Congress: ಶಾಸಕರಿಗೆ 100 ಕೋ.ರೂ. ಆಮಿಷಕ್ಕೆ ದಾಖಲೆ ಕೊಡಿ: ಪ್ರಹ್ಲಾದ್ ಜೋಶಿ
ಎಸ್‌ಐಟಿ ರಚಿಸಿ ತನಿಖೆ ಮಾಡಿ, ಸಿಎಂ, ಶಾಸಕ ಗಣಿಗ ರವಿಗೆ ಮಂಪರು ಪರೀಕ್ಷೆ ಕೈಗೊಳ್ಳಿ: ಸಿ.ಟಿ. ರವಿ
Team Udayavani, Nov 19, 2024, 7:20 AM IST
ಬೆಂಗಳೂರು: “ಬಿಜೆಪಿಯಿಂದ ಆಪರೇಶನ್ ಕಮಲಕ್ಕೆ ಪ್ರಯತ್ನ ನಡೆಯುತ್ತಿದೆ. ಕಾಂಗ್ರೆಸ್ ಶಾಸಕರಿಗೆ 50ರಿಂದ 100 ಕೋಟಿ ರೂ. ಆಮಿಷ ಒಡ್ಡಲಾಗುತ್ತಿದೆ’ ಎಂಬ ಸಿಎಂ ಸಿದ್ದರಾಮಯ್ಯ ಮತ್ತು ಇತರ ಕಾಂಗ್ರೆಸ್ ನಾಯಕರ ಆರೋಪಕ್ಕೆ ಕೆಂಡಕಾರಿರುವ ಬಿಜೆಪಿ, ಈ ಆರೋಪಗಳಿಗೆ ದಾಖಲೆ ಕೊಡಿ ಎಂದು ಆಗ್ರಹಿಸಿದೆಯಲ್ಲದೆ, ಎಸ್‌ಐಟಿ ರಚಿಸಿ ತನಿಖೆ ನಡೆಸಿ, ಸಿಎಂ ಹಾಗೂ ಶಾಸಕ ಗಣಿಗ ರವಿಗೆ ಮಂಪರು ಪರೀಕ್ಷೆ ನಡೆಸಬೇಕು ಎಂದು ಆಗ್ರಹಿಸಿದೆ. ಮತ್ತೂಂದೆಡೆ ಶಾಸಕ ರವಿ ಗಣಿಗ ಈ ಸಂಬಂಧ ದಾಖಲೆ ಬಿಡುಗಡೆ ಮಾಡಬೇಕೆಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸವಾಲು ಹಾಕಿದ್ದಾರೆ.
ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಮಾತನಾಡಿ, ರಾಜ್ಯ ಸರಕಾರವನ್ನು ಪತನಗೊಳಿಸಲು ಬಿಜೆಪಿ ಪ್ರಯತ್ನ ನಡೆಸುತ್ತಿದೆ ಎಂಬ ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆಯನ್ನು ಆಧರಿಸಿ ನ್ಯಾಯಾಲಯವು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡು ಸಿದ್ದರಾಮಯ್ಯ ಹಾಗೂ ಶಾಸಕ ಗಣಿಗ ರವಿಗೆ ಮಂಪರು ಪರೀಕ್ಷೆ ನಡೆಸಬೇಕೆಂದು ಆಗ್ರಹಿಸಿದ್ದಾರೆ.
ಸತ್ಯ ಬಯಲಿಗೆಳೆದ ಶಾಸಕ ತಮ್ಮಯ್ಯ
ಸರಕಾರವನ್ನು ಉರುಳಿಸಲು ಬಿಜೆಪಿ ಸಂಚು ಮಾಡುತ್ತಿದೆ ಎಂದು ಸಿದ್ದರಾಮಯ್ಯನವರು ಮೊದಲು ಆರೋಪಿಸಿದರು. ಇದಾದ ಬಳಿಕ ಡಿಸಿಎಂ ಡಿ.ಕೆ. ಶಿವಕುಮಾರ್ ಹಾಗೂ ಕೆಲವು ಸಚಿವರು ಆರೋಪ ಮಾಡಿದರು. ಬಳಿಕ ಶಾಸಕ ಗಣಿಗ ರವಿ 100 ಕೋಟಿ ರೂ. ಆಮಿಷ ಒಡ್ಡಲಾಗುತ್ತಿದೆ ಎಂದು ಆರೋಪಿಸಿದರು.
ಅನಂತರ “ನನಗೆ ಯಾರೂ ನೇರವಾಗಿ ಈ ರೀತಿ ಹೇಳಿಲ್ಲ. ಚಿಕ್ಕಮಗಳೂರು ಶಾಸಕ ತಮ್ಮಯ್ಯನವರಿಗೆ ಆಮಿಷವೊಡ್ಡಿದ್ದರು’ ಎಂದು ಆಪಾದಿಸಿದ್ದರು. ಆದರೆ ತಮ್ಮಯ್ಯ ಇದನ್ನು ನಿರಾಕರಿಸುವ ಮೂಲಕ ಸತ್ಯವನ್ನು ಬಯಲಿಗೆ ಎಳೆದಿದ್ದಾರೆ ಎಂದು ಸಿ.ಟಿ. ರವಿ ಅಭಿಪ್ರಾಯಪಟ್ಟರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Darshan: ದರ್ಶನ್ ಜಾಮೀನು ರದ್ದತಿಗೆ ಸುಪ್ರೀಂ ಮೊರೆ ಹೋಗಲು ಸಿದ್ಧತೆ
MUDA: ಸುಮ್ನಿರಯ್ಯ ಗೊತ್ತಿಲ್ದೆ ಮಾತಾಡ್ತಿಯಾ: ಸೋಮಣ್ಣಗೆ ಸಿದ್ದರಾಮಯ್ಯ ಪ್ರೀತಿಯ ಗದರಿಕೆ!
Ration Card: ಬಡವರಿಗೆ ಬಿಪಿಎಲ್ ಕಾರ್ಡ್ ತಪ್ಪದಂತೆ ನೋಡಿಕೊಳ್ಳಿ: ಸಿಎಂ ಸೂಚನೆ
Session: ವಕ್ಫ್ ಜೊತೆ ಬಿಪಿಎಲ್ ಹೋರಾಟಕ್ಕೆ ಬಿಜೆಪಿ ಸಜ್ಜು
Operation Fear: ಕಾಂಗ್ರೆಸ್ ಶಾಸಕರ ಮೇಲೆ ನಿಗಾ ವಹಿಸಿ: ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Actor Siddique: ಅತ್ಯಾಚಾರ ಆರೋಪ; ನಟ ಸಿದ್ದಿಕ್‌ಗೆ ನಿರೀಕ್ಷಣಾ ಜಾಮೀನು ಮಂಜೂರು
Air Pollutionಗೆ ಪಾಕಿಸ್ತಾನ ಕಂಗಾಲು- 3 ದಿನ ಸಂಪೂರ್ಣ ಲಾಕ್ ಡೌನ್…AQI ಮಟ್ಟ 2000!
Keerthy Suresh: ಬಾಲ್ಯದ ಗೆಳೆಯನೊಂದಿಗೆ ಈ ದಿನ ನೆರವೇರಲಿದೆ ಕೀರ್ತಿ ಸುರೇಶ್ ವಿವಾಹ?
Belthangady: ಪತ್ರಕರ್ತ ಭುವನೇಂದ್ರ ಪುದುವೆಟ್ಟು ನಿಧನ
Max Movie: ಬಿಗ್ ಬಾಸ್ ವೇದಿಕೆಯಲ್ಲಿ ʼಮ್ಯಾಕ್ಸ್ʼ ಬಗ್ಗೆ ಮಾತನಾಡಿದ ಕಿಚ್ಚ ಸುದೀಪ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.