IAS Transfer: ಅಧಿಕಾರಿ ಸಿ. ಶಿಖಾ ಕೇಂದ್ರ ಸೇವೆಗೆ ನಿಯುಕ್ತಿ
Team Udayavani, Nov 16, 2024, 6:12 AM IST
ಬೆಂಗಳೂರು: ರಾಜ್ಯದಲ್ಲಿ ವಾಣಿಜ್ಯ ತೆರಿಗೆ ನಿರ್ದೇಶಕಿಯಾಗಿದ್ದ ಐಎಎಸ್ ಅಧಿಕಾರಿ ಸಿ. ಶಿಖಾ ಅವರು ಕೇಂದ್ರ ಸೇವೆಗೆ ನಿಯುಕ್ತಿಗೊಂಡಿರುವುದರಿಂದ ರಾಜ್ಯ ಸೇವೆಯಿಂದ ಬಿಡುಗಡೆಗೊಳಿಸಲಾಗಿದೆ. ಕೇಂದ್ರ ಸರಕಾರದ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಜಂಟಿ ಕಾರ್ಯದರ್ಶಿಯಾಗಿ ಶಿಖಾ ಅವರು ನಿಯುಕ್ತರಾಗಿದ್ದು, ಕೇಂದ್ರ ಸೇವೆಗೆ ತೆರಳುವುದರಿಂದ ಕರ್ನಾಟಕ ಸೇವೆಯಿಂದ ಬಿಡುಗಡೆ ಮಾಡಲಾಗಿದೆ. ಅಂತೆಯೇ ವಾಣಿಜ್ಯ ತೆರಿಗೆಗಳು (ಜಾರಿ) ಹೆಚ್ಚುವರಿ ಆಯುಕ್ತರಾಗಿರುವ ಎಲ್. ಚಂದ್ರಶೇಖರ್ ನಾಯಕ್ ಅವರನ್ನು ಶಿಖಾ ಅವರಿದ್ದ ವಾಣಿಜ್ಯ ತೆರಿಗೆ ಇಲಾಖೆಯ ಪ್ರಭಾರ ಆಯುಕ್ತರಾಗಿ ವರ್ಗಾವಣೆ ಮಾಡಲಾಗಿದೆ.
ಇನ್ನು ಬಿಎಂಟಿಸಿ ನಿರ್ದೇಶಕ (ಭದ್ರತೆ ಮತ್ತು ವಿಚಕ್ಷಣ) ಬಿ. ಸದಾಶಿವ ಪ್ರಭು ಅವರನ್ನು ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ನಿರ್ದೇಶಕರಾಗಿ ವರ್ಗಾಯಿಸಿದ್ದು, ಸಾರ್ವಜನಿಕ ಶಿಕ್ಷಣ ಇಲಾಖೆ (ಮಧ್ಯಾಹ್ನದ ಬಿಸಿಯೂಟ) ನಿರ್ದೇಶಕರಾಗಿಯೂ ಹೆಚ್ಚುವರಿ ಜವಾಬ್ದಾರಿ ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
Waqf Issue: ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ
Black Days: ಜಮೀರ್+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್.ಡಿ.ಕುಮಾರಸ್ವಾಮಿ
Food Department Operation: ಬಿಪಿಎಲ್ ಚೀಟಿದಾರರಿಗೆ ಎಪಿಎಲ್ ಕಾವು!
MUST WATCH
ಹೊಸ ಸೇರ್ಪಡೆ
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ವಿಧಿವಶ
SMAT 2024: ಸಯ್ಯದ್ ಮುಷ್ತಾಕ್ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ
ಹೆದ್ದಾರಿ ತಡೆ ನಡೆಸಿದ ಆರೋಪ; ಸುಳ್ಯ, ಬೈಂದೂರು ಶಾಸಕರ ಸಹಿತ ಹಲವರ ವಿರುದ್ಧ ಪ್ರಕರಣ
IPL Auction: ಸಂಪೂರ್ಣ ಐಪಿಎಲ್ ಹರಾಜು ನಡೆಸಲಿದ್ದಾರೆ ಮಲ್ಲಿಕಾ ಸಾಗರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.