Uttar Pradesh: ಹಳಿ ಮೇಲೆ ಸಿಮೆಂಟ್ ಕಲ್ಲಿಟ್ಟು ರೈಲು ಹಳಿತಪ್ಪಿಸಲು ಪ್ರಯತ್ನ
Team Udayavani, Nov 17, 2024, 11:27 PM IST
ಲಕ್ನೋ: ಉತ್ತರ ಪ್ರದೇಶದ ಬರೇಲಿಯಲ್ಲಿ ರೈಲ್ವೇ ಹಳಿ ಮೇಲೆ ಕಬ್ಬಿಣದ ತುಂಡು ಹಾಗೂ ಸಿಮೆಂಟ್ ಬ್ಲಾಕ್‌ಗಳನ್ನಿಟ್ಟು ಸರಕು ಸಾಗಣೆ ರೈಲನ್ನು ಹಳಿ ತಪ್ಪಿಸುವ ಪ್ರಯತ್ನ ನಡೆದಿದೆ.
ರೈಲಿನ ಚಾಲಕ ತುರ್ತು ಬ್ರೇಕ್ ಹಾಕಿದ್ದರಿಂದ ಅವಘಡ ತಪ್ಪಿದಂತಾಗಿದೆ. ಈ ಕುರಿತು ಬರೇಲಿ ಎಸ್‌ಪಿ ಮುಕೇಶ್ ಚಂದ್ರ ಮಿಶ್ರಾ ಮಾಹಿತಿ ನೀಡಿದ್ದು, ಶುಕ್ರವಾರ ರಾತ್ರಿ ಪೀಲೀಭೀತ್‌ನಿಂದ ಬರೇಲಿಗೆ ಸರಕು ರೈಲು ಚಲಿಸುತ್ತಿದ್ದ ವೇಳೆ ದಿಬಾನ್ಪುರ ರೈಲ್ವೆ ನಿಲ್ದಾಣದಲ್ಲಿ ಹಳಿ ಮೇಲೆ ದುಷ್ಕರ್ಮಿಗಳು ಕಬ್ಬಿಣದ ತುಂಡು ಹಾಗೂ ಸಿಮೆಂಟ್ ಬ್ಲಾಕ್ ಇಟ್ಟಿರುವುದು ಚಾಲಕನ ಗಮನಕ್ಕೆ ಬಂದಿದೆ.
ಕೂಡಲೇ ಅವರು ತುರ್ತು ಬ್ರೇಕ್ ಹಾಕಿದ್ದಾರೆ. ಹೀಗಾಗಿ ರೈಲಿನ ಎಂಜಿನ್‌ಗೆ ಮಾತ್ರ ಹಾನಿಯಾಗಿದೆ. ಈ ಬಗ್ಗೆ ಪ್ರಕರಣ ದಾಖಲಿಸಲಾಗಿದೆ ಎಂದಿದ್ದಾರೆ. ಪ್ರಸಕ್ತ ವರ್ಷದಲ್ಲಿ ಇಂಥ ಪ್ರಕರಣಗಳ ಸಂಖ್ಯೆ 25ರ ಗಡಿ ದಾಟಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ
NCB ನಿರಂತರ ಕಾರ್ಯಾಚರಣೆ: ಡ್ರಗ್ಸ್ ಜಾಲ ಮುರಿಯಲು ಆಪರೇಷನ್ ಸಾಗರ ಮಂಥನ
J. P. Nadda: ನುಸುಳುಕೋರರಿಗೆ ಮದ್ರಸಾದಲ್ಲಿ ಆಶ್ರಯ ಕೊಟ್ಟ ಜೆಎಂಎಂ
Delhi: ಮಿತಿ ಮೀರಿದ ಮಾಲಿನ್ಯ: ಟ್ರಕ್‌ಗಳ ಪ್ರವೇಶಕ್ಕೆ ನಿರ್ಬಂಧ
Maharashtra: ಕಾಂಗ್ರೆಸ್ ಸರಕಾರ ಬಂದರೆ ಮುಸ್ಲಿಂ ಮೀಸಲು: ರೇವಂತ್ ರೆಡ್ಡಿ
MUST WATCH
ಹೊಸ ಸೇರ್ಪಡೆ
Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ
Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ
Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ
Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ
ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.