G20 Leaders Summit: ಪ್ರಧಾನಿ ಮೋದಿ ನೈಜೀರಿಯಾ, ಬ್ರೆಜಿಲ್, ಗಯಾನಾ ಪ್ರವಾಸ ಶುರು
ಬ್ರೆಜಿಲ್ನಲ್ಲಿ ನಡೆಯುವ ಜಿ20 ಶೃಂಗದಲ್ಲಿ ಭಾಗಿ, ಗಯಾನಾಗೆ ಭಾರತದ ಪ್ರಧಾನಿ ಭೇಟಿ 50 ವರ್ಷದಲ್ಲೇ ಮೊದಲು
Team Udayavani, Nov 17, 2024, 7:40 AM IST
ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿಯವರ 5 ದಿನಗಳ ವಿದೇಶ ಪ್ರವಾಸ ಶನಿವಾರ ಆರಂಭವಾಗಿದ್ದು, 21ರವರೆಗೆ ಅವರು ನೈಜೀರಿಯಾ, ಬ್ರೆಜಿಲ್ ಮತ್ತು ಗಯಾನಾ ದೇಶಗಳಿಗೆ ಭೇಟಿ ನೀಡಲಿದ್ದಾರೆ. ಇದೇ ವೇಳೆ, ಬ್ರೆಜಿಲ್ನಲ್ಲಿ ನಡೆಯಲಿರುವ ಜಿ20 ಶೃಂಗದಲ್ಲೂ ಭಾಗಿಯಾಗಲಿದ್ದಾರೆ.
ಪ್ರವಾಸಕ್ಕೂ ಮುನ್ನ ಮಾತನಾಡಿದ ಪ್ರಧಾನಿ ಮೋದಿ, “ಮೊದಲಿಗೆ ನೈಜೀರಿಯಾ ಅಧ್ಯಕ್ಷ ಬೋಲಾ ಅಹ್ಮದ್ ತಿನುಬು ಆಹ್ವಾನದ ಮೇರೆಗೆ ಆ ದೇಶಕ್ಕೆ ಭೇಟಿ ನೀಡಲಿದ್ದೇನೆ. ನ.16, 17ರಂದು ಭಾರತೀಯ ಸಮುದಾಯದೊಂದಿಗೂ ಮಾತುಕತೆ ನಡೆಸಲಿದ್ದೇನೆ’ ಎಂದಿದ್ದಾರೆ.
ಬಳಿಕ, ಅವರು ಬ್ರೆಜಿಲ್ಗೆ ತೆರಳಲಿದ್ದು, 19ನೇ ಜಿ20 ಶೃಂಗದಲ್ಲಿ ಪಾಲ್ಗೊಳ್ಳಲಿದ್ದಾರೆ. ನ.18 ಮತ್ತು 19ರಂದು ಬ್ರೆಜಿಲ್ನಲ್ಲಿ ಇರುವ ಅವರು, ಪ್ರಮುಖ ವಿಶ್ವ ನಾಯಕರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ.
50 ವರ್ಷಗಳಲ್ಲೇ ಮೊದಲು:
ತಮ್ಮ ಪ್ರವಾಸದ ಕೊನೆಯ ಹಂತದಲ್ಲಿ ಮೋದಿ ಗಯಾನಾ ಅಧ್ಯಕ್ಷ ಮೊಹಮ್ಮದ್ ಇರ್ಫಾನ್ ಅಲಿ ಅವರ ಆಹ್ವಾನದ ಮೇರೆಗೆ ಆ ದೇಶಕ್ಕೆ ಭೇಟಿ ನೀಡಲಿದ್ದಾರೆ. ಇದು ಕಳೆದ 50 ವರ್ಷಗಳಲ್ಲೇ ಭಾರತದ ಪ್ರಧಾನಿಯೊಬ್ಬರ ಮೊದಲ ಗಯಾನಾ ಭೇಟಿ ಆಗಿರಲಿದೆ. ಇದೇ ಸಂದರ್ಭದಲ್ಲಿ ಮೋದಿಯವರಿಗೆ ಕಾಮನ್ವೆಲ್ತ್ ಆಫ್ ಡೊಮಿನಿಕಾದಿಂದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Patna: ಆಸ್ಪತ್ರೆಯಲ್ಲಿ ಮೃತಪಟ್ಟ ರೋಗಿಯ ಕಣ್ಣೇ ಮಾಯಾ… ಇಲಿ ತಿಂದಿದೆ ಎಂದ ವೈದ್ಯರು
Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು
Kerala govt: ಶಬರಿಮಲೆ ವರ್ಚುವಲ್ ಕ್ಯೂ ಬುಕ್ಕಿಂಗ್ ಮಿತಿ ಹೆಚ್ಚಳ
Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು
Chhattisgarh: ನೀರಿನ ಬಾವೀಲಿ ಪೆಟ್ರೋಲ್: ಸಂಗ್ರಹಕ್ಕೆ ಮುಗಿಬಿದ್ದ ಜನ
MUST WATCH
ಹೊಸ ಸೇರ್ಪಡೆ
Ullala: ಉಚ್ಚಿಲದ ರೆಸಾರ್ಟ್ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾವು!
BBK11: ನೇರ ನಡೆ, ನುಡಿಯಿಂದ ಗಮನ ಸೆಳೆದಿದ್ದ ಈ ಸ್ಪರ್ಧಿ; ಮನೆಯಿಂದ ಹೊರಕ್ಕೆ?
Mike Tyson: ವಿದಾಯದ ಸುಳಿವು ನೀಡಿದ ಬಾಕ್ಸಿಂಗ್ ದಿಗ್ಗಜ ಮೈಕ್ ಟೈಸನ್
Patna: ಆಸ್ಪತ್ರೆಯಲ್ಲಿ ಮೃತಪಟ್ಟ ರೋಗಿಯ ಕಣ್ಣೇ ಮಾಯಾ… ಇಲಿ ತಿಂದಿದೆ ಎಂದ ವೈದ್ಯರು
Team India: ವಿರಾಟ್ ಕೊಹ್ಲಿ ದಾಖಲೆ ಮುರಿದ ತಿಲಕ್ ವರ್ಮಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.