Keerthy Suresh: ಬಾಲ್ಯದ ಗೆಳೆಯನೊಂದಿಗೆ ಈ ದಿನ ನೆರವೇರಲಿದೆ ಕೀರ್ತಿ ಸುರೇಶ್ ವಿವಾಹ?
Team Udayavani, Nov 19, 2024, 11:33 AM IST
ಚೆನ್ನೈ: ಕಳೆದ ಎರಡು ದಿನಗಳಿಂದ ಬಹುಭಾಷಾ ನಟಿ ಕೀರ್ತಿ ಸುರೇಶ್ (Keerthy Suresh) ಅವರ ಮದುವೆ ವಿಚಾರ ಎಲ್ಲೆಡೆ ಹರಿದಾಡುತ್ತಿದೆ. ಇದೀಗ ಈ ಕುರಿತು ಮತ್ತೊಂದು ಅಪ್ಡೇಟ್ ಹೊರಬಿದ್ದಿದೆ.
ಕೆಲ ದಿನಗಳ ಹಿಂದಷ್ಟೇ ಕೀರ್ತಿ ಸುರೇಶ್ ತಮ್ಮ ಪೋಷಕರು ನೋಡಿದ ಹುಡುಗನ ಜತೆ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ ಎನ್ನುವ ಸುದ್ದಿಯೊಂದು ಹರಿದಾಡಿತ್ತು. ಈಗ ಮದುವೆ ದಿನ ಹಾಗೂ ಹುಡುಗನ ಕುರಿತು ವಿಚಾರ ಬಹಿರಂಗವಾಗಿದೆ.
ಕೀರ್ತಿ ಸುರೇಶ್ ಡಿಸೆಂಬರ್ ತಿಂಗಳಿನಲ್ಲಿಆಕೆಯ ಪೋಷಕರಿಂದ ನಿಶ್ಚಯಿಸಲ್ಪಟ್ಟ ಹುಡುಗನ ಜತೆ ಗೋವಾದಲ್ಲಿ ಮದುವೆ ಆಗಲಿದ್ದಾರೆ ಎನ್ನುವ ಮಾತಿನ ನಡುವೆಯೇ ಅವರು ಯಾರ ಜತೆ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ ಎನ್ನುವ ಬಗ್ಗೆ ಸುದ್ದಿ ಆಗಿದೆ.
ಡಿಸೆಂಬರ್ ಎರಡನೇ ವಾರದಲ್ಲಿ ತಮ್ಮ ಬಹುಕಾಲದ ಗೆಳೆಯ ಆಂಟೋನಿ ತಟ್ಟಿಲ್ (Antony Thattil) ಅವರೊಂದಿಗೆ ಕೀರ್ತಿ ಸುರೇಶ್ ಅವರು ವಿವಾಹವಾಗಲಿದ್ದಾರೆ ಎಂದು ವರದಿ ಆಗಿದೆ.
ಆಂಟೋನಿ ದುಬೈ ಮೂಲದ ಉದ್ಯಮಿಯಾಗಿದ್ದು, ಕಳೆದ 15 ವರ್ಷಗಳಿಂದ ಕೀರ್ತಿ ಹಾಗೂ ಆಂಟೋನಿ ರಿಲೇಷನ್ ಶಿಪ್ನಲ್ಲಿದ್ದಾರೆ ಎನ್ನಲಾಗಿದೆ. ಡಿಸೆಂಬರ್ 11, 12 ರಂದು ಎರಡು ಕುಟುಂಬದವರ ಸಮ್ಮುಖದಲ್ಲಿ ಗೋವಾದಲ್ಲಿ ವಿವಾಹ ಸಮಾರಂಭ ನೆರವೇರಲಿದೆ ಎಂದು ವರದಿ ತಿಳಿಸಿದೆ.
ಆಂಟೋನಿ ಹಾಗೂ ಕೀರ್ತಿ ಜತೆಯಾಗಿ ಶಾಲೆಗೆ ಹೋಗುತ್ತಿದ್ದರು. ಹೈಸ್ಕೂಲ್ನಿಂದಲೂ ಇಬ್ಬರು ಆತ್ಮೀಯ ಸ್ನೇಹಿತರಾಗಿದ್ದರು ಎನ್ನಲಾಗಿದೆ.
ಸದ್ಯ ಈ ಬಗ್ಗೆ ನಟಿಯ ಕಡೆಯಿಂದ ಅಧಿಕೃತ ಮಾಹಿತಿ ಹೊರಬೀಳಬೇಕಿದೆ. ಸದ್ಯ ಕೀರ್ತಿ ಸುರೇಶ್ ಅವರು ʼಬೇಬಿ ಜಾನ್ʼ ಬೇಬಿ ಜಾನ್. ʼರಿವಾಲ್ವರ್ ರೀಟಾʼ ಮತ್ತು ʼಕನ್ನಿವೇದಿʼ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tollywood: ʼಪುಷ್ಪ-2ʼ ಟ್ರೇಲರ್ನಲ್ಲಿ ಕಾಣುವ ಅರ್ಧ ತಲೆ ಬೋಳಿಸಿರುವ ಈ ನಟ ಯಾರು?
Actor Siddique: ಅತ್ಯಾಚಾರ ಆರೋಪ; ನಟ ಸಿದ್ದಿಕ್ಗೆ ನಿರೀಕ್ಷಣಾ ಜಾಮೀನು ಮಂಜೂರು
Nayanthara: ʼರಕ್ಕಯಿʼ ಆಗಿ ದುಷ್ಟರ ಪಾಲಿಗೆ ದುಸ್ವಪ್ನವಾದ ಲೇಡಿ ಸೂಪರ್ ಸ್ಟಾರ್
Kanguva ಕುರಿತು ಭಾರೀ ನೆಗೆಟಿವ್ ವಿಮರ್ಶೆ: ನಟ ಸೂರ್ಯ ಪತ್ನಿ ಜ್ಯೋತಿಕಾ ಆಕ್ರೋಶ
Big Boss ಸ್ಪರ್ಧಿಯಾಗಿದ್ದ ನಟ-ಗಾಯಕ ಮಾದಕ ವಸ್ತು ಸಹಿತ ಬಂಧನ
MUST WATCH
ಹೊಸ ಸೇರ್ಪಡೆ
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ… ನಕ್ಸಲ್ ಎನ್ಕೌಂಟರ್ ಬಗ್ಗೆ ಡಿಐಜಿ ಹೇಳಿದ್ದೇನು ?
Udupi: ಈಶ್ವರನಗರ-ಪರ್ಕಳ ರಸ್ತೆಯ ಹೊಂಡಗಳಿಗೆ ಕೊನೆಗೂ ತೇಪೆ
Udupi: ವಿಸಿಲ್ ಹೊಡೆದು, ಕೈ ಸನ್ನೆಯಲ್ಲೇ ಟ್ರಾಫಿಕ್ ನಿರ್ವಹಣೆ!
Paddana-Tulu folk songs: ಮರೆಯಾಗದಿರಲಿ ಪಾಡ್ದನನವೆಂಬ ಸಂಸ್ಕೃತಿಯ ಸಂಪರ್ಕ ಕೊಂಡಿ
Padubidri: ನಿಧಾನವಾಗಿ ಚಲಿಸಿ, ಹೆದ್ದಾರಿ ಕಾಮಗಾರಿ ನಡೆಯುತ್ತಿದೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.