Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ
Team Udayavani, Nov 18, 2024, 12:04 AM IST
ಬೆಳ್ತಂಗಡಿ: ಚಾರ್ಮಾಡಿ ಗ್ರಾಮದ ಮೈಕಾನ್, ಪರ್ಲಾಣಿ ಸ್ಥಳದಲ್ಲಿ ರವಿವಾರ ಮುಂಜಾನೆ 7 ಗಂಟೆ ಸುಮಾರಿಗೆ ಮೃತ್ಯುಂಜಯ ನದಿಯಲ್ಲಿ ಒಂಟಿ ಸಲಗ ಸವಾರಿ ನಡೆಸಿದೆ. ಜನನಿಬಿಡ ಪ್ರದೇಶದ ಮೂಲಕ ತೆರಳಿದ ಬಳಿಕ ಹೊಸಮಠ ಕಡೆಗೆ ಹೋಗಿದೆ.
ಕೃಷಿ ಅಥವಾ ಇತರ ಯಾವುದೇ ಪ್ರದೇಶಕ್ಕೂ ಹಾನಿ ಮಾಡಿಲ್ಲ. ಚಾರ್ಮಾಡಿ ಹಾಗೂ ಸುತ್ತಮುತ್ತಲ ಪರಿಸರದಲ್ಲಿ ಪದೇ ಪದೇ ಕಾಡಾನೆಗಳ ದಾಳಿಯಾಗುತ್ತಲೆ ಇದ್ದು ಆ ಭಾಗದ ಜನರು ಭಯಭೀತರಾಗಿದ್ದಾರೆ. ಈ ಬಗ್ಗೆ ಅರಣ್ಯ ಇಲಾಖೆ, ಸರಕಾರ ಸೂಕ್ತ ಶಾಶ್ವತ ಪರಿಹಾರ ಒದಗಿಸಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ. ಸ್ಥಳಕ್ಕೆ ಅರಣ್ಯ ಇಲಾಖೆ ಆಗಮಿಸಿ ಪರಿಶೀಲನೆ ನಡೆಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ
Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ
Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ
Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ
ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.