Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
Team Udayavani, Nov 16, 2024, 11:01 AM IST
ಬೆಳಗಾವಿ: ವಿವಾಹಿತ ಮಹಿಳೆ ಹಾಗೂ ಆಕೆಯ ತಾಯಿಯ ಸೀರೆ ಬಿಚ್ಚಿ ಮಾರಣಾಂತಿಕ ಹಲ್ಲೆ ಮಾಡಿದ ಘಟನೆ ನಗರದ ವಡ್ಡರವಾಡಿಯಲ್ಲಿ ಇತ್ತೀಚೆಗೆ ನಡೆದಿದೆ.
ಗಂಡನ ಮನೆಯಲ್ಲಿ ಸರಿಯಾಗಿ ನೋಡಿಕೊಳ್ಳದ ಕಾರಣದಿಂದ ವಡ್ಡರವಾಡಿಯ ತಾಯಿ ಮನೆಯಲ್ಲಿ ವಾಸವಿರುವ ವಿವಾಹಿತ ಮಹಿಳೆ ಮೇಲೆ ಪಕ್ಕದ ಮನೆಯವರು ಬಂದು ಏಕಾಏಕಿ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಹಲ್ಲೆಗೊಳಗಾದ ಮಹಿಳೆ ನಾಲ್ವರ ವಿರುದ್ಧ ಮಾಳಮಾರುತಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಮಹಿಳೆಯನ್ನು ಮಹಾರಾಷ್ಟ್ರದ ಯುವಕನೊಂದಿಗೆ ಮದುವೆ ಮಾಡಿಕೊಟ್ಟಿದ್ದರು. ಈ ಮಹಿಳೆಗೆ ಎರಡು ಮಕ್ಕಳಿದ್ದು, ಗಂಡನ ಮನೆಯಲ್ಲಿ ಕಿರುಕುಳವಿದ್ದ ಕಾರಣ ವಡ್ಡರವಾಡಿಯ ತಾಯಿಯ ಮನೆಯಲ್ಲಿ ವಾಸವಾಗಿದ್ದರು.
ಪಕ್ಕದ ಮನೆಯವರು ಬಂದು ಅವಾಚ್ಯ ಶಬ್ದದಿಂದ ನಿಂದಿಸುವುದಲ್ಲದೆ ಹಲ್ಲೆ ಮಾಡಿದ್ದಾರೆ. ಇಲ್ಲದ ಆರೋಪ ಮಾಡಿದ್ದಾರೆ. ಕಳೆದ ಸೋಮವಾರ (ನ.11) ಸಂಜೆ ನಮ್ಮ ಮನೆಗೆ ಬಂದು ಏಕಾಏಕಿ ಹಲ್ಲೆ ಮಾಡಿದ್ದಾರೆ ಎಂದು ಮಹಿಳೆ ದೂರು ನೀಡಿದ್ದಾರೆ.
ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ
Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ
Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
Waqf Issue: ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ
Black Days: ಜಮೀರ್+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್.ಡಿ.ಕುಮಾರಸ್ವಾಮಿ
MUST WATCH
ಹೊಸ ಸೇರ್ಪಡೆ
Koppala ಗವಿಮಠ ಜಾತ್ರೆಗೆ ನಟ ಅಮಿತಾಬ್ ಬಚ್ಚನ್?
Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’
Lawyer Jagadish: ಮತ್ತೆ ಬಿಗ್ ಬಾಸ್ಗೆ ಕಾರ್ಯಕ್ರಮಕ್ಕೆ ಲಾಯರ್ ಜಗದೀಶ್ ಎಂಟ್ರಿ..!
Bengaluru: 54 ಎಂಜಿನಿಯರಿಂಗ್ ಸೀಟ್ ಬ್ಲಾಕ್: ಕೆಇಎ ಶಂಕೆ
Hospitalised: ಚಂದ್ರಬಾಬು ನಾಯ್ಡು ಅವರ ಸಹೋದರನ ಆರೋಗ್ಯ ಸ್ಥಿತಿ ಗಂಭೀರ, ಆಸ್ಪತ್ರೆಗೆ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.