Space Science: ಸ್ಪೇಸ್ಎಕ್ಸ್ನಿಂದ ಮೊದಲ ಬಾರಿ ಇಸ್ರೋ ಉಪಗ್ರಹ ನಭಕ್ಕೆ!
ಮುಂದಿನ ವಾರ ಜಿಸ್ಯಾಟ್-20 ಉಡಾವಣೆ, ಮಸ್ಕ್ ಒಡೆತನದ ಸ್ಪೇಸ್ಎಕ್ಸ್-ಇಸ್ರೋ ಮಧ್ಯೆ ಸಹಭಾಗಿತ್ವ
Team Udayavani, Nov 17, 2024, 7:25 AM IST
ನವದೆಹಲಿ: ಭಾರತದ ಬಾಹ್ಯಾಕಾಶ ಕ್ಷೇತ್ರದಲ್ಲಿ ಹೊಸ ಅಧ್ಯಾಯ ಆರಂಭವಾಗಿದೆ. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೋ)ಯು ಈಗ ಎಲಾನ್ ಮಸ್ಕ್ ಮಾಲೀಕತ್ವದ ಸ್ಪೇಸ್ಎಕ್ಸ್ನೊಂದಿಗೆ ಸಹಭಾಗಿತ್ವ ಸಾಧಿಸಿದ್ದು, ಮುಂದಿನ ವಾರವೇ ಭಾರತದ ಅತ್ಯಾಧುನಿಕ ಸಂವಹನ ಉಪಗ್ರಹ ಜಿಸ್ಯಾಟ್-20(ಜಿಸ್ಯಾಟ್ ಎನ್-2) ಅನ್ನು ಹೊತ್ತು ಸ್ಪೇಸ್ಎಕ್ಸ್ನ ಫಾಲ್ಕನ್-9 ರಾಕೆಟ್ ನಭಕ್ಕೆ ಚಿಮ್ಮಲಿದೆ.
ಮರುಬಳಕೆಯ ಮತ್ತು ಅಗ್ಗದ ಫಾಲ್ಕನ್ 9 ರಾಕೆಟ್ ಮೂಲಕ ಅಮೆರಿಕದ ಕೇಪ್ ಕಾರ್ನಿವಾಲ್ನಿಂದ ಜಿಸ್ಯಾಟ್-20 ಉಪಗ್ರಹದ ಉಡಾವಣೆ ನಡೆಯಲಿದೆ. ಜಿಸ್ಯಾಟ್-20 ಉಪಗ್ರಹವು ಬರೋಬ್ಬರಿ 4700 ಕೆ.ಜಿ. ತೂಕವಿದೆ. ಅದನ್ನು ಭಾರತದ ಅತಿದೊಡ್ಡ ಉಡಾವಣಾ ನೌಕೆ “ಬಾಹುಬಲಿ’ ಜಿಎಸ್ಎಲ್ವಿ ಮಾರ್ಕ್-3)ಗೆ ಕೂಡ ಹೊತ್ತೂಯ್ಯಲು ಸಾಧ್ಯವಿಲ್ಲ. ಏಕೆಂದರೆ, ಬಾಹುಬಲಿ ಗರಿಷ್ಠ 4,100 ಕೆ.ಜಿ. ತೂಕ ಹೊರಬಲ್ಲ ಸಾಮರ್ಥ್ಯವಷ್ಟೇ ಹೊಂದಿದೆ.
ಈಗ ನಾವು ಸ್ಪೇಸ್ಎಕ್ಸ್ನೊಂದಿಗೆ ಚೊಚ್ಚಲ ಉಪಗ್ರಹ ಉಡಾವಣೆಯ ಒಪ್ಪಂದ ಮಾಡಿಕೊಂಡಿದ್ದೇವೆ ಎಂದು ಇಸ್ರೋದ ವಾಣಿಜ್ಯಿಕ ಅಂಗವಾದ ಬೆಂಗಳೂರು ಮೂಲದ ನ್ಯೂ ಸ್ಪೇಸ್ ಇಂಡಿಯಾ ಲಿ.(ಎನ್ಎಸ್ಐಎಲ್) ಮುಖ್ಯಸ್ಥ ರಾಧಾಕೃಷ್ಣನ್ ದುರೈರಾಜ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Patna: ಆಸ್ಪತ್ರೆಯಲ್ಲಿ ಮೃತಪಟ್ಟ ರೋಗಿಯ ಕಣ್ಣೇ ಮಾಯಾ… ಇಲಿ ತಿಂದಿದೆ ಎಂದ ವೈದ್ಯರು
Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು
Kerala govt: ಶಬರಿಮಲೆ ವರ್ಚುವಲ್ ಕ್ಯೂ ಬುಕ್ಕಿಂಗ್ ಮಿತಿ ಹೆಚ್ಚಳ
Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು
G20 Leaders Summit: ಪ್ರಧಾನಿ ಮೋದಿ ನೈಜೀರಿಯಾ, ಬ್ರೆಜಿಲ್, ಗಯಾನಾ ಪ್ರವಾಸ ಶುರು
MUST WATCH
ಹೊಸ ಸೇರ್ಪಡೆ
Mike Tyson: ವಿದಾಯದ ಸುಳಿವು ನೀಡಿದ ಬಾಕ್ಸಿಂಗ್ ದಿಗ್ಗಜ ಮೈಕ್ ಟೈಸನ್
Patna: ಆಸ್ಪತ್ರೆಯಲ್ಲಿ ಮೃತಪಟ್ಟ ರೋಗಿಯ ಕಣ್ಣೇ ಮಾಯಾ… ಇಲಿ ತಿಂದಿದೆ ಎಂದ ವೈದ್ಯರು
Team India: ವಿರಾಟ್ ಕೊಹ್ಲಿ ದಾಖಲೆ ಮುರಿದ ತಿಲಕ್ ವರ್ಮಾ
Master Rohit: ರಸ್ತೆ ಅಪಘಾತ ʼಕಾಟೇರʼ ಬಾಲನಟ ರೋಹಿತ್ಗೆ ಗಂಭೀರ ಗಾಯ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.