Lokayukta: ಖಜಾನೆ ಇಲಾಖೆ ಉಪನಿರ್ದೇಶಕ, ಸಹಾಯಕ ಲೋಕಾಯುಕ್ತ ಬಲೆಗೆ
Team Udayavani, Nov 17, 2024, 6:55 AM IST
ಉಡುಪಿ: ನಿವೃತ್ತ ಶಿಕ್ಷಕರೊಬ್ಬರಿಗೆ ಪಿಂಚಣಿ ಹಣವನ್ನು ಬಿಡುಗಡೆಗೊಳಿಸಲು ಲಂಚ ಪಡೆಯುತ್ತಿದ್ದ ವೇಳೆ ಉಡುಪಿ ಖಜಾನೆಯ ಉಪನಿರ್ದೇಶಕರು ಹಾಗೂ ಸಹಾಯಕ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಶನಿವಾರ ನಡೆದಿದೆ.
ನಿವೃತ್ತ ಶಿಕ್ಷಕ ಹಿತೇಂದ್ರ ಭಂಡಾರಿ ಎಂಬವರು ತಮ್ಮ ಪಿಂಚಣಿ ಹಣವನ್ನು ಪಡೆಯಲು ಕಳೆದ 5 ತಿಂಗಳಿನಿಂದ ಖಜಾನೆಯ ಉಪನಿರ್ದೇಶಕರಾದ ರವಿಕುಮಾರ್ ಮತ್ತು ಸಹಾಯಕ ರಾಘವೇಂದ್ರ ಎಂಬವರು ಸತಾಯಿಸುತ್ತಿದ್ದು 5 ಸಾವಿರ ರೂ. ಲಂಚ ನೀಡುವಂತೆ ಒತ್ತಾಯಿಸಿದ್ದರು. ಈ ಬಗ್ಗೆ ಹಿತೇಂದ್ರ ಭಂಡಾರಿಯವರು ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದರು.
ಈ ದೂರಿನಂತೆ ಶನಿವಾರು ಉಡುಪಿ ಪ್ರಭಾರ ಲೋಕಾಯುಕ್ತ ಡಿವೈಎಸ್ಪಿ ಮಂಜುನಾಥ್ ಅವರ ತಂಡ ಹಾಗೂ ಮಂಗಳೂರು ಲೋಕಾಯುಕ್ತ ಸುರೇಶ್ ಹಾಗೂ ಕೆ.ಎನ್. ಚಂದ್ರಶೇಖರ್ ಅವರನ್ನೊಳಗೊಂಡ ತಂಡ ದಾಳಿ ನಡೆಸಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಖಜಾನೆಯ ಉಪನಿರ್ದೇಶಕರು, ಸಹಾಯಕನನ್ನು ವಶಕ್ಕೆ ಪಡೆದಿದ್ದಾರೆ.
ಕಾರ್ಯಾಚರಣೆಯಲ್ಲಿ ಲೋಕಾಯುಕ್ತ ಸಿಬಂದಿ ನಾಗರಾಜ, ಸತೀಶ್, ಪ್ರಸನ್ನ, ರಮೇಶ್, ಸೂರಜ್, ಸುಧೀರ್, ರಾಘವೇಂದ್ರ, ಪುಷ್ಪಲತಾ, ಮಲ್ಲಿಕಾ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipal: ಗ್ರಾಮೀಣ ಓದುಗರ ಸ್ಪಂದನೆಯೇ ಯಶಸ್ಸು: ಎಂಡಿ, ಸಿಇಒ ವಿನೋದ್ ಕುಮಾರ್
Udupi: ರೈಲು ಬಡಿದು ವ್ಯಕ್ತಿ ಸಾವು
Udupi: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ; 8 ಲಕ್ಷ ಮೌಲ್ಯದ ಗಾಂಜಾ ವಶಕ್ಕೆ
Karkala: ಬಾವಿಗೆ ಬಿದ್ದು ವ್ಯಕ್ತಿ ಸಾವು; ಮೃತದೇಹ ಮೇಲಕ್ಕೆತ್ತಿದ ಅಗ್ನಿಶಾಮಕ ಪಡೆ
Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ
MUST WATCH
ಹೊಸ ಸೇರ್ಪಡೆ
Mike Tyson: ವಿದಾಯದ ಸುಳಿವು ನೀಡಿದ ಬಾಕ್ಸಿಂಗ್ ದಿಗ್ಗಜ ಮೈಕ್ ಟೈಸನ್
Patna: ಆಸ್ಪತ್ರೆಯಲ್ಲಿ ಮೃತಪಟ್ಟ ರೋಗಿಯ ಕಣ್ಣೇ ಮಾಯಾ… ಇಲಿ ತಿಂದಿದೆ ಎಂದ ವೈದ್ಯರು
Team India: ವಿರಾಟ್ ಕೊಹ್ಲಿ ದಾಖಲೆ ಮುರಿದ ತಿಲಕ್ ವರ್ಮಾ
Master Rohit: ರಸ್ತೆ ಅಪಘಾತ ʼಕಾಟೇರʼ ಬಾಲನಟ ರೋಹಿತ್ಗೆ ಗಂಭೀರ ಗಾಯ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.