Dharawad: ಬಿಜೆಪಿಯವರಿಗೆ ವಕ್ಫ್ ಬಿಟ್ಟು ಬೇರೆ ವಿಷಯವೇ ಇಲ್ಲ: ಸಚಿವ ಸಂತೋಷ್ ಲಾಡ್
ಚುನಾವಣೆ ಬಾಂಡ್, ಎಲ್ಲಕ್ಕಿಂತ ಹೆಚ್ಚು ರೈತರು ಮಹಾರಾಷ್ಟ್ರದಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಅದು ಕೂಡ ವಿಷಯ ಅಲ್ಲವೇ?
Team Udayavani, Nov 16, 2024, 10:07 PM IST
ಧಾರವಾಡ: ಬಿಜೆಪಿಯವರಿಗೆ ವಕ್ಫ್ ಬಿಟ್ಟು ಬೇರೆ ವಿಷಯವೇ ಇಲ್ಲವೇ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ಪ್ರಶ್ನಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿ, 2014ರ ಬಿಜೆಪಿ ಪ್ರಣಾಳಿಕೆಯನ್ನು ಇವರು ಓದಿದ್ದಾರಾ? ಅದರಲ್ಲಿ ಏನಿದೆ ಎಂದು ಬಿಜೆಪಿಯವರನ್ನು ಕೇಳಬೇಕು. ವಕ್ಫ್ ಬಿಟ್ಟರೆ ಬಿಜೆಪಿಯವರಿಗೆ ಬೇರೆ ವಿಷಯವೇ ಇಲ್ಲದಂತಾಗಿದೆ. ಕರ್ನಾಟಕದಲ್ಲಿ ಬಿಜೆಪಿ ಅಧಿಕಾರದಲ್ಲಿ ಇದ್ದಾಗಲೂ ರೈತರಿಗೆ ನೋಟಿಸ್ ಕೊಡಲಾಗಿದೆ. ವಕ್ಫ್ ನೋಟಿಸ್ ಕೊಡುತ್ತಿದ್ದಂತೆಯೇ ಮುಜರಾಯಿ ಇಲಾಖೆಯವರೂ ನೋಟಿಸ್ ಕೊಡುತ್ತಾರೆ. ಈಗಾಗಲೇ ಈ ಬಗ್ಗೆ ಸಿಎಂ ಸ್ಪಷ್ಟೀಕರಣ ಕೊಟ್ಟಿದ್ದಾರೆ ಎಂದರು.
ಉತ್ತರ ಪ್ರದೇಶದಲ್ಲಿ ಐಸಿಯುದಲ್ಲಿದ್ದ 10 ನವಜಾತ ಶಿಶುಗಳು ಸಾವನ್ನಪ್ಪಿವೆ. ಇದರ ಬಗ್ಗೆ ಮಾತನಾಡುವುದು ಬೇಡವೇ? ದೇಶದಲ್ಲಿ ಈಗಿರುವ ಬರ್ನಿಂಗ್ ಇಶ್ಯೂ ಏನು? ವಕ್ಫ್ ಬಿಟ್ಟರೆ ಬೇರೆ ಏನೂ ಬರ್ನಿಂಗ್ ಇಶ್ಯೂ ಇಲ್ಲವೇ? ಸಾರ್ವಜನಿಕರಿಗೆ ಸಮಸ್ಯೆ ಉಂಟು ಮಾಡುವ ವಿಷಯಗಳೇ ಬಿಜೆಪಿಯವರಿಗೆ ಬೇಕು. ದಿನ ಬೆಳಗಾದರೆ ಹಿಂದೂ, ಮುಸ್ಲಿಂ ಎನ್ನುತ್ತಾರೆ ಎಂದು ಕಿಡಿಕಾರಿದರು.
ಮಹಾರಾಷ್ಟ್ರ ಚುನಾವಣೆ ಮೇಲೆ ವಕ್ಫ್ ವಿಚಾರ ಪ್ರಭಾವ ಬೀರುತ್ತದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, ಚುನಾವಣೆ ಬಾಂಡ್ ಕೂಡ ವಿಷಯ ಅಲ್ಲವೇ? ಎಲ್ಲಕ್ಕಿಂತ ಹೆಚ್ಚು ರೈತರು ಮಹಾರಾಷ್ಟ್ರದಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ವಿಚಾರವಾಗಿ ಚರ್ಚೆ ಆಗುವುದಿಲ್ಲವೇ? ಷೇರುಪೇಟೆ ಬಿದ್ದಿದೆ. ಅದರ ಪರಿಣಾಮ ಚುನಾವಣೆ ಮೇಲೆ ಆಗುವುದಿಲ್ಲವೇ? ಮುಂಬೈ ಐಐಟಿಯ ಶೇ.38 ಯುವಕರಿಗೆ ಕೆಲಸ ಸಿಕ್ಕಿಲ್ಲ. ಮದ್ರಾಸ್ ಐಐಟಿಯವರಿಗೆ ಕೆಲಸ ಸಿಕ್ಕಿಲ್ಲ. ಇದರ ಪರಿಣಾಮ ಚುನಾವಣೆ ಮೇಲೆ ಆಗುವುದಿಲ್ಲವೇ? ಎಂದು ಪ್ರಶ್ನಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ
KLE Technological University: ಮುರುಗೇಶ್ ನಿರಾಣಿ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ
NABARD ನಿರ್ಧಾರದಿಂದ ಕೃಷಿಗೆ ಹಿನ್ನಡೆ; ಸಾಲದ ಮೊತ್ತ ಕಡಿತ ಮಾಡದಿರಲು ಸಚಿವ ಪಾಟೀಲ ಆಗ್ರಹ
ಸಿಎಂ ಆಗಿದ್ದವರು ಈ ರೀತಿ ಹೇಳಿಕೆ ನೀಡುವ ಬದಲು, ಸ್ಪಷ್ಟ ಹೇಳಿಕೆ ನೀಡಲಿ: ಸಚಿವ ಶಿವಾನಂದ
dharwad: ಪೊಲೀಸ್ ಪೇದೆ ಮೇಲೆ ಕೈ ಮುಖಂಡ ತಮಟಗಾರ ಸಹೋದರ ಬ್ಲೇಡ್ ನಿಂದ ಹಲ್ಲೆ
MUST WATCH
ಹೊಸ ಸೇರ್ಪಡೆ
Udupi; ಗೀತಾರ್ಥ ಚಿಂತನೆ 96 : ವ್ಯಾಮೋಹ ಜಾಲ vs ಜಾಗೃತಾತ್ಮ
Uppunda: ಶ್ರೀದುರ್ಗಾಪರಮೇಶ್ವರಿ ಅಮ್ಮನವರ ಸಂಭ್ರಮದ ಮನ್ಮಹಾರಥೋತ್ಸವ
Udupi: ಗೋವಿಂದ ಪೈಗಳ ಸಂಶೋಧನ ಬರಹಗಳು ಸಮಗ್ರತೆಯ ಹೂರಣ: ಡಾ.ವಿವೇಕ್ ರೈ
MLAs 50 ಕೋಟಿ ರೂ.; ಸಾಕ್ಷಿ ಕೊಡುವ ಹೊಣೆ ಯತ್ನಾಳ್‌ದು: ಡಿಕೆಶಿ
Mangaluru: ಎಲ್ಲ ವರ್ಗದ ಜನರ ಸಹಕಾರದಿಂದ ಸಾಮಾಜಿಕ ಸಾಧನೆ: ಕನ್ಯಾನ ಸದಾಶಿವ ಶೆಟ್ಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.