ಉಪಕರಣ ಖರೀದಿಸಲು ಒಟ್ಟು ಅಂದಾಜು ಮೊತ್ತ 39.37 ಕೋಟಿ ರೂ.ಗಳಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ ಎಂದರು.
ಬೆಳೆ ನಷ್ಟ ಪರಿಹಾರ
ರೈತ ಸುರಕ್ಷಾ ಪ್ರಧಾನಮಂತ್ರಿ ಬೆಳೆ ವಿಮೆ ಯೋಜನೆಯಡಿ ಸಮಗ್ರ ವಿಮಾ ಭದ್ರತೆ ಒದಗಿಸಲು ಆಲೀಕಲ್ಲು ಮಳೆ, ಭೂ ಕುಸಿತ ಮತ್ತು ಬೆಳೆ ಮುಳುಗಡೆ, ಮೇಘಸ್ಫೋಟ ಮತ್ತು ಗುಡುಗು ಮಿಂಚಿನಿಂದ ಉಂಟಾಗುವ ಬೆಂಕಿ ಅವಘಡಗಳಿಂದ ಬೆಳೆ ನಷ್ಟ ಸಂಭವಿಸಿದ್ದಲ್ಲಿ ಕ್ಷೇತ್ರಾಧಾರಿತವಾಗಿ ಬೆಳೆ ನಷ್ಟ ಪರಿಹಾರವನ್ನು ಸಂಪುಟದಲ್ಲಿ ಇತ್ಯರ್ಥಗೊಳಿಸಲಾಗಿದೆ.
ವಿಮಾ ಸಂಸ್ಥೆಗಳು ಹಾಗೂ 10 ಕ್ಲಸ್ಟರ್‌ಗಳು ಮತ್ತು ಕಂಪೆನಿ ಗಳಿಗೆ ಕೇಂದ್ರ ಸರಕಾರದ ಮಾರ್ಗಸೂಚಿಯಂತೆ ರಾಜ್ಯದ ಪಾಲಿನ ಅನುದಾನವನ್ನು ಭರಿಸಲು ಕೃಷಿ ಆಯುಕ್ತರು ಹೊರಡಿಸಿರುವ ಕಾರ್ಯಾದೇಶಗಳಿಗೆ ಘಟನೋತ್ತರ ಮಂಜೂರಾತಿ ನೀಡಲಾಗಿದೆ.
ಸಾವಯವ ಮತ್ತುಸಿರಿಧಾನ್ಯ ಹಬ್
ರಾಜ್ಯದ ಸಾವಯವ ಮತ್ತು ಸಿರಿಧಾನ್ಯ ಉತ್ಪಾದಕರಿಗೆ, ಮಾರುಕಟ್ಟೆ ದಾರರಿಗೆ ಹಾಗೂ ಗ್ರಾಹಕರಿಗೆ ಅನುಕೂಲವಾಗುವಂತೆ ಮಾರುಕಟ್ಟೆ ಸಂಪರ್ಕವನ್ನು ವಿಸ್ತರಿಸಲು ಹೆಬ್ಟಾಳದಲ್ಲಿ ಸಿರಿಧಾನ್ಯ ಹಬ್ ಅನ್ನು 200 ಕೋಟಿ ರೂ. ಅನುದಾನದಲ್ಲಿ ಅನುಷ್ಠಾನಗೊಳಿಸಲು ಸಂಪುಟ ಒಪ್ಪಿಗೆ ನೀಡಿದೆ.
ಎಐ ಉತ್ಕೃಷ್ಟತಾ ಕೇಂದ್ರ
ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ನ ಲ್ಲಿ ಉತ್ಕೃಷ್ಟತಾ ಕೇಂದ್ರವನ್ನು 28 ಕೋಟಿ ರೂ. ಅಂದಾಜು ಮೊತ್ತದಲ್ಲಿ ಬೆಂಗಳೂರಿನಲ್ಲಿ ಸ್ಥಾಪಿಸಲು ಸಂಪುಟ ಒಪ್ಪಿಗೆ ನೀಡಿದೆ. ಇದರ ಜತೆಗೆ ಬಹುರಾಷ್ಟ್ರೀಯ ಕಂಪೆನಿಗಳು ತಮ್ಮ ಕಾರ್ಯಸ್ಥಾನ ಸ್ಥಾಪಿಸಲು ಕರ್ನಾಟಕವನ್ನು ಆದ್ಯತೆಯ ತಾಣವಾಗಿ ಬಳಕೆ ಮಾಡುವ ಗುರಿ ಹೊಂದಿರುವ ಜಾಗತಿಕ ಸಾಮರ್ಥ್ಯಗಳ ಕೇಂದ್ರಗಳ (ಜಿಸಿಸಿ) ಸಮಗ್ರ ನೀತಿಗೂ ಒಪ್ಪಿಗೆ ದೊರೆತಿದೆ.
ಸಂಪುಟದ ಇತರ ನಿರ್ಣಯಗಳು
ರಾಜ್ಯ ಲೋಕಸೇವಾ ಆಯೋಗದ 2023-24ನೇ ಸಾಲಿನ ವಾರ್ಷಿಕ ಈ ವರದಿಯನ್ನು ವಿಧಾನಮಂಡಲದ ಮುಂದೆ ಮಂಡಿಸಲು ಒಪ್ಪಿಗೆ.
ವಿಧಾನ ಪರಿಷತ್ತಿನ 2 ಸ್ಥಾನಗಳಿಗೆ ಇಬ್ಬರು ಸದಸ್ಯರನ್ನು ರಾಜ್ಯಪಾಲ ರಿಂದ ನಾಮನಿರ್ದೇಶನ ಮಾಡಲು ಸಿಎಂಗೆ ಅಧಿಕಾರ.
ಸಮಗ್ರ ಶಿಶು ಅಭಿವೃದ್ಧಿ ಯೋಜನೆಯಡಿ 69,919 ಅಂಗನವಾಡಿ ಗಳಿಗೆ 3,000 ರೂ. ಘಟಕ ವೆಚ್ಚದಂತೆ 2024-25ನೇ ಸಾಲಿನಲ್ಲಿ ಶಾಲಾ ಪೂರ್ವ ಶಿಕ್ಷಣ ಕಿಟ್ 20.98 ಕೋಟಿ ರೂ. ಮೊತ್ತದಲ್ಲಿ ಖರೀದಿ.
ಅಂಗನವಾಡಿಗಳಿಗೆ ಎಲ…ಇಡಿ ಮತ್ತು ಮತ್ತು ಇತರ ಸೌಲಭ್ಯಗಳನ್ನು 174.75 ಕೋಟಿ ರೂ.ಗಳಲ್ಲಿ ಒದಗಿಸಲು ಆಡಳಿತಾತ್ಮಕ ಅನುಮೋದನೆ.
ರಾಮನಗರ ಜಿÇÉೆಯ ಚನ್ನಪಟ್ಟಣ ಸರಕಾರಿ ರೇಷ್ಮೆ ತರಬೇತಿ ಸಂಸ್ಥೆಯ ಆವರಣದಲ್ಲಿ ಹೈಟೆಕ್ ರೇಷ್ಮೆ ಗೂಡಿನ ಮಾರುಕಟ್ಟೆ ನಿರ್ಮಾಣ ಹಂತ-2ರ ಕಾಮಗಾರಿಯನ್ನು 125 ಕೋಟಿ ರೂ. ವೆಚ್ಚದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ.
ಡಾ| ವಿಷ್ಣುವರ್ಧನ್ ಸ್ಮಾರಕ ಭವನ ನಿರ್ಮಾಣದ 13.94 ಕೋಟಿ ರೂ.ಗಳ ಪರಿಷ್ಕೃತ ಅಂದಾಜಿಗೆ ಘಟನೋತ್ತರ ಆಡಳಿತಾತ್ಮಕ ಅನುಮೋದನೆ.
ಸನ್ನಡತೆ ಆಧಾರದಲ್ಲಿ ಬೆಂಗಳೂರು ಕಾರಾಗೃಹದ 19, ಮೈಸೂರು-4, ಬೆಳಗಾವಿ-9, ಕಲಬುರಗಿ-7, ವಿಜಯಪುರ-4, ಬಳ್ಳಾರಿ-9 ಮತ್ತು ಧಾರವಾಡ ಕಾರಾಗೃಹದಲ್ಲಿರುವ 3 ಕೈದಿಗಳಿಗೆ ಬಿಡುಗಡೆ ಭಾಗ್ಯ.
2006 ಎಪ್ರಿಲ್ 1ರ ಪೂರ್ವದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕಾರ್ಮಿಕ ರಾಜ್ಯ ವಿಮಾ ಇಲಾಖೆ ಸೇವೆಗೆ ಸೇರಿದ ಮತ್ತು ನಂತರದಲ್ಲಿ ನಿಯಮಾನುಸಾರ ಸರಕಾರದ ಆದೇಶದಂತೆ ಸ್ವಾಯತ್ತ ವೈದ್ಯಕೀಯ ಕಾಲೇಜುಗಳಿಗೆ ಬೋಧಕ ಹುದ್ದೆಗಳಿಗೆ ವಿಲೀನಗೊಂಡ ಅರ್ಹ 161 ವೈದ್ಯರ ಸೇವೆಯನ್ನು ಪಿಂಚಣಿ ಉದ್ದೇಶಕ್ಕಾಗಿ ಸಂರಕ್ಷಿಸಿ ಆದೇಶ ಹೊರಡಿಸಲು ನಿರ್ಣಯ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Subramanya: ಕಸ್ತೂರಿ ರಂಗನ್ ವರದಿ ವಿರುದ್ಧ ಗುಂಡ್ಯದಲ್ಲಿ ಬೃಹತ್ ಪ್ರಭಟನಾ ಸಭೆ ಆರಂಭ
Sri Lanka Election Result:ಸಂಸತ್ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ
India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್; ಗಾಯಗೊಂಡ ರಾಹುಲ್
Editorial: ಪಾಕ್ ಪ್ರೇರಿತ ಉಗ್ರರ ತಂತ್ರಕ್ಕೆ ಸೂಕ್ತ ಪ್ರತಿತಂತ್ರ ಈಗಿನ ತುರ್ತು
Kannada: ಕನ್ನಡನಾಡಲ್ಲಿ ಕನ್ನಡ ಕಲಿಕೆಯ ಹಾಡು-ಪಾಡು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.