Mobs Storm: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ!, ಮೈತೇಯಿ ಸಮುದಾಯದಿಂದ ಭಾರೀ ಪ್ರತಿಭಟನೆ
ರವಿವಾರವೂ ನಾಲ್ವರು ಶಾಸಕರ ನಿವಾಸಗಳಿಗೆ ಉದ್ರಿಕ್ತರಿಂದ ಬೆಂಕಿ , 2 ಚರ್ಚ್, 3 ಮನೆ ಅಗ್ನಿಗಾಹುತಿ; ಸಿಎಂ ನಿವಾಸಕ್ಕೂ ದಾಳಿ ಯತ್ನ
Team Udayavani, Nov 18, 2024, 7:35 AM IST
ಇಂಫಾಲ: ಮಣಿಪುರದಲ್ಲಿ ಭುಗಿಲೆದ್ದಿರುವ ಹಿಂಸಾಚಾರ ರವಿವಾರವೂ ಮುಂದುವರಿದಿದೆ. ಮೈತೇಯಿ ಸಮುದಾಯ ಭಾರೀ ಪ್ರತಿಭಟನೆ ನಡೆಸಿದ್ದು, ಮತ್ತೆ ನಾಲ್ವರು ಶಾಸಕರ ನಿವಾಸಗಳಿಗೆ ಬೆಂಕಿ ಹಚ್ಚಲಾಗಿದೆ. ಮುಖ್ಯಮಂತ್ರಿ ಬೀರೇನ್ ಸಿಂಗ್ ನಿವಾಸದ ಮೇಲೂ ದಾಳಿಗೆ ಯತ್ನಿಸಲಾಗಿದ್ದು, ಪೊಲೀಸರು ಅಶ್ರುವಾಯು ಸಿಡಿಸುವ ಮೂಲಕ ಉದ್ರಿಕ್ತ ಗುಂಪನ್ನು ಚದುರಿಸಿದ್ದಾರೆ.
ಪ್ರತಿಭಟನೆಯ ಕಾವು ಹೆಚ್ಚಾಗುತ್ತಿದ್ದಂತೆ ಕರ್ಫ್ಯೂ ಜಾರಿ ಮಾಡಲಾಗಿದ್ದು, ಇಂಟರ್ನೆಟ್ ಮತ್ತು ಮೊಬೈಲ್ ಡೇಟಾ ಸೌಲಭ್ಯವನ್ನು ರದ್ದು ಮಾಡಲಾಗಿದೆ. ಮೈತೇಯಿ ಸಮುದಾಯದವರ ಶವ ಸಿಕ್ಕಿದ ಜರಿಬಾಮ್ ನಗರದಲ್ಲಿ 2 ಚರ್ಚ್ ಮತ್ತು 3 ಮನೆಗಳಿಗೂ ಉದ್ರಿಕ್ತರು ಬೆಂಕಿ ಹಚ್ಚಿದ್ದಾರೆ. ಸಿಎಂ ಬಿರೇನ್ ಸಿಂಗ್ ಅವರ ಅಳಿಯನ ಆಸ್ತಿಗೂ ಬೆಂಕಿ ಇಕ್ಕಲಾಗಿದೆ.
23 ಮಂದಿ ಬಂಧನ
ಸಾರ್ವಜನಿಕ ಆಸ್ತಿ ಹಾನಿ ಮತ್ತು ಸಚಿವರ ಮನೆಗಳಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿ ಒಟ್ಟು 23 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಇವರಿಂದ ಪಿಸ್ತೂಲು, 7 ಸುತ್ತಿನ ಗುಂಡು, ಸ್ಫೋಟಕಗಳು, 8 ಮೊಬೈಲ್ ಫೋನ್‌ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
24 ತಾಸು ಗಡುವು
ರಾಜ್ಯದಲ್ಲಿ ಮೈತೇಯಿ ಸಮುದಾಯಗಳ ಸಾವಿಗೆ ಕಾರಣವಾದವರ ವಿರುದ್ಧ ಸೇನಾ ಕ್ರಮ ಕೈಗೊಳ್ಳಲು ಪ್ರತಿಭಟನಕಾರರು ರಾಜ್ಯ ಸರಕಾರಕ್ಕೆ 24 ತಾಸುಗಳ ಗಡುವು ವಿಧಿಸಿದ್ದಾರೆ. ಅಲ್ಲದೆ ತತ್‌ಕ್ಷಣವೇ ರಾಜ್ಯದಲ್ಲಿ ಸಶಸ್ತ್ರ ಪಡೆಗಳ ವಿಶೇಷಾಧಿಕಾರ ಕಾಯ್ದೆಯನ್ನು ಹಿಂಪಡೆಯಬೇಕು ಎಂದು ಕೇಂದ್ರ ಸರಕಾರಕ್ಕೆ ಮನವಿ ಮಾಡಿದ್ದಾರೆ. ಈ ಕಾಯ್ದೆಯನ್ನು ಹಿಂಪಡೆಯುವಂತೆ ಮಣಿಪುರ ಸರಕಾರವೂ ಕೇಂದ್ರಕ್ಕೆ ಮನವಿ ಸಲ್ಲಿಸಿದೆ.
ಮತ್ತೊಂದು ಶವ ಪತ್ತೆ
ಈಗಾಗಲೇ ಮೈತೇಯಿ ಸಮುದಾಯಕ್ಕೆ ಸೇರಿದವರ 6 ಮಂದಿಯ ಶವ ಪತ್ತೆಯಾಗಿದ್ದ ಜರಿಬಾಮ್‌ನಲ್ಲಿ ರವಿವಾರ ಮತ್ತೂಂದು ಶವ ಪತ್ತೆಯಾಗಿದ್ದು, ಹಿಂಸಾಚಾರ ಹೆಚ್ಚಳಕ್ಕೆ ಕಾರಣವಾಗಿದೆ. ಮೈತೇಯಿ ಸಮುದಾಯವರನ್ನು ಕುಕಿ ಬಂಡುಕೋರರು ಹತ್ಯೆ ಮಾಡುತ್ತಿದ್ದಾರೆ ಎಂದು ಪ್ರತಿಭಟನಕಾರರು ಆರೋಪಿಸಿದ್ದು, ಜರಿಬಾಮ್‌ನಲ್ಲಿ ಚರ್ಚ್‌ಗಳಿಗೆ ಬೆಂಕಿ ಹಚ್ಚಿದ್ದಾರೆ. ರಾಜ್ಯದಲ್ಲಿ ಪರಿಸ್ಥಿತಿಯನ್ನು ಸುಧಾರಿಸಲು ಕೇಂದ್ರ ಹಾಗೂ ರಾಜ್ಯ ಸರಕಾರಗಳು ಸಕಲ ಪ್ರಯತ್ನಗಳನ್ನು ನಡೆಸುತ್ತಿವೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದು, ಈ ಬಗ್ಗೆ ಅಮಿತ್ ಶಾ ಸಭೆ ನಡೆಸಿದ್ದಾರೆ ಎಂದಿದ್ದಾರೆ.
ಅಮಿತ್ ಶಾ ದಿಲ್ಲಿಗೆ ದೌಡು
ಮಣಿಪುರದಲ್ಲಿ ಹಿಂಸಾಚಾರ ಹೆಚ್ಚಾಗುತ್ತಿದ್ದಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಹಾರಾಷ್ಟ್ರದಲ್ಲಿ ನಡೆಸಬೇಕಿದ್ದ ಚುನಾವಣ ರ್ಯಾಲಿಯನ್ನು ಸ್ಥಗಿತಗೊಳಿಸಿದ್ದಾರೆ. ಮಣಿಪುರಕ್ಕೆ ಸಂಬಂಧಿಸಿ ಅಧಿಕಾರಿಗಳ ಸಭೆ ನಡೆಸಲು ಅವರು ದಿಲ್ಲಿಗೆ ದೌಡಾಯಿಸಿದ್ದು, ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದ್ದಾರೆ ಎನ್ನಲಾಗಿದೆ. ಸೋಮವಾರ ಮತ್ತೆ ಹಿರಿಯ ಅಧಿಕಾರಿಗಳ ಸಭೆ ನಡೆಸಲಿದ್ದಾರೆ.
ಬೆಂಬಲ ಹಿಂಪಡೆದ ನ್ಯಾಶನಲ್ ಪೀಪಲ್ಸ್ ಪಾರ್ಟಿ
ಕಾನ್ರಾಡ್ ಸಂಗ್ಮಾ ನೇತೃತ್ವದ ನ್ಯಾಶನಲ್ ಪೀಪಲ್ಸ್ ಪಾರ್ಟಿ (ಎನ್‌ಪಿಪಿ) ಬಿಜೆಪಿ ನೇತೃತ್ವದ ಮಣಿಪುರ ಸರಕಾರಕ್ಕೆ ನೀಡಿದ್ದ ಬೆಂಬಲವನ್ನು ರವಿವಾರ ಹಿಂಪಡೆದಿದೆ. ಬಿರೇನ್ ಸಿಂಗ್ ನೇತೃತ್ವದ ಸರಕಾರ ಹಿಂಸಾಚಾರವನ್ನು ನಿಯಂತ್ರಿಸಲು ವಿಫಲವಾಗಿರುವುದರಿಂದ ಈ ತೀರ್ಮಾನ ಎಂದು ಪಕ್ಷ ತಿಳಿಸಿದೆ. 7 ಶಾಸಕರನ್ನು ಹೊಂದಿರುವ ಎನ್‌ಪಿಪಿ ಬೆಂಬಲ ಕಳೆದುಕೊಂಡರೂ ಸರಕಾರಕ್ಕೇನೂ ಅಪಾಯವಿಲ್ಲ.
“ಮಣಿಪುರದಲ್ಲಿ ನಡೆಯುತ್ತಿರುವ ಘಟನೆಗಳು ಭಾರೀ ನೋವನ್ನುಂಟು ಮಾಡಿವೆ. ಈ ಬಾರಿಯಾದರೂ ಪ್ರಧಾನಿ ಮೋದಿ ಮಣಿಪುರಕ್ಕೆ ಭೇಟಿ ನೀಡಿ ಶಾಂತಿ ಕಾಪಾಡಲು ಯತ್ನಿಸಬೇಕು.” – ರಾಹುಲ್ ಗಾಂಧಿ, ಲೋಕಸಭೆ ವಿಪಕ್ಷ ನಾಯಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್‌ಸಾನಿಕ್ ಅಸ್ತ್ರ !
Maharashtra: ಮತಗಟ್ಟೆ ಬಳಿ ಚಪ್ಪಲಿ ನಿಷೇಧಿಸಿ ಎಂದು ಮಹಾಪಕ್ಷೇತರ ಅಭ್ಯರ್ಥಿ ಮನವಿ!
ಮನುಷ್ಯ ನೀನು ದಂಡ, ಸತ್ತು ಹೋಗು!: ಎಐ ಚಾಟ್‌ಬಾಟ್ ಹೇಳಿಕೆ
Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ
NCB ನಿರಂತರ ಕಾರ್ಯಾಚರಣೆ: ಡ್ರಗ್ಸ್ ಜಾಲ ಮುರಿಯಲು ಆಪರೇಷನ್ ಸಾಗರ ಮಂಥನ
MUST WATCH
ಹೊಸ ಸೇರ್ಪಡೆ
BGT 2024-25: ಆಸೀಸ್ ನಲ್ಲಿ ಲಯಕ್ಕೆ ಮರಳಿದ ವಿರಾಟ್ ಕೊಹ್ಲಿ
Stock Market: ಷೇರುಪೇಟೆ ಸೂಚ್ಯಂಕ 500ಕ್ಕೂ ಅಧಿಕ ಅಂಕ ಕುಸಿತ; 23,400ಕ್ಕೆ ಇಳಿದ ನಿಫ್ಟಿ
Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರುಪಾಲು
Baaghi 4: ಟೈಗರ್ ಶ್ರಾಫ್ ʼಬಾಘಿ – 4ʼ ಗೆ ಕನ್ನಡದ ಎ.ಹರ್ಷ ಆ್ಯಕ್ಷನ್ ಕಟ್; ಪೋಸ್ಟರ್ ಔಟ್
Belagavi ವಿಮಾನ ನಿಲ್ದಾಣ ಕಂಪೌಂಡ್ ಬಳಿ ಯುವಕನ ಹತ್ಯೆ; ಕಾರಣ ನಿಗೂಢ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.