Udupi: ಕಸ್ತೂರಿ ರಂಗನ್ ವರದಿ ಬಗ್ಗೆ ಯಾರೂ ಆತಂಕಪಡಬೇಕಿಲ್ಲ: ಕೋಟ ಶ್ರೀನಿವಾಸ ಪೂಜಾರಿ
ಜನವಸತಿ ಪ್ರದೇಶ, ವಸತಿ ಪ್ರದೇಶ, ಮನೆಗಳ ನಿರ್ಮಾಣ ಸಹಿತ ಮೂಲಸೌಕರ್ಯಗಳಿಗೆ ಕುತ್ತು: ಸಂಸದ
Team Udayavani, Nov 17, 2024, 6:45 AM IST
ಮಣಿಪಾಲ: ಡಾ| ಕೆ. ಕಸ್ತೂರಿ ರಂಗನ್ ನೇತೃತ್ವದ ಉನ್ನತ ಮಟ್ಟದ ಕಾರ್ಯತಂಡದ ಆಧಾರದ ಮೇಲೆ ಪಶ್ಚಿಮ ಘಟ್ಟಗಳನ್ನು ಪರಿಸರ ಸೂಕ್ಷ್ಮ ಪ್ರದೇಶವೆಂದು ಘೋಷಿಸಿರುವ ಕರಡು ಅಧಿಸೂಚನೆ ವರದಿಯನ್ನು ಸಂಪೂರ್ಣವಾಗಿ ತಿರಸ್ಕರಿಸಲು ರಾಜ್ಯ ಸರಕಾರ ನಿರ್ಧರಿಸಿದೆ. ಈ ಬಗ್ಗೆ ಯಾರೂ ಆತಂಕಪಡುವ ಅಗತ್ಯವಿಲ್ಲ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಜಿ.ಪಂ. ಡಾ| ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ಪರಸರ ಸೂಕ್ಷ್ಮ ಪ್ರದೇಶ ಮತ್ತು ಕಸ್ತೂರಿ ರಂಗನ್ ವರದಿ ಬಗ್ಗೆ ಚರ್ಚಿಸಲು ಆಯೋಜಿಸಲಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ ಸರಕಾರದ ಅರಣ್ಯ ಕಾಯ್ದೆಗಳು ಅರಣ್ಯ ಇಲಾಖೆಯ ನೀತಿ ನಿಯಮಗಳಿಂದ ನಿರಂತರ ತೊಂದರೆ ಅನುಭವಿಸುತ್ತಿರುವ ಕಾಡಂಚಿನ ನಿವಾಸಿಗಳಿಗೆ ಕಸ್ತೂರಿ ರಂಗನ್ ವರದಿ ಜಾರಿಯಾದರೆ ವಿದ್ಯುತ್, ರಸ್ತೆ, ಸೇತುವೆ, ಕುಡಿಯುವ ನೀರು, ಜನವಸತಿ ಪ್ರದೇಶ, ವಸತಿ ಪ್ರದೇಶ, ಮನೆಗಳ ನಿರ್ಮಾಣ ಸಹಿತ ಮೂಲಸೌಕರ್ಯಗಳಿಗೆ ಕುತ್ತು ಬಂದು ಭವಿಷ್ಯದಲ್ಲಿ ಜನ ಜೀವನಕ್ಕೆ ಅನಾನುಕೂಲ ಉಂಟಾಗಬಹುದು ಎಂಬ ಆತಂಕ ಹೆಚ್ಚಿದೆ. ಸದ್ಯದ ಪರಿಸ್ಥಿತಿಯಲ್ಲಿ ಪಶ್ಚಿಮ ಘಟ್ಟದ ಪರಿಸರ ಸೂಕ್ಷ್ಮ ಪ್ರದೇಶವೆಂದು ಘೋಷಿಸುವ ಬಗ್ಗೆ ಕಸ್ತೂರಿ ರಂಗನ್ ವರದಿ ಆಧರಿಸಿದ ಕರಡು ಅಧಿಸೂಚನೆಯನ್ನು ರಾಜ್ಯ ಸರಕಾರ ತಿರಸ್ಕರಿಸಿದೆ ಎಂದರು.
ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿ, ಶಾಸಕರಾದ ಎ.ಕಿರಣ್ ಕುಮಾರ್ ಕೊಡ್ಗಿ, ಗುರುರಾಜ ಶೆಟ್ಟಿ ಗಂಟಿಹೊಳೆ ಮಾತನಾಡಿದರು. ಜಿಪಂ ಸಿಇಒ ಪ್ರತೀಕ್ ಬಾಯಲ್, ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್., ಕಾರ್ಕಳ ಕುದುರೆಮುಖ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಶಿವರಾಮ್ ಬಾಬು ಎಂ., ಜಿಲ್ಲಾ ಮಟ್ಟದ ಅಧಿಕಾರಿಗಳು, ತಹಶೀಲ್ದಾರ್‌ಗಳು, ತಾ.ಪಂ. ಇಒಗಳು, ಅಧಿಸೂಚಿತ ಗ್ರಾ.ಪಂ.ಗಳ ಪಿಡಿಒಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Patna: ಆಸ್ಪತ್ರೆಯಲ್ಲಿ ಮೃತಪಟ್ಟ ರೋಗಿಯ ಕಣ್ಣೇ ಮಾಯಾ… ಇಲಿ ತಿಂದಿದೆ ಎಂದ ವೈದ್ಯರು
Team India: ವಿರಾಟ್ ಕೊಹ್ಲಿ ದಾಖಲೆ ಮುರಿದ ತಿಲಕ್ ವರ್ಮಾ
Master Rohit: ರಸ್ತೆ ಅಪಘಾತ ʼಕಾಟೇರʼ ಬಾಲನಟ ರೋಹಿತ್‌ಗೆ ಗಂಭೀರ ಗಾಯ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Re Release: ದರ್ಶನ್ ಮತ್ತೊಂದು ಚಿತ್ರ ಮರು ಬಿಡುಗಡೆ: ರೀರಿಲೀಸ್‌ನತ್ತ ಸಂಗೊಳ್ಳಿ ರಾಯಣ್ಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.