Bengaluru: ಪತಿಯಿಂದ ಭಾರೀ ಸಾಲ; ಪತ್ನಿ ಆತ್ಮಹತ್ಯೆ
Team Udayavani, Nov 19, 2024, 10:28 AM IST
ಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗೃಹಿಣಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಆಂಧ್ರಪ್ರದೇಶ ಮೂಲದ ಎಲೆಕ್ಟ್ರಾನಿಕ್ ಸಿಟಿಯ ದೀಪಾ (36) ಮೃತ ಗೃಹಿಣಿ ಎಂದು ಗುರುತಿಸಲಾಗಿದೆ. ದೀಪಾ ಗೃಹಿಣಿಯಾಗಿದ್ದರೆ, ಇವರ ಪತಿ ಲೇತ್ ಕೆಲಸ ನಿರ್ವಹಿಸುತ್ತಿದ್ದರು.
ಪತಿ ಸುರೇಶ್ ದೊಡ್ಡ ಮೊತ್ತದ ಸಾಲ ಮಾಡಿಕೊಂಡಿ ದ್ದರು ಎನ್ನಲಾಗಿದೆ. ಈ ವಿಚಾರವಾಗಿ ದಂಪತಿ ನಡುವೆ ಜಗಳ ನಡೆಯುತ್ತಿತ್ತು. ಸೋಮವಾರವೂ ದಂಪತಿ ನಡುವೆ ಇದೇ ವಿಚಾರಕ್ಕೆ ಜಗಳ ನಡೆದಿತ್ತು. ಇದರಿಂದ ನೊಂದ ದೀಪಾ ಮನೆಯ ಕೋಣೆಯಲ್ಲಿದ್ದ ಫ್ಯಾನ್ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಇದನ್ನು ಗಮನಿಸಿದ ಪತಿ ಪತ್ನಿ ದೀಪಾಳನ್ನು ನೇಣಿನ ಕುಣಿಕೆಯಿಂದ ಬಿಡಿಸಿ ಆಸ್ಪತ್ರೆಗೆ ದಾಖಲಿಸಿದ್ದ. ಚಿಕಿತ್ಸೆ ಫಲಿಸದೇ ದೀಪಾ ಮೃತಪಟ್ಟಿದ್ದಾರೆ. ಮೇಲ್ನೋಟಕ್ಕೆ ಆತ್ಮಹತ್ಯೆ ಎಂದು ಕಂಡು ಬಂದಿದ್ದು, ತನಿಖೆ ಬಳಿಕ ನಿಖರವಾಗಿ ಸಾವಿಗೆ ಕಾರಣವೇನು ಎಂಬುದು ತಿಳಿದು ಬರಲಿದೆ. ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Sagara: ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪರನ್ನು ತಕ್ಷಣ ಬಂಧಿಸಿ; ಕಾಂಗ್ರೆಸ್ ಆಗ್ರಹ
Ullal: ನ್ಯೂಪಡ್ಪುವಿನಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ಉದ್ಘಾಟನೆ
Hosanagara: ನಗರದ ಹೋಬಳಿ ಆಸ್ಪತ್ರೆಯಲ್ಲಿ ಅವ್ಯವಸ್ಥೆ: ಬಿಜೆಪಿ ಪ್ರತಿಭಟನೆ
Mangaluru: ಪಿಲಿಕುಳದಲ್ಲಿ ಚಿಟ್ಟೆಪಾರ್ಕ್; ಪ್ರವಾಸಿಗರಿಗೆ ಹೊಸ ಆಕರ್ಷಣೆ
Mangaluru: ಕಾರು ಢಿಕ್ಕಿಯಾಗಿ ಮಹಿಳೆ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.