Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು
ಬೇಕಾಬಿಟ್ಟಿಯಾಗಿ ಖಾಸಗಿ ಲೇ ಔಟ್‌ಗಳ ನಿರ್ಮಿಸಿದರೆ ಯೋಜನಾ ಪ್ರಾಧಿಕಾರದಿಂದ ಅನುಮತಿ ಸಾಧ್ಯವಿಲ್ಲ: ಗೋಪಾಲಕೃಷ್ಣ
Team Udayavani, Nov 16, 2024, 7:35 PM IST
ಸಾಗರ: ನಗರದ ನಾಲ್ಕೂ ದಿಕ್ಕಿನಲ್ಲೂ ಆಶ್ರಯ ಲೇ ಔಟ್ ಮಾಡಿ, ಬಡವರಿಗೆ ನಿವೇಶನ ನೀಡುವ ಉದ್ದೇಶ ಹೊಂದಲಾಗಿದ್ದು, ಎಲ್ಲಾ ಭಾಗದಲ್ಲೂ ಕನಿಷ್ಠ ಹತ್ತು ಎಕರೆ ಸರ್ಕಾರಿ ಜಾಗದಲ್ಲಿ ನಿವೇಶನ ನಿರ್ಮಿಸಿ, ಮೂಲಭೂತ ಸೌಲಭ್ಯ ಒದಗಿಸಿ ಆಶ್ರಯಕ್ಕೆ ಅರ್ಜಿ ಸಲ್ಲಿಸಿ ಕಾಯುತ್ತಿರುವವರಿಗೆ ಹಂಚಿಕೆ ಮಾಡಲಾಗುವುದು ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ತಿಳಿಸಿದರು.
ಇಲ್ಲಿನ ನಗರಸಭೆಯಲ್ಲಿ ಶನಿವಾರ ಸಾಗರ ಯೋಜನಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಈಗಾಗಲೇ ಆಶ್ರಯ ನಿವೇಶನ ಕೋರಿ ನಾಲ್ಕು ಸಾವಿರ ಅರ್ಜಿಗಳು ಹಿಂದಿನ ಸರ್ಕಾರದ ಅವಧಿಯಲ್ಲಿ ಬಂದಿತ್ತು. ಎಲ್ಲರಿಗೂ ನಿವೇಶನ ಕೊಡಲು ಸಾಧ್ಯವಿಲ್ಲ. ಕನಿಷ್ಠ 2ರಿಂದ 3 ಸಾವಿರ ಜನರಿಗಾದರೂ ನಿವೇಶನ ಕೊಡಬೇಕು ಎನ್ನುವುದು ನಮ್ಮ ಉದ್ದೇಶ. ಈ ಹಿನ್ನೆಲೆಯಲ್ಲಿ ಬಳಸಗೋಡು ಬಳಿ 20 ಎಕರೆ, ಯಲಗಳಲೆ ಬಳಿ 10 ಎಕರೆ ಸರ್ಕಾರಿ ಭೂಮಿ ಗುರುತಿಸಲಾಗಿದೆ ಎಂದರು.
ಲೇ ಔಟ್‌ಗಳಲ್ಲಿ ಮೂಲಭೂತ ಸೌಲಭ್ಯ ಅಗತ್ಯ:
ನಗರ ವ್ಯಾಪ್ತಿಯಲ್ಲಿ ನಿರ್ಮಿಸುತ್ತಿರುವ ಖಾಸಗಿ ಲೇ ಔಟ್‌ಗಳ ಬೇಕಾಬಿಟ್ಟಿಯಾಗಿ ನಿರ್ಮಿಸಿದರೆ ಪ್ರಾಧಿಕಾರದಿಂದ ಅನುಮತಿ ನೀಡುವುದಿಲ್ಲ. ಲೇಔಟ್‌ಗಳಲ್ಲಿ ಅಗತ್ಯ ಮೂಲಭೂತ ಸೌಲಭ್ಯಗಳು ಇರುವುದು ಕಡ್ಡಾಯ. ನಮ್ಮ ಪ್ರಾಧಿಕಾರದ ಸದಸ್ಯರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಎಲ್ಲವೂ ಕಾನೂನಾತ್ಮಕವಾಗಿ ಇದ್ದರೆ ಮಾತ್ರ ಪರವಾನಗಿ ನೀಡಲು ಶಿಫಾರಸ್ಸು ಮಾಡುತ್ತಾರೆ. ಹಿಂದೆ ವಿನೋಬಾ ನಗರದಲ್ಲಿ ಖಾಸಗಿ ಲೇ ಔಟ್ ಮಳೆಗಾಲದಲ್ಲಿ ಮುಳುಗಿ ಹೋಗಿತ್ತು. ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಈ ಪರಿಸ್ಥಿತಿ ಬೇರೆಡೆ ಬರಬಾರದು ಎನ್ನುವ ಕಾರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.
ಕೆಲವು ಕಡೆಗಳಲ್ಲಿ ಕೆರೆ ಜಾಗ, ಪಾರ್ಕ್‌ಗೆ ಬಿಟ್ಟಿರುವ ಜಾಗ ಒತ್ತುವರಿ ಮಾಡಿ ಮನೆ ಕಟ್ಟಿದ್ದಾರೆ. ಅಂತಹ ಮನೆಗಳ ತೆರವಿಗೆ ಸೂಚನೆ ನೀಡಲಾಗಿದೆ. ಸದ್ಯದಲ್ಲಿಯೇ ಆಶ್ರಯ ಸಮಿತಿ ಸದಸ್ಯರು, ತಹಶೀಲ್ದಾರ್, ಸಾಗರ ಯೋಜನಾ ಪ್ರಾಧಿಕಾರದ ಸದಸ್ಯರ ಒಳಗೊಂಡ ಸಭೆ ಕರೆದು ಆಶ್ರಯ ನಿವೇಶನ ನೀಡಲು ಜಾಗ ಗುರುತಿಸುವ ಕೆಲಸ ಮಾಡಲಾಗುತ್ತದೆ. ಹಿಂದಿನ ಶಾಸಕರು 10-20 94ಸಿ ಹಕ್ಕುಪತ್ರ ಕೊಟ್ಟಿದ್ದು ಬಿಟ್ಟರೆ, ಬಡವರಿಗೆ ನಿವೇಶನ ನೀಡಲಿಲ್ಲ. ನಮ್ಮ ಅವಧಿಯಲ್ಲಿ ಬಡವರಿಗೆ ನಿವೇಶನ ನೀಡುವುದು ನಮ್ಮ ಆದ್ಯತಾ ವಿಷಯಗಳಲ್ಲಿ ಒಂದಾಗಿದೆ ಎಂದು ತಿಳಿಸಿದರು.
ಪೌರಾಯುಕ್ತ ಎಚ್.ಕೆ.ನಾಗಪ್ಪ ಮಾತನಾಡಿದರು. ಸಭೆಯಲ್ಲಿ ಪ್ರಾಧಿಕಾರದ ಸದಸ್ಯರಾದ ಸೋಮಶೇಖರ ಲ್ಯಾವಿಗೆರೆ, ಐ.ಎನ್.ಸುರೇಶಬಾಬು, ಮರಿಯಾ ಲೀಮಾ ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid ವೇಳೆ ಜೀವ ಉಳಿಸುವ ಕೆಲಸ ಮಾಡಿದ್ದೇವೆ: ಬಿಎಸ್‌ವೈ
Shivamogga: ಆಸ್ಪತ್ರೆಯಲ್ಲಿನ ತೆರೆದ ನೀರಿನ ತೊಟ್ಟಿಗೆ ಬಿದ್ದು ಮಗು ಮೃತ್ಯು!
Shimoga; ವಿಜಯೇಂದ್ರರನ್ನು ಕಟ್ಟಿ ಹಾಕಲು ಕಾಂಗ್ರೆಸ್ ನಿಂದ ಸುಳ್ಳು ಆರೋಪ: ರಾಘವೇಂದ್ರ
Anandapura: ಸಾಲ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
Shimoga: ಎಸ್ಐಟಿ ರಚನೆ ಮೂಲಕ ಕಾಂಗ್ರೆಸ್ ಹಗೆ ತೀರಿಸಿಕೊಳ್ಳುತ್ತಿದೆ: ಆರಗ ಜ್ಞಾನೇಂದ್ರ
MUST WATCH
ಹೊಸ ಸೇರ್ಪಡೆ
Belgavi; ವೇಶ್ಯಾವಾಟಿಕೆ ಆರೋಪ: ತಾಯಿ, ಮಗಳನ್ನು ರಸ್ತೆಗೆ ಎಳೆದು ಹಲ್ಲೆ!
Snehamayi Krishna ವಿರುದ್ಧ ಕಾಂಗ್ರೆಸ್‌ನಿಂದ ಪೊಲೀಸರಿಗೆ ಮತ್ತೊಂದು ದೂರು
Covid ವೇಳೆ ಜೀವ ಉಳಿಸುವ ಕೆಲಸ ಮಾಡಿದ್ದೇವೆ: ಬಿಎಸ್‌ವೈ
Waqf issue; ಬಿಜೆಪಿಯಿಂದ ಕೋಮು ಗಲಭೆಗೆ ಯತ್ನ: ಕಾಂಗ್ರೆಸ್
Kumaraswamy ಅವರಿಗೆ ಜತೆಗಿರುವಾಗ ಕೊಚ್ಚೆ ವಾಸನೆ ಬರಲಿಲ್ಲವೇ?: ಚಲುವರಾಯಸ್ವಾಮಿ ತಿರುಗೇಟು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.