Mangaluru: ವೆನ್ಲಾಕ್ ಆಸ್ಪತ್ರೆ 10 ಕೋಟಿ ರೂ. ವೆಚ್ಚದಲ್ಲಿ ಆಧುನೀಕರಣ: ಸಚಿವ ದಿನೇಶ್
ಡಿಸೆಂಬರ್‌ನಿಂದ ರಾಜ್ಯದ 10 ಜಿಲ್ಲೆಗಳಲ್ಲಿ ಎಂಆರ್‌ಐ, ಸಿಟಿ ಸ್ಕಾನ್ ಸೇವೆ ಆರಂಭ: ಆರೋಗ್ಯ ಸಚಿವ
Team Udayavani, Nov 17, 2024, 7:25 AM IST
ಮಂಗಳೂರು: ಸರಕಾರಿ ವೆನ್ಲಾಕ್ ಆಸ್ಪತ್ರೆಯನ್ನು ಸುಮಾರು 10 ಕೋ. ರೂ. ವೆಚ್ಚದಲ್ಲಿ ಆಧುನೀಕರಣಗೊಳಿಸಲಾಗುವುದು. ಈ ಮೂಲಕ ಮತ್ತಷ್ಟು ಗುಣಮಟ್ಟದ ಸೇವೆಗೆ ಆದ್ಯತೆ ನೀಡಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಲೇಡಿಗೋಷನ್ ಆಸ್ಪತ್ರೆಯಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವೆನ್ಲಾಕ್ ಆಸ್ಪತ್ರೆಯಲ್ಲಿ ಸುಮಾರು 24 ಕೋಟಿ ರೂ. ವೆಚ್ಚದಲ್ಲಿ ಕ್ರಿಟಿಕಲ್ ಕೇರ್ ವಿಭಾಗ ಕಾಮಗಾರಿ ಆರಂಭವಾಗಲಿದೆ. ಸುಮಾರು 1 ಕೋಟಿ ರೂ. ವೆಚ್ಚದಲ್ಲಿ ಐಪಿಎಚ್‌ಎಲ್ ಪ್ರಯೋಗಾಲಯ ತೆರೆಯಲಾಗುವುದು. ಟ್ರಾಮಾ ಸೆಂಟರ್ ಲ್ಯಾಬ್-ಉಪಕರಣ ಖರೀದಿ ಮಾಡಲಾಗುವುದು. ಅಲ್ಲದೆ ಶವಾಗಾರ, ಪಾರಾ ಮೆಡಿಕಲ್ ಕಟ್ಟಡ, ಪೋಸ್ಟ್ ಮಾರ್ಟಂ ಕೊಠಡಿ, ಅಡುಗೆ ಕೋಣೆ, ಎರಡೂ ಕಟ್ಟಡದ ನಡುವಣ ಸಂಪರ್ಕಕ್ಕೆ ಸೇತುವೆ ನಿರ್ಮಾಣ ಮಾಡಲಾಗುತ್ತದೆ. ಅಂದಾಜು ಮೂಲ ಕಾಮಗಾರಿಗಳಿಗೆ ವಿವಿಧ ಸಂಸ್ಥೆಗಳ ಸಿಎಸ್‌ಆರ್ ಫಂಡ್‌ನಿಂದ ಪಡೆಯುವ ಜತೆಗೆ ಇಲಾಖೆಯಿಂದಲೂ ಅನುದಾನ ಒದಗಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ವೆನ್ಲಾಕ್ ಆಸ್ಪತ್ರೆಯಲ್ಲಿರುವ ಎಂಆರ್‌ಐ ಮತ್ತು ಸಿಟಿ ಸ್ಕಾನ್‌ಗೆ ಸಾರ್ವಜನಿಕರಿಂದ ಹಣ ವಸೂತಿ ಮಾಡುತ್ತಿರುವ ಬಗ್ಗೆ ದೂರು ಬರುತ್ತಿದೆ. ಎಚ್‌ಎಎಲ್‌ನವರು ಇಲ್ಲಿ ಈ ಎಂಆರ್‌ಐ ಯಂತ್ರಗಳನ್ನು ನಿರ್ವಹಿಸುತ್ತಿರುವುದರಿಂದ ಈ ಗೊಂದಲ ಇದೆ ಎನ್ನಲಾಗಿದ್ದು, ಉಚಿತವಾಗಿ ನೀಡಲು ಸಾಧ್ಯವಾಗದಿದ್ದರೆ ಅವರ ಸೌಲಭ್ಯವನ್ನು ರದ್ದುಪಡಿಸಿ ನಾವೇ ಹೊಸ ಯಂತ್ರವನ್ನು ತರಿಸಿ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ. ರೋಗಿಗಳಿಗೆ ಉಚಿತ ಸೇವೆ ಸಿಗಬೇಕು. ಈ ನಿಟ್ಟಿನಲ್ಲಿ ಸಮಸ್ಯೆ ಇತ್ಯರ್ಥಕ್ಕೆ ಸೂಚಿಸಿದ್ದೇನೆ. ರಾಜ್ಯದ ಸುಮಾರು 10 ಜಿಲ್ಲೆಗಳಲ್ಲಿ ಡಿಸೆಂಬರ್‌ನಿಂದ ಎಂಆರ್‌ಐ ಮತ್ತು ಸಿಟಿ ಸ್ಕಾನ್ ಸೇವೆ ಆರಂಭಗೊಳ್ಳಲಿದೆ ಎಂದು ಹೇಳಿದರು.
ಅಡ್ಡೂರು ಪೊಳಲಿ, ಉಳಾಯಿಬೆಟ್ಟು ಸೇತುವೆ ದುರಸ್ತಿ
ಅಡ್ಡೂರು- ಪೊಳಲಿ ಸೇತುವೆಯನ್ನು 6.10 ಕೋ. ರೂ. ಹಾಗೂ ಉಳಾಯಿಬೆಟ್ಟು ಸೇತುವೆಯನ್ನು 5 ಕೋ. ರೂ. ವೆಚ್ಚದಲ್ಲಿ ದುರಸ್ತಿಗೊಳಿಸುವ ಬಗ್ಗೆ ಅಂದಾಜು ಪಟ್ಟಿ ತಯಾರಿಸಲಾಗಿದೆ. ಈ ಬಗ್ಗೆ ಸಚಿವ ಸತೀಶ್ ಜಾರಕಿಹೊಳಿಯವರ ಜತೆಗೂ ಚರ್ಚಿಸಲಾಗಿದೆ. ಪೊಳಲಿಯಲ್ಲಿ ಹೊಸ ಸೇತುವೆ ನಿರ್ಮಾಣ ಮಾಡಲು ಸುಮಾರು 60 ಕೋಟಿ ರೂ. ಅಗತ್ಯವಿದೆ. ಇದಕ್ಕೂ ಮುಂದಿನ ದಿನಗಳಲ್ಲಿ ಕ್ರಮ ವಹಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವರು ತಿಳಿಸಿದರು.
ಹೊಸ ಒಪಿಡಿ ಬ್ಲಾಕ್
ವೆನ್ಲಾಕ್‌ನಲ್ಲಿ ಅಗತ್ಯತೆಗೆ ಅನುಗುಣವಾಗಿ ನೂತನ ಒಪಿಡಿ ಬ್ಲಾಕ್ ಆರಂಭಿಸುವ ಬೇಡಿಕೆ ಇದೆ. ಈ ನಿಟ್ಟಿನಲ್ಲಿ ಕೆಎಂಸಿ ಆಸ್ಪತ್ರೆಯ ಆಡಳಿತ ವಿಭಾಗದ ಜತೆ ಮಾತುಕತೆ ನಡೆಸಲಾಗಿದೆ. ಸದ್ಯದಲ್ಲೇ ಮುಖ್ಯಮಂತ್ರಿಗಳ ಜತೆ ವಿಚಾರ ಪ್ರಸ್ತಾವಿಸಲಾಗುವುದು ಎಂದು ಹೇಳಿದರು. ಜಿಲ್ಲಾ ಆರೋಗ್ಯಾಧಿಕಾರಿ ಡಾ| ತಿಮ್ಮಯ್ಯ, ಲೇಡಿಗೋಶನ್ ಅಧೀಕ್ಷಕ ಡಾ| ದುರ್ಗಾಪ್ರಸಾದ್, ವೆನ್ಲಾಕ್ ಅಧೀಕ್ಷಕ ಡಾ| ಶಿವಕುಮಾರ್, ಪಾಲಿಕೆ ಸದಸ್ಯರಾದ ವಿನಯರಾಜ್, ಅನಿಲ್ ಕುಮಾರ್ ಹಾಗೂ ಇತರರು ಉಪಸ್ಥಿತರಿದ್ದರು.
ವೆನ್ಲಾಕ್ ನಲ್ಲಿ ಡೇ ಕೇರ್ ಕಿಮೋಥೆರಪಿ ವಿಭಾಗ
ರಾಜ್ಯದ ಎಲ್ಲ ಸರಕಾರಿ ಆಸ್ಪತ್ರೆಗಳಲ್ಲಿ 10 ಹಾಸಿಗೆಯ ಕಿಮೋಥೆರಪಿ ವಿಭಾಗ ತೆರೆಯಲು ರಾಜ್ಯ ಸರಕಾರ ನಿರ್ಧರಿಸಿದ್ದು, ಅದರಂತೆ ಜಿಲ್ಲಾ ವೆನ್ಲಾಕ್ ಆಸ್ಪತ್ರೆಯಲ್ಲಿ ಆರಂಭಗೊಳ್ಳಲಿದೆ. ಈ ಸೆಂಟರ್‌ನಲ್ಲಿ ಬೆಳಗ್ಗಿನಿಂದ ಸಂಜೆಯ ಅವಧಿಯಲ್ಲಿ ಕಿಮೋಥೆರಪಿ ಸೌಲಭ್ಯ ಪಡೆಯಬಹುದು. ಜಿಲ್ಲಾಸ್ಪತ್ರೆಗಳಲ್ಲಿ ಆಂಕಾಲಜಿಸ್ಟ್‌ಗಳು ಇಲ್ಲದ ಕಾರಣ ಖಾಸಗಿ ವೈದ್ಯಕೀಯ ಕಾಲೇಜುಗಳ ಸಹಕಾರವನ್ನು ಪಡೆಯಲಾಗುತ್ತಿದ್ದು, ವೆನ್‌ಲಾಕ್‌ನಲ್ಲಿ ಯೇನೆಪೊಯ ಆಸ್ಪತ್ರೆಯ ಸಹಯೋಗದೊಂದಿಗೆ ಸೆಂಟರ್ ಕಾರ್ಯಾಚರಿಸಲಿದೆ. ಮುಖ್ಯಮಂತ್ರಿಗಳು ಮುಂದಿನ ತಿಂಗಳು ಉದ್ಘಾಟನೆ ನೆರವೇರಿಸಲಿದ್ದಾರೆ ಎಂದು ದಿನೇಶ್ ಗುಂಡೂರಾವ್ ಅವರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್ ಕಾರ್ಡ್ ಸ್ಪರ್ಧಿಗಳು ಬಿಗ್‌ಬಾಸ್ ಮನೆಗೆ
Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
Hubli: ದಿವಾಳಿಯಾದ ಸರ್ಕಾರ ಬಿಪಿಎಲ್ ಕಾರ್ಡ್ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ
MUST WATCH
ಹೊಸ ಸೇರ್ಪಡೆ
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್ ಕಾರ್ಡ್ ಸ್ಪರ್ಧಿಗಳು ಬಿಗ್‌ಬಾಸ್ ಮನೆಗೆ
Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
Hubli: ದಿವಾಳಿಯಾದ ಸರ್ಕಾರ ಬಿಪಿಎಲ್ ಕಾರ್ಡ್ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.