Bengaluru: ಎಸ್ಎಸ್ಎಲ್ಸಿ ಫೇಲ್ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ
Team Udayavani, Nov 18, 2024, 9:12 AM IST
ಬೆಂಗಳೂರು: ನ್ಯೂ ತಿಪ್ಪಸಂದ್ರದ ಮುಖ್ಯ ರಸ್ತೆಯಲ್ಲಿರುವ ಲಕ್ಷ್ಮೀ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ 17 ವರ್ಷದ ಯುವಕನನ್ನು ಜೀವನ್ ಭೀಮಾನಗರ ಪೊಲೀಸರು ವಶಕ್ಕೆ ಪಡೆದುಕೊಂಡು, ಬಾಲಮಂದಿರಕ್ಕೆ ಕಳುಹಿಸಿದ್ದಾರೆ.
ದೇವರ ವಿಗ್ರಹ ವಿರೂಪಗೊಂಡಿರುವ ಕುರಿತು ಸ್ಥಳೀಯರು ಪೊಲೀಸರಿಗೆ ದೂರು ನೀಡಿದ್ದರು. ದೂರು ಆಧರಿಸಿ ತನಿಖೆ ನಡೆಸಿದಾಗ ವಿಗ್ರಹ ವಿರೂಪಗೊಳಿಸಿದ್ದು, ಎಸ್ಎಸ್ಎಲ್ಸಿ ವಿದ್ಯಾರ್ಥಿ ಎಂಬುದು ಗೊತ್ತಾಗಿದೆ. ಆತನನ್ನು ಬಾಲನ್ಯಾಯ ಮಂಡಳಿಗೆ ಕಳುಹಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದರು.
ಘಟನಾ ಸ್ಥಳದ ಸಿಸಿ ಕ್ಯಾಮೆರಾ ಪರಿಶೀಲಿಸಿದಾಗ ಯುವಕ ಕೃತ್ಯ ಎಸಗಿರುವುದು ಗೊತ್ತಾಗಿದೆ. ಅಲ್ಲದೇ ಮಧ್ಯರಾತ್ರಿ ಒಬ್ಬನೇ ಮನೆಯಿಂದ ಹೊರಬಂದು ಓಡಾಟ ನಡೆಸಿರುವ ದೃಶ್ಯ ಕೆಲವು ಕ್ಯಾಮೆರಾಗಳಲ್ಲಿ ಸೆರೆಯಾಗಿದೆ.
ಇನ್ನು ತಿಪ್ಪಸಂದ್ರ ನಿವಾಸಿ ಬಾಲಕ, 3 ಬಾರಿ ಎಸ್ಎಸ್ಎಲ್ಸಿಯಲ್ಲಿ ಅನುತ್ತೀರ್ಣ ಗೊಂಡಿದ್ದ. ಅದರಿಂದ ಆಕ್ರೋಶಗೊಂಡು ವಿಗ್ರಹ ವಿರೂಪಗೊಳಿಸಿದ್ದಾನೆ. ಅಲ್ಲದೆ, ಯಾವ ದೇವರು ಇಲ್ಲ ಎಂದು ಫೋಟೋಗಳನ್ನು ಒಡೆದು ಹಾಕಿದ್ದಾನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Puttur: ಕಲ್ಪವೃಕ್ಷಕ್ಕೆ ಮರುಜೀವವಿತ್ತ ಎಂಜಿನಿಯರ್
Hukkeri: ಮೀನಿನ ಹಿಡಿಯಲು ಹೋಗಿದ್ದ ತಂದೆ, ಇಬ್ಬರು ಮಕ್ಕಳು ನೀರುಪಾಲು
Nayanthara: ʼರಕ್ಕಯಿʼ ಆಗಿ ದುಷ್ಟರ ಪಾಲಿಗೆ ದುಸ್ವಪ್ನವಾದ ಲೇಡಿ ಸೂಪರ್ ಸ್ಟಾರ್
BGT 2024-25: ಆಸೀಸ್ ನಲ್ಲಿ ಲಯಕ್ಕೆ ಮರಳಿದ ವಿರಾಟ್ ಕೊಹ್ಲಿ
Stock Market: ಷೇರುಪೇಟೆ ಸೂಚ್ಯಂಕ 500ಕ್ಕೂ ಅಧಿಕ ಅಂಕ ಕುಸಿತ; 23,400ಕ್ಕೆ ಇಳಿದ ನಿಫ್ಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.