Kinnal raj; ʼಸಿಂಹರೂಪಿಣಿʼಗೆ 25ರ ಸಂಭ್ರಮ
Team Udayavani, Nov 17, 2024, 4:22 PM IST
ದೇವರ ಚಿತ್ರವನ್ನು ಕಮರ್ಷಿಯಲ್ ಅಂಶದೊಂದಿಗೆ ಮಾಸ್ ಆಗಿ ಕುರಿತ ಸಿನಿಮಾ ತೋರಿಸಿರುವ ಚಿತ್ರ “ಸಿಂಹರೂಪಿಣಿ’ ಯಶಸ್ವಿ 25 ದಿನಗಳನ್ನು ಪೂರೈಸಿ ಮುನ್ನುಗ್ಗುತ್ತಿದೆ. ಇದರನ್ವಯ ಸಿನಿಮಾಕ್ಕೆ ಕೆಲಸ ಮಾಡಿದ ಕಲಾವಿದರು, ತಂತ್ರಜ್ಞರಿಗೆ ಸ್ಮರಣಿಕೆ ವಿತರಿಸುವ ಕಾರ್ಯಕ್ರಮವನ್ನು “ಸ್ವಪ್ನ’ ಚಿತ್ರಮಂದಿರದಲ್ಲಿ ಹಮ್ಮಿಕೊಳ್ಳಲಾಗಿತ್ತು.
ಕೆ.ಎಂ.ನಂಜುಂಡೇಶ್ವರ ಕಥೆ ಬರೆದು ಶ್ರೀಚಕ್ರ ಫಿಲಂಸ್ ಲಾಂಛನದಲ್ಲಿ ಅದ್ದೂರಿಯಾಗಿ ನಿರ್ಮಾಣ ಮಾಡಿದ್ದಾರೆ. “ಕೆಜಿಎಫ್’, “ಸಲಾರ್’, “ಭೈರತಿ ರಣಗಲ್’ ಮುಂತಾದ ಹಿಟ್ ಸಿನಿಮಾಗಳಿಗೆ ಹಾಡುಗಳನ್ನು ಬರೆದಿರುವ ಕಿನ್ನಾಳಾ ರಾಜ್ ಚಿತ್ರಕಥೆ, ಸಾಹಿತ್ಯ ಬರೆದು ಆಕ್ಷನ್ ಕಟ್ ಹೇಳಿದ್ದಾರೆ.
ಈ ಸಂದರ್ಭದಲ್ಲಿ ಮಾತನಾಡಿದ ನಿರ್ದೇಶಕರು,ಚಿತ್ರ ಮಾಡಲು ಯೋಗ, ಯೋಗ್ಯತೆ ಅದಕ್ಕಿಂತ ಹೆಚ್ಚಾಗಿ ಅದೃಷ್ಟ ಕೂಡಿಬರಬೇಕು. ಇವೆಲ್ಲವು ನಮಗೆ ಸಿಕ್ಕಿದೆ. ಎಲ್ಲಾ ಕಲಾವಿದರು ಕಥೆ ಕೇಳಿದೊಡನೆ ಯಾವಾಗ ಬರಲಿ ಅಂತ ಹೇಳುತ್ತಿದ್ದರು. ಎಲ್ಲರೂ ಭಕ್ತಿಯಿಂದ, ಇಷ್ಟದಿಂದ ಮಾಡಿದ್ದಾರೆ. ವ್ಯವಹಾರಿಕವಾಗಿ ನಿರ್ಮಾಪಕರು ಸೇಫ್ ಆಗಿದ್ದಾರೆ. ಮಾಧ್ಯಮದ ಸಹಕಾರ ಮರೆಯುವಂತಿಲ್ಲ. ಚಿತ್ರಮಂದಿರಕ್ಕೆ ಭೇಟಿ ನೀಡಿದಾಗ ಕೋಣ ಏಕೆ ಕಡಿಯುತ್ತಾರೆ ಎಂಬುದನ್ನು ಅಚ್ಚುಕಟ್ಟಾಗಿ ತೋರಿಸಿದ್ದೀರಾ. ಸೆಕೆಂಡ್ ಆಫ್ ಕಾಂತಾರ ಚಿತ್ರ ಮೀರಿಸುವಂ ತಿತ್ತು. ಭಕ್ತಿ ಕಥೆಗೆ ಸಿಂಹರೂಪಿಣಿ ಸಾಕ್ಷಿಯಾಗಿದೆ ಎಂದು ಪ್ರೇಕ್ಷಕರು ಹೇಳುತ್ತಿದ್ದಾರೆ. ಒಂಬತ್ತು ತಿಂಗಳ ಶ್ರಮ ಸಾರ್ಥಕ ಅನಿಸಿದೆ. ಬ್ಯಾಂಕಾಕ್ ಫಿಲಂ ಫೆಸ್ಟಿವಲ್‌ನಲ್ಲಿ ಪ್ರಶಸ್ತಿ ಲಭಿಸಿದ್ದು ಖುಷಿ ವಿಷಯ. ಭಾಗ-2 ಮಾಡುವ ಯೋಜನೆ ಇದ್ದು, ಮುಂದಿನ ವಾರದಿಂದಲೇ ಉತ್ತರ ಕರ್ನಾಟಕ ಹಾಗೂ ರಾಜ್ಯಾದ್ಯಂತ ಜನರಿಗೆ ತಲುಪಿಸುವ ಬಗ್ಗೆ ಕ್ರಮ ತೆಗೆದುಕೊಳ್ಳಲಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kantara Chapter 1: ರಿಷಬ್ ಶೆಟ್ಟಿ ʼಕಾಂತಾರ ಚಾಪ್ಟರ್ -1ʼ ರಿಲೀಸ್ ಗೆ ಡೇಟ್ ಫಿಕ್ಸ್
Daali Dhananjay: ಸರಳವಾಗಿ ನೆರವೇರಿತು ಡಾಲಿ – ಧನ್ಯತಾ ನಿಶ್ಚಿತಾರ್ಥ
Forest: ರಿಲೀಸ್ ಅಖಾಡಕ್ಕೆ ಚಿಕ್ಕಣ್ಣನ ʼಫಾರೆಸ್ಟ್ʼ
Master Rohit: ರಸ್ತೆ ಅಪಘಾತ ʼಕಾಟೇರʼ ಬಾಲನಟ ರೋಹಿತ್‌ಗೆ ಗಂಭೀರ ಗಾಯ
Re Release: ದರ್ಶನ್ ಮತ್ತೊಂದು ಚಿತ್ರ ಮರು ಬಿಡುಗಡೆ: ರೀರಿಲೀಸ್‌ನತ್ತ ಸಂಗೊಳ್ಳಿ ರಾಯಣ್ಣ
MUST WATCH
ಹೊಸ ಸೇರ್ಪಡೆ
Hospital ನಿಂದ ಶಿಶುವಿನ ಅಪಹರಣ: ರೈಲು ನಿಲ್ದಾಣದಲ್ಲಿ ರಕ್ಷಣೆ: ಇಬ್ಬರ ಬಂಧನ
Middle class; ಮಧ್ಯಮ ವರ್ಗದವರಿಗೆ ಪರಿಹಾರ: ಎಕ್ಸ್ ಬಳಕೆದಾರಗೆ ನಿರ್ಮಲಾ ಪ್ರತಿಕ್ರಿಯೆ
ಪಾಠ ಮಾಡಿದೆವು… ಸರಿ, ಬದುಕಲು ಕಲಿಸಿದೆವಾ?
Big Boss ಸ್ಪರ್ಧಿಯಾಗಿದ್ದ ನಟ-ಗಾಯಕ ಮಾದಕ ವಸ್ತು ಸಹಿತ ಬಂಧನ
Pushpa 2 trailer: ಪೈಸಾ ವಸೂಲ್ ಅವತಾರದಲ್ಲಿ ʼಪುಷ್ಪರಾಜ್ʼ; ಅಲ್ಲು ಭರ್ಜರಿ ಆ್ಯಕ್ಷನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.