BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ
Team Udayavani, Nov 18, 2024, 12:02 AM IST
ತೆಕ್ಕಟ್ಟೆ: ಉಡುಪಿ ಜಿಲ್ಲೆ ಸಹಿತ ರಾಜ್ಯದಲ್ಲಿ ಬಿಪಿಎಲ್ ಮಾತ್ರವಲ್ಲದೇ ಎಪಿಎಲ್ ಕಾರ್ಡು ಕೂಡ ರದ್ದಾಗಲ್ಲ . ಪತ್ರಿಕೆಗಳಲ್ಲಿ ಬಂದಿರುವ ಸುದ್ದಿ ಸುಳ್ಳು. ಯಾವುದೇ ಕಾರಣಕ್ಕೂ ರದ್ದು ಮಾಡಲ್ಲ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಗ್ರಾಹಕ ವ್ಯವಹಾರಗಳ ಸಚಿವ ಕೆ.ಎಚ್. ಮುನಿಯಪ್ಪ ಹೇಳಿದ್ದಾರೆ.
ನ. 17ರಂದು ಜನ್ನಾಡಿ ಕೊರಗರ ಕಾಲನಿಯಲ್ಲಿ ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೆಬಲ್ ಟ್ರಸ್ಟ್ ಪ್ರಾಯೋಜಿತ ಜನ್ನಾಡಿ ಮತ್ತು ಮಣಿಗೇರೆ ಕೊರಗರ ಕಾಲನಿಯಲ್ಲಿ ಸುಮಾರು 2 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿದ 14 ಉಚಿತ ಮನೆಗಳ ಗೃಹ ಪೂಜೆ ಮತ್ತು ಲೋಕಾರ್ಪಣೆ ಕಾರ್ಯಕ್ರಮದ ಸಂದರ್ಭ ಅವರು ಪತ್ರಕರ್ತರ ಜತೆ ಮಾತನಾಡಿದರು.
ಕಾರ್ಡು ಪರಿಷ್ಕರಣೆ ಸಲುವಾಗಿ ಯಾರು ಆದಾಯ ತೆರಿಗೆ ಕಟ್ಟುತ್ತಾರೆ, ಯಾರಿಗೆ ಅನುಕೂಲವಿದೆ. ಅಂತಹವರನ್ನು ಬಿಪಿಎಲ್ ಪಟ್ಟಿಯಿಂದ ಎಪಿಎಲ್‌ಗೆ ವರ್ಗಾಯಿಸುತ್ತೇವೆ. ಆದರೆ ಕಾರ್ಡು ರದ್ದು ಮಾಡಲ್ಲ. ನಿಜವಾದ ಬಿಪಿಎಲ್ ಕಾರ್ಡುದಾರರಿಗೆ ಯಾವುದೇ ತೊಂದರೆಯಾಗಲ್ಲ ಎಂದವರು ಸ್ಪಷ್ಟಪಡಿಸಿದರು.
ಸರ್ವರ್ ಸಮಸ್ಯೆ ಇಲ್ಲ
ಬಿಪಿಎಲ್‌ನಲ್ಲಿ ಅರ್ಹರಲ್ಲದವರಿಗೆ ಎಪಿಎಲ್‌ಗೆ ವರ್ಗಾಯಿಸಲು 5 ಮಾರ್ಗಸೂಚಿ ಅನುಸರಿಸಲಾಗುತ್ತಿದೆ. ಇಲಾಖೆಗಳಲ್ಲಿ ಸರ್ವರ್ ಸಮಸ್ಯೆ ಸಂಪೂರ್ಣವಾಗಿ ಸರಿಹೋಗಿದೆ ಎಲ್ಲಯೂ ಸಮಸ್ಯೆಗಳಿಲ್ಲ , ಸಕಾಲಕ್ಕೆ ಎಲ್ಲದಕ್ಕೂ ಅವಕಾಶಗಳಿವೆ. ಪರಿಷ್ಕರಣೆ ಪ್ರಕ್ರಿಯೆ ಪೂರ್ತಿಯಾದ ಬಳಿಕ ಹೊಸ ರೇಷನ್ ಕಾರ್ಡಿಗೆ ಅವಕಾಶ ಮಾಡಿಕೊಡುತ್ತೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ
Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ
Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ
Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ
ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ
MUST WATCH
ಹೊಸ ಸೇರ್ಪಡೆ

Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.