MUDA: ಸುಮ್ನಿರಯ್ಯ ಗೊತ್ತಿಲ್ದೆ ಮಾತಾಡ್ತಿಯಾ: ಸೋಮಣ್ಣಗೆ ಸಿದ್ದರಾಮಯ್ಯ ಪ್ರೀತಿಯ ಗದರಿಕೆ!
ಮುಡಾ ಬಗ್ಗೆ ನನ್ ಮಾತು ಕೇಳ್ಬೇಕಿತ್ತು: ಸೋಮಣ್ಣ, ಸಿಎಂ ಜತೆ ಕೇಂದ್ರ ಸಚಿವ ಸ್ವಾರಸ್ಯಕರ ಮಾತು
Team Udayavani, Nov 19, 2024, 7:45 AM IST
ಬೆಂಗಳೂರು: “ನನ್ ಮಾತು ಕೇಳಿದ್ರೆ ಇಷ್ಟೆಲ್ಲ ಆಗ್ತಿತ್ತಾ’ ಎಂದು ಕೇಂದ್ರ ಸಚಿವ ವಿ. ಸೋಮಣ್ಣ ಹೇಳಿದರೆ “ಏಯ್ ಸುಮ್ನಿರಯ್ಯ ಗೊತ್ತಿಲ್ದೆ ಏನೆಲ್ಲ ಮಾತಾಡ್ತಿಯಾ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರೀತಿಯಿಂದ ಗದರಿದ ಪ್ರಸಂಗ ನಡೆದಿದೆ.
ಇದು ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದ ವೇಳೆ ಸೋಮಣ್ಣ ಹಾಗೂ ಸಿದ್ದರಾಮಯ್ಯ ಆಕಸ್ಮಿಕವಾಗಿ ಮುಖಾಮುಖಿಯಾದರು. ಆಗ ಮುಡಾ ನಿವೇಶನ ಹಂಚಿಕೆ ವಿಚಾರ ಪ್ರಸ್ತಾವಿಸಿದ ಸೋಮಣ್ಣ, ಸಿದ್ದರಾಮಯ್ಯ ವಿಚಾರದಲ್ಲಿ ನನ್ನದು ಏನಿದ್ದರೂ ನೇರಮಾತು. ಸಣ್ಣ ವಿಚಾರಕ್ಕೆ ಇಷ್ಟೆಲ್ಲ ಆಗುತ್ತಿದೆ. ಅಂದೇ ಹೇಳಿದ್ದೆ. ನನ್ನ ಮಾತು ಕೇಳಿ ನಿವೇಶನ ಹಿಂದಿರುಗಿಸಿದ್ದರೆ ಇಷ್ಟೆಲ್ಲ ಆಗುತ್ತಿರಲಿಲ್ಲ. ಸದನದಲ್ಲಿ ಇಷ್ಟು ಕೋಟಿ ಅಲ್ಲ, ಅಷ್ಟು ಕೋಟಿ ಎಂದು ಏಕೆ ಹೇಳಿದ್ರಿ. ನಾವು ಹೇಳಿದ್ದೆವಾ ನಿಮಗೆ ಹೇಳ್ಳೋಕೆ? ನಾನೇನು ಸದನದಲ್ಲಿ ಇದ್ನಾ?’ ಎಂದೂ ಪ್ರೀತಿಯಿಂದಲೇ ಸಿದ್ದರಾಮಯ್ಯ ನಡೆಗೆ ಆಕ್ಷೇಪ ವ್ಯಕ್ತಪಡಿಸಿದರು.
ಇದಕ್ಕೆ ಪ್ರೀತಿಯಿಂದಲೇ ಗದರಿದ ಸಿದ್ದರಾಮಯ್ಯ “ಏಯ್ ಗೊತ್ತಿಲ್ಲದೆ ಏನೆಲ್ಲಾ ಮಾತನಾಡ್ತೀಯಾ. ಅವರೆಲ್ಲಾ ಸುಳ್ಳು ಹೇಳ್ತಾವ್ರೆ. ಅದು ಹಾಗಲ್ಲಾ ನನ್ನ ಮಾತು ಕೇಳಯ್ಯ. ಭೂ ಸ್ವಾಧೀನ ಕಾಯ್ದೆ ಬಗ್ಗೆ ಕೇಳು, ಮುಡಾದಿಂದ ಪ್ರಕ್ರಿಯೆಯಲ್ಲಿ ಸಮಸ್ಯೆ ಆಗಿದೆ’ ಎಂದು ಪ್ರಕರಣದ ಬಗ್ಗೆ ಸಮಜಾಯಿಷಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Darshan: ದರ್ಶನ್ ಜಾಮೀನು ರದ್ದತಿಗೆ ಸುಪ್ರೀಂ ಮೊರೆ ಹೋಗಲು ಸಿದ್ಧತೆ
Ration Card: ಬಡವರಿಗೆ ಬಿಪಿಎಲ್ ಕಾರ್ಡ್ ತಪ್ಪದಂತೆ ನೋಡಿಕೊಳ್ಳಿ: ಸಿಎಂ ಸೂಚನೆ
Session: ವಕ್ಫ್ ಜೊತೆ ಬಿಪಿಎಲ್ ಹೋರಾಟಕ್ಕೆ ಬಿಜೆಪಿ ಸಜ್ಜು
Operation Fear: ಕಾಂಗ್ರೆಸ್ ಶಾಸಕರ ಮೇಲೆ ನಿಗಾ ವಹಿಸಿ: ಸಿಎಂ ಸಿದ್ದರಾಮಯ್ಯ
Congress: ಶಾಸಕರಿಗೆ 100 ಕೋ.ರೂ. ಆಮಿಷಕ್ಕೆ ದಾಖಲೆ ಕೊಡಿ: ಪ್ರಹ್ಲಾದ್ ಜೋಶಿ
MUST WATCH
ಹೊಸ ಸೇರ್ಪಡೆ
Air Pollutionಗೆ ಪಾಕಿಸ್ತಾನ ಕಂಗಾಲು- 3 ದಿನ ಸಂಪೂರ್ಣ ಲಾಕ್ ಡೌನ್…AQI ಮಟ್ಟ 2000!
Keerthy Suresh: ಬಾಲ್ಯದ ಗೆಳೆಯನೊಂದಿಗೆ ಈ ದಿನ ನೆರವೇರಲಿದೆ ಕೀರ್ತಿ ಸುರೇಶ್ ವಿವಾಹ?
Belthangady: ಪತ್ರಕರ್ತ ಭುವನೇಂದ್ರ ಪುದುವೆಟ್ಟು ನಿಧನ
Max Movie: ಬಿಗ್ ಬಾಸ್ ವೇದಿಕೆಯಲ್ಲಿ ʼಮ್ಯಾಕ್ಸ್ʼ ಬಗ್ಗೆ ಮಾತನಾಡಿದ ಕಿಚ್ಚ ಸುದೀಪ್
Fraud: “ವಿಡಿಯೋಗೆ ಲೈಕ್ ನೀಡಿ’ 13.97 ಲಕ್ಷ ಕಳೆದುಕೊಂಡರು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.