Bengaluru: ಇ-ಖಾತಾ ಗೊಂದಲದಿಂದ ಲಂಚಕ್ಕೆ ದಾರಿ: ಆರ್. ಅಶೋಕ್
Team Udayavani, Nov 15, 2024, 12:01 PM IST
ಬೆಂಗಳೂರು: ಇ-ಖಾತಾ ವ್ಯವಸ್ಥೆಯಲ್ಲಿ ಆಗಿರುವ ಗೊಂದಲದಿಂದ ಲಂಚಬಾಕತನಕ್ಕೆ ದಾರಿ ಮಾಡಿಕೊಟ್ಟಂತಾಗಿದೆ. ಇದನ್ನು ಸರಕಾರ ಸರಳಗೊಳಿಸಬೇಕು. ಯಾವುದೇ ಲಂಚವಿಲ್ಲದೆ ಜನರು ಸುಲಭವಾಗಿ ಸೇವೆ ಪಡೆಯುವಂತಾಗಬೇಕು ಎಂದು ವಿಪಕ್ಷ ನಾಯಕ ಆರ್. ಅಶೋಕ್ ಪತ್ರಿಕಾಗೋಷ್ಠಿಯಲ್ಲಿ ಆಗ್ರಹಿಸಿದರು.
ಸರಕಾರ ಇ-ಖಾತಾ ಮಾಡುವ ಮುನ್ನ ಮಾಹಿತಿ ಪಡೆಯಬೇಕಿತ್ತು. ಇದಕ್ಕೆ ಬೇಕಾದ ದಾಖಲೆಗಳು ಯಾವುವು, ಯಾವ ವಿಭಾಗದಲ್ಲಿ ಎಷ್ಟು ಮಾಡಬಹುದು ಎಂದು ಆಲೋಚಿಸಬೇಕಿತ್ತು. ಏಕಾಏಕಿ ಇ-ಖಾತಾ ಮಾಡಿರುವುದರಿಂದ ಜನರಿಗೆ ತೊಂದರೆಯಾಗಿದೆ ಎಂದರು. ಈಗಾಗಲೇ ಅಪ್‌ಲೋಡ್ ಮಾಡಿರುವ ಇ-ಖಾತಾಗಳಲ್ಲಿ ಮಾಲೀಕರ ಹೆಸರು, ಭೂಮಿಯ ಅಳತೆಯಲ್ಲಿ ತಪ್ಪಾಗಿದೆ. ಆಸ್ತಿ ವಿವರ ಸರಿಯಾಗಿ ಸಿಗುತ್ತಿಲ್ಲ. ಬಹುಮಾಲಕತ್ವ, ಎನ್‌ಆರ್‌ಐ ಮಾಲಕತ್ವದ ಆಸ್ತಿಗೆ ಅದವಿತ್ ಮಾಡಬೇಕಿದೆ. ಈ ಯಾವ ಕೆಲಸಗಳೂ ಆಗಿಲ್ಲ ಎಂದು ಆರೋಪಿಸಿದರು.
ಜನರಿಗೆ ಮನೆ ಸಾಲ ಸಿಗಲು ಇ-ಖಾತಾ ಬೇಕಾಗುತ್ತದೆ. ದಿನಕ್ಕೆ ಕೇವಲ 5ರಿಂದ 6ರಷ್ಟು ಇ-ಖಾತಾ ಮಾಡಲಾಗುತ್ತಿದೆ. ಸರಕಾರ ಲಂಚಕ್ಕೆ ಅವಕಾಶ ನೀಡಿ, ಜನರಿಗೆ ತೊಂದರೆ ನೀಡುತ್ತಿದೆ. ಯಾವುದೇ ಲಂಚವಿಲ್ಲದೆ ಇ ಖಾತಾ ವರ್ಗಾವಣೆಯಾಗಬೇಕು. ನಾನು ಕಂದಾಯ ಸಚಿವನಾಗಿದ್ದಾಗ ಶುಲ್ಕ ಕಡಿಮೆ ಮಾಡಿದ್ದೆ. ಈಗಿನ ಸರಕಾರ ಮುದ್ರಾಂಕ ಶುಲ್ಕವನ್ನು ಶೇ. 200ರಿಂದ 250ಕ್ಕೆ ಹೆಚ್ಚಿಸಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga; ಕಾಂಗ್ರೆಸ್-ಮುಸ್ಲಿಮರ ವಿರುದ್ದ ಹೇಳಿಕೆ: ಈಶ್ವರಪ್ಪ ವಿರುದ್ದ ಸುಮೋಟೋ ಪ್ರಕರಣ
Thirthahalli: ಶಾಸಕ ಸ್ಥಾನವನ್ನು ಗಿರವಿ ಇಟ್ಟರಾ ಆರಗ ಜ್ಞಾನೇಂದ್ರ ?
Bengaluru: ಮುನಿರತ್ನ ವಿರುದ್ಧ ಹನಿಟ್ರ್ಯಾಪ್ ಕೇಸ್: ಪಿಐ ಸೆರೆ
Shimoga; ಜಮೀರ್ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
MUST WATCH
ಹೊಸ ಸೇರ್ಪಡೆ
BBK11: ಅಸಲಿ ಆಟ ಶುರು ಮಾಡಿದ ಧನರಾಜ್: ಮೋಕ್ಷಿತಾಳಿಗೆ ಅಹಂಕಾರ ಇದೆ ಎಂದ ಸೈಲೆಂಟ್ ಕಿಲಾಡಿ
Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್ ಗೆ 10 ಕೋಟಿ ರೂಪಾಯಿ ಪಂಗನಾಮ!
Zebra: ಡಾಲಿ ಜೀಬ್ರಾಗೆ ಮೆಗಾಸ್ಟಾರ್ ಸಾಥ್
Subramanya: ಗುಂಡ್ಯದಲ್ಲಿ ಮಂಗಳೂರು- ಬೆಂಗಳೂರು ಹೆದ್ದಾರಿ ತಡೆ ನಡೆಸಿದ ಪ್ರತಿಭಟನಾಕಾರರು
Mumbai: ಲಾರೆನ್ಸ್ ಬಿಷ್ಣೋಯ್ ಹಿಟ್ ಲಿಸ್ಟ್‌ನಲ್ಲಿ ಶ್ರದ್ಧಾ ವಾಕರ್ ಹತ್ಯೆ ಆರೋಪಿ: ವರದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.