Bengaluru: ಭುವನೇಶ್ವರಿ ಪ್ರತಿಮೆಗೆ ಹಾನಿ: ಆಕ್ರೋಶ
ಹೊಸ ತಿಪ್ಪಸಂದ್ರದಲ್ಲಿ ಘಟನೆ; ಸಿಸಿ ಕ್ಯಾಮೆರಾದಲ್ಲಿ ಆರೋಪಿಯ ಕೃತ್ಯ ಬಯಲು
Team Udayavani, Nov 16, 2024, 12:38 PM IST
ಬೆಂಗಳೂರು: ಹೊಸ ತಿಪ್ಪಸಂದ್ರ ಮುಖ್ಯರಸ್ತೆಯ ಬಳಿ ಇರುವ ಭುವನೇಶ್ವರಿ ಪ್ರತಿಮೆಯನ್ನು ಕೆಲ ಕಿಡಿಗೇಡಿಗಳು ವಿರೂಪಗೊಳಿಸಲು ಯತ್ನಿಸಿದ್ದು, ಜೀವನ್ ಭೀಮಾನಗರ ಠಾಣಾ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
ಶುಕ್ರವಾರ ಬೆಳಗ್ಗೆ ಇದನ್ನು ಕಂಡ ಕೆಲವರು ಸ್ಥಳದಲ್ಲಿ ಜಮಾಯಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಳೆದ ಎರಡು ತಿಂಗಳ ಹಿಂದೆಯಷ್ಟೆ ಹೊಸ ತಿಪ್ಪಸಂದ್ರ ಮುಖ್ಯರಸ್ತೆಯ ಬಳಿ ಭುವನೇಶ್ವರಿ ಮೂರ್ತಿ ಪ್ರತಿಷ್ಠಾಪಿಸಲಾಗಿತ್ತು. ಇದನ್ನು ಕಿಡಿಗೇಡಿಗಳು ಹಾನಿಗೊಳಿಸಿದ್ದಾರೆ. ಮುಂಜಾನೆ 4 ಗಂಟೆ ಸುಮಾರಿಗೆ ಕೃತ್ಯ ನಡೆದಿದೆ ಎನ್ನಲಾಗುತ್ತಿದ್ದು, ಸ್ಥಳೀಯ ಸಿಸಿ ಕ್ಯಾಮೆುರಾದಲ್ಲಿ ಆರೋಪಿಯ ಚಲನಾವಲನಾ ಸೆರೆಯಾಗಿದೆ. ಆದರೆ, ಆತ ಮುಖಚಹರೆ ಕಾಣಿಸದಂತೆ ಮುಖ ಮುಚ್ಚಿಕೊಂಡಿದ್ದಾನೆ.
ಸದ್ಯ ವಿಗ್ರಹ ವಿರೂಪಗೊಳಿಸಿದ ಹಿನ್ನೆಲೆಯಲ್ಲಿ ಸ್ಥಳೀಯರು ಮತ್ತು ಕನ್ನಡಾಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಚಾರ ತಿಳಿದ ಸ್ಥಳೀಯರು, ಕೆಲ ಸಂಘಟನೆಗಳ ಕಾರ್ಯಕರ್ತರು ಸ್ಥಳಕ್ಕೆ ಜಮಾಯಿಸಿ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Udupi: ಸಿಎನ್‌ಜಿ ಪೂರೈಕೆಯಲ್ಲಿ ಕೊರತೆಯಾಗದಂತೆ ಕ್ರಮ ಕೈಗೊಳ್ಳಿ: ಸಂಸದ ಕೋಟ ಸೂಚನೆ
BGT: ಟೀಂ ಇಂಡಿಯಾಗೆ ಮತ್ತೆ ಆಘಾತ; ವಿರಾಟ್, ರಾಹುಲ್ ಬಳಿಕ ಮತ್ತೊಬ್ಬ ಬ್ಯಾಟರ್ ಗೆ ಗಾಯ
PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ
Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ
Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.