UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ
ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು... ಕೀರ್ ಸ್ಟರ್ಮರ್ ಕಚೇರಿಯಿಂದ ಪ್ರತಿಕ್ರಿಯೆ
Team Udayavani, Nov 15, 2024, 6:20 PM IST
ಲಂಡನ್: ಭಾರತೀಯ ಹಿಂದುಗಳನ್ನು ಓಲೈಸಲು ಮೊದಲ ಬಾರಿ ಬ್ರಿಟನ್ ಪ್ರಧಾನಿ ಕೀರ್ ಸ್ಟರ್ಮರ್ ಆಯೋಜಿಸಿದ್ದ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ ಉಣಬಡಿಸಿದುದರ ಕುರಿತು ಭಾರೀ ಆಕ್ರೋಶ ವ್ಯಕ್ತವಾವಾಗಿದ್ದು, ಆ ಬಗ್ಗೆ ತಡವಾಗಿ ಬ್ರಿಟನ್ ಪ್ರಧಾನಿ ಕಾರ್ಯಾಲಯ ಕ್ಷಮೆ ಯಾಚನೆ ಮಾಡಿದೆ.
ಅ.29ರಂದು ಪ್ರಧಾನಿಗಳ ಅಧಿಕೃತ ನಿವಾಸದಲ್ಲಿ ದೀಪಾವಳಿ ಪಾರ್ಟಿ ಆಯೋಜಿಸಲಾಗಿತ್ತು. ಈ ಪಾರ್ಟಿಯಲ್ಲಿ ಪ್ರಾರ್ಥನೆ, ಹಣತೆಗಳ ಬೆಳಗುವಿಕೆ, ಪ್ರಧಾನಿಗಳ ಭಾಷಣ ಮತ್ತು ಸಾಂಪ್ರದಾಯಿಕ ಭಾರತೀಯ ನೃತ್ಯವನ್ನು ಏರ್ಪಡಿಸಲಾಗಿತ್ತು. ಜತೆಗೆ ಅತಿಥಿಗಳಿಗೆ ಕುರಿ ಕಬಾಬ್, ಮೀನು, ಬಿಯರ್, ವೈನ್ ಬಡಿಸಲಾಗಿತ್ತು.
ಸ್ಟರ್ಮರ್ ಕಚೇರಿಯ ವಕ್ತಾರ ಹಿಂದೂ ಸಮುದಾಯದ ಕಾಳಜಿಯನ್ನು ಒಪ್ಪಿಕೊಂಡು ಮುಂದಿನ ಆಚರಣೆಗಳಲ್ಲಿ ಈ ರೀತಿ ಮತ್ತೆ ಸಂಭವಿಸುವುದಿಲ್ಲ ಎಂದು ಭರವಸೆ ನೀಡಿದ್ದಾರೆ ಎಂದು ಸುದ್ದಿ ಸಂಸ್ಥೆ PTI ಯ ವರದಿ ತಿಳಿಸಿದೆ.
ಈ ವೇಳೆ ಕೆಲ ಅತಿಥಿಗಳು ತಮ್ಮ ಅಕ್ರೋಶವನ್ನು ಅಲ್ಲಿಯೇ ಕೆಟರಿಂಗ್ ಸಿಬಂದಿ ವಿರುದ್ಧ ತೋರಿಸಿದ್ದರು. ಆದರೆ ಅವರು ಆರ್ಡರ್ ಮಾಡಿರುವುದನ್ನು ಬಡಿಸಿರುವುದಾಗಿ ಹೇಳಿದ್ದರು. ದೀಪಾವಳಿ ಧಾರ್ಮಿಕ ಮಹತ್ವವನ್ನೂ ಹೊಂದಿದೆ. ಹೀಗಾಗಿ ಸಾತ್ವಿಕ ಆಹಾರ ಬಡಿಸಬೇಕಿತ್ತು. ಮುಂದೆ ಮಾಂಸಾಹಾರ, ಮದ್ಯ ಉಣಬಡಿಸುವುದಾದರೆ ದೀಪಾವಳಿ ಪಾರ್ಟಿಯನ್ನೇ ಆಯೋಜಿಸುವುದು ಬೇಡ ಎಂದು ಹಿಂದೂಗಳು ತೀವ್ರ ಆಕ್ರೋಶ ಹೊರ ಹಾಕಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chido Cyclone: ಫ್ರಾನ್ಸ್ ನಲ್ಲಿ ಭೀಕರ ಚಂಡಮಾರುತದ… ಸಾವಿರ ಗಡಿ ದಾಟಿದ ಮೃತರ ಸಂಖ್ಯೆ?
San Francisco; ತಬಲಾ ಮಾಂತ್ರಿಕ ಜಾಕೀರ್ ಹುಸೇನ್ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ
‘Miss Netherlands’ ಇನ್ನು ಮುಂದೆ ನಡೆಯುವುದಿಲ್ಲ…: ಸೌಂದರ್ಯಕ್ಕೆ ಮಹತ್ವ ಬೇಡ!
South Korea; ಮಿಲಿಟರಿ ಆಡಳಿತ ಹೇರಿ ಅಧಿಕಾರ ಕಳೆದುಕೊಂಡ ಅಧ್ಯಕ್ಷ!
Football ಮಾಜಿ ತಾರೆ ಮಿಖಾಯಿಲ್ ಈಗ ಜಾರ್ಜಿಯಾ ಅಧ್ಯಕ್ಷ
MUST WATCH
ಹೊಸ ಸೇರ್ಪಡೆ
Chhattisgarh: ಟ್ರಕ್ ಚಾಲಕನ ಅವಾಂತರಕ್ಕೆ 6 ಮಂದಿ ಸ್ಥಳದಲ್ಲೇ ಮೃತ್ಯು, 7 ಮಂದಿ ಗಂಭೀರ
Vijay Diwas:ಕೋಲ್ಕತ್ತಾಗೆ ಮರಳಲಿದೆ ಬಾಂಗ್ಲಾ ಸ್ವಾತಂತ್ರ್ಯ ಹಬ್ಬ-ಇಂದಿನ ಸ್ಥಿತಿಗತಿ ಹೇಗಿದೆ
ಕಾಶ್ಮೀರದಲ್ಲಿ ಮಾದಕ ಜಾಲ: 8,000 ಕೆ.ಜಿ. ಡ್ರಗ್ಸ್ ವಶ- 5ವರ್ಷದಲ್ಲಿ 6,500 ಪ್ರಕರಣ
Nestle: ಹೊಸ ವರ್ಷಕ್ಕೆ ಮ್ಯಾಗಿ ನೂಡಲ್ಸ್, ಕಿಟ್‌ಕ್ಯಾಟ್ ಚಾಕ್ಲೆಟ್ ಬೆಲೆ ಏರಿಕೆ?
Sandalwood: ಪವನ್ ಒಡೆಯರ್ ನಿರ್ದೇಶನದಲ್ಲಿ ಶಿವಣ್ಣನ ಸಿನಿಮಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.