Black Days: ಜಮೀರ್+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್.ಡಿ.ಕುಮಾರಸ್ವಾಮಿ
ಸಚಿವ ಜಮೀರ್ ಅವರನ್ನು "ಕುಳ್ಳ' ಎಂದು ಕರೆದೇ ಇಲ್ಲ, ಆ ಐವರ ಜತೆಗಿದ್ದದ್ದು ಕರಾಳ ದಿನಗಳು: ಕೇಂದ್ರ ಸಚಿವ
Team Udayavani, Nov 16, 2024, 7:40 AM IST
ಮೈಸೂರು: ಸಚಿವ ಜಮೀರ್ ಅಹ್ಮದ್ ಮತ್ತು ಆ ನಾಲ್ವರ ಜತೆ ಇದ್ದದ್ದು ನನ್ನ ಜೀವನದ ಅತ್ಯಂತ ಕರಾಳ ದಿನಗಳು. ಅವನ್ನು ಕೊಚ್ಚೆ ಎಂದು ಈಗ ದೂರ ಇಟ್ಟಿದ್ದೇನೆ. ಕೊಚ್ಚೆಗಳ ಬಗ್ಗೆ ಪದೇ ಪದೆ ಯಾಕೆ ಮಾತನಾಡಿಸುತ್ತೀರಿ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಪ್ರಶ್ನಿಸಿದರು.
ಜಮೀರ್ ಹೇಳಿಕೆಗೆ ಸಂಬಂಧಿಸಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿ, ಆ ವ್ಯಕ್ತಿ ಬಗ್ಗೆ ನನ್ನ ಬಳಿ ಚರ್ಚೆ ಮಾಡಬೇಡಿ. ಅವರ ಸಹಿತ ಐದಾರು ಜನ ರೊಂದಿಗೆ ಸಂಬಂಧ ಬೆಳೆಸಿದ್ದು ನನ್ನ ಜೀವ ನದ ಕರಾಳ ಅಧ್ಯಾಯ. ಅಂತಹವರಿಂದ ದೂರ ಈಗ ಎಚ್ಚರಿಕೆಯಿಂದ ಇದ್ದೇನೆ ಎಂದರು.
ತಮಗೆ ಮೋಸ ಮಾಡಿದ ದಿನ ನಾನು ಏನಾಗುತ್ತೇನೆ ಎಂದು ನೂರು ಬಾರಿ ಜಮೀರ್ ಹೇಳಿದ್ದಾನೆ. ಆ ಪದ ಯಾವುದು ಎಂಬುದನ್ನು ನನ್ನ ಬಾಯಿಯಿಂದ ಹೇಳಿಸಬೇಡಿ. ಅದು ಅತ್ಯಂತ ಕೆಟ್ಟ ಪದ. ನನಗೆ ಅದನ್ನ ಸಾರ್ವಜನಿಕವಾಗಿ ಬಳಸಲು ಆಗುತ್ತಿಲ್ಲ. ಕುಮಾರಸ್ವಾಮಿ ಮತ್ತು ಜೆಡಿಎಸ್ ಕಥೆಯೇ ಮುಗಿಯಿತು ಅಂದುಕೊಂಡಿದ್ದರು. ಆದರೆ ಈಗ ಮತ್ತೆ ನಮಗೆ ಶಕ್ತಿ ಬಂದಿದೆ. ಅದನ್ನು ತಡೆದುಕೊಳ್ಳಲು ಆಗದೆ ಈ ರೀತಿ ಮಾತನಾಡುತ್ತಿದ್ದಾರೆ ಎಂದರು.
ಜನಾಂಗೀಯ ನಿಂದನೆಗೆ ಬೇಸರ
ನನ್ನ ಮತ್ತು ಜಮೀರ್ ಆತ್ಮೀಯತೆ ರಾಜಕೀಯವಾಗಿ ಮಾತ್ರ. ನಾನು ಅವರನ್ನು ಕುಳ್ಳ ಎಂದು ಕರೆದೇ ಇಲ್ಲ ಎಂದು ಕುಮಾರಸ್ವಾಮಿ ಹೇಳಿದರು.
ಚಾಮುಂಡಿಬೆಟ್ಟದಲ್ಲಿ ದೇವಿಗೆ ವಿಶೇಷ ಪೂಜೆ ಸಲ್ಲಿ ಸಿದ ಬಳಿಕ ಸುದ್ದಿಗಾರರೊಂದಿಗೆ ತಮ್ಮ ಬಗ್ಗೆ ಸಚಿವ ಜಮೀರ್ ಅಹ್ಮದ್ ವರ್ಣಭೇದ ಹಾಗೂ ಜನಾಂಗೀಯ ನಿಂದನೆ ಮಾಡಿರುವ ಬಗ್ಗೆ ಬೇಸರ ವ್ಯಕ್ತಪಡಿಸಿ, ಸಣ್ಣ ಸಣ್ಣ ವಿಷಯಕ್ಕೂ ಕೇಸು ಜಡಿದು ಜೈಲಿಗೆ ಹಾಕುವ ಸಿದ್ದರಾಮಯ್ಯ ಸರಕಾರ ಅವರು ಈಗೇಕೆ ಸುಮ್ಮನಿದೆ ಎಂದು ಪ್ರಶ್ನಿಸಿದರು.
ಜವಾಬ್ದಾರಿಯುತ ಸ್ಥಾನದಲ್ಲಿರುವ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಹಾಗೂ ಗೃಹ ಸಚಿವರು ಕೆಟ್ಟ ಹೇಳಿಕೆ ಕೊಟ್ಟ ಸಚಿವರ ಮಾತುಗಳನ್ನು ಸಮರ್ಥನೆ ಮಾಡಿಕೊಂಡಿದ್ದಾರೆ. ಇದು ನಾಚಿಕೆಗೇಡು. ಇದನ್ನು ನಾಗರಿಕ ಸರಕಾರ ಎಂದು ಕರೆಯಲು ಸಾಧ್ಯವೇ? ಇಂಥ ಹೇಳಿಕೆಗಳನ್ನು ಕೊಟ್ಟ ಎಷ್ಟು ಜನರ ಮೇಲೆ ಕೇಸ್ ಹಾಕಿ ಜೈಲಿಗೆ ಕಳಿಸಿಲ್ಲ. ಸರಕಾರ ಯಾಕೆ ಸುಮ್ಮನೆ ಇದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಅಂತಹ ಸಂಸ್ಕೃತಿಯಿಂದ ಬಂದಿಲ್ಲ
ಕರಿಯ, ಕುಳ್ಳ ಎಂದು ಇನ್ನೊಬ್ಬರಿಂದ ಹೇಳಿಸಿಕೊಳ್ಳುವ ಸಂಸ್ಕೃತಿಯಿಂದ ನಾನು ಬಂದಿಲ್ಲ. ಆ ವ್ಯಕ್ತಿಯನ್ನು ನಾನೆಂದೂ ಕುಳ್ಳ ಎಂದು ಕರೆದಿಲ್ಲ. ಹಣದ ಮದದಿಂದ ಖರೀದಿ ಮಾಡುವ ಹೇಳಿಕೆ ನೀಡಿದ್ದಾರೆ. ಆತನ ಜತೆ ಸ್ನೇಹ ಇದ್ದದ್ದು ಕೇವಲ ರಾಜಕೀಯವಾಗಿ ಅಷ್ಟೆ ಎಂದು ಕಿಡಿಕಾರಿದರು.
“ನಾನು, ಚಲುವರಾಯಸ್ವಾಮಿ, ಪುಟ್ಟಣ್ಣ, ಜಮೀರ್ ಅಹ್ಮದ್ ಖಾನ್ ಹಾಗೂ ಎಚ್.ಡಿ. ಕುಮಾರಸ್ವಾಮಿ ಜತೆಗೆ ಇದ್ದಾಗ ಪನ್ನೀರಾಗಿದ್ದೆವು. ಇವತ್ತು ನಾವು ಕುಮಾರಸ್ವಾಮಿ ಅವರಿಗೆ ವಿರೋಧಿಗಳಾಗಿದ್ದೇವೆ. ಹಾಗಾಗಿ ಕೊಚ್ಚೆಯಂತೆ ಕಾಣುತ್ತಿದ್ದೇವೆ. ಇಬ್ಬರೂ ತಬ್ಬಿಕೊಂಡ ಮೇಲೆ ಇಬ್ಬರೂ ಕೊಚ್ಚೆಯೇ ತಾನೆ. ನಾವೂ ಕೊಚ್ಚೆ, ಅವರೂ ಕೊಚ್ಚೆ.” – ಎಚ್.ಸಿ. ಬಾಲಕೃಷ್ಣ, ಮಾಗಡಿ ಕಾಂಗ್ರೆಸ್ ಶಾಸಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
Waqf Issue: ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ
Food Department Operation: ಬಿಪಿಎಲ್ ಚೀಟಿದಾರರಿಗೆ ಎಪಿಎಲ್ ಕಾವು!
Shakti scheme; ಪುರುಷರಿಗೆ ಉಚಿತ ಪ್ರಯಾಣ ಸೌಲಭ್ಯ ಇಲ್ಲ: ರಾಮಲಿಂಗಾರೆಡ್ಡಿ
MUST WATCH
ಹೊಸ ಸೇರ್ಪಡೆ
Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು
Jamia Millia Islamia: ಇಸ್ಲಾಂಗೆ ಮತಾಂತರಗೊಳ್ಳಿ ಅಥವಾ ಅತ್ಯಾಚಾರಕ್ಕೆ ಒಳಗಾಗಿ: ಭಾರಿ ಆರೋಪ
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ವಿಧಿವಶ
SMAT 2024: ಸಯ್ಯದ್ ಮುಷ್ತಾಕ್ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.