CM Siddaramaiah: “ಕ್ರೀಡಾಪಟುಗಳಿಗೆ ಕೃಪಾಂಕ ನೀಡಲು ಚಿಂತನೆ’
Team Udayavani, Nov 15, 2024, 1:12 AM IST
ಬೆಂಗಳೂರು: ಇಲ್ಲಿನ ಕಂಠೀರವ ಕ್ರೀಡಾಂಗಣದಲ್ಲಿ ಗುರುವಾರದಿಂದ ಆರಂಭಗೊಂಡಿರುವ 14ರ ವಯೋಮಿತಿಯ ತೃತೀಯ ಮಿನಿ ಒಲಿಂಪಿಕ್ಸ್ ಕ್ರೀಡಾಕೂಟಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ಅವರು, ಕ್ರೀಡೆಯಲ್ಲಿ ಪಾಲ್ಗೊಳ್ಳುವ ಮಕ್ಕಳಿಗೆ ಕೃಪಾಂಕ ನೀಡಲು ಸರಕಾರ ಚಿಂತನೆ ನಡೆಸುತ್ತಿದೆ. ಕ್ರೀಡಾ ವಿದ್ಯಾರ್ಥಿಗಳು ದಿನದಲ್ಲಿ ಬಹಳಷ್ಟು ಸಮಯವನ್ನು ಕ್ರೀಡಾಭ್ಯಾಸಕ್ಕೂ ಮೀಸಲಿಡಬೇಕಾಗಿ ಬರುವುದರಿಂದ ಅವರ ಶಿಕ್ಷಣಕ್ಕೂ ಬೆಂಬಲಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರ ಯೋಚಿಸುತ್ತಿದೆ ಎಂದರು.
ರಾಜ್ಯ ಪೊಲೀಸ್ ಇಲಾಖೆಯಲ್ಲಿ ಶೇ. 3 ಮತ್ತು ಇತರ ಎಲ್ಲಾ ಇಲಾಖೆಗಳಲ್ಲಿ ಶೇ. 2ರಷ್ಟು ಕ್ರೀಡಾ ಕೋಟಾವನ್ನು ಮೀಸಲಿಡಲಾಗಿದೆ.
ಕ್ರೀಡಾಪಟುಗಳಿಗೆ ಹೆಚ್ಚಿನ ಉದ್ಯೋಗಾವಕಾಶ ಒದಗಿಸುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದವರು ಹೇಳಿದರು. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ರಾಮಲಿಂಗಾರೆಡ್ಡಿ, ಕೆ.ಜೆ.ಜಾರ್ಜ್ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್ ಮುಖ್ಯಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.