Belthangady: ಪತ್ರಕರ್ತ ಭುವನೇಂದ್ರ ಪುದುವೆಟ್ಟು ನಿಧನ
Team Udayavani, Nov 19, 2024, 11:12 AM IST
ಬೆಳ್ತಂಗಡಿ: ಹಿರಿಯ ಅನುಭವಿ ಪತ್ರಕರ್ತ ಬೆಳ್ತಂಗಡಿ ತಾಲೂಕಿನ ಪದುವೆಟ್ಟು ನಿವಾಸಿ ಭುವನೇಂದ್ರ ಪುದುವೆಟ್ಟು (48) ಅವರು ನ.19ರ ಮಂಗಳವಾರ ಅನಾರೋಗ್ಯದಿಂದ ನಿಧನ ಹೊಂದಿದ್ದಾರೆ.
ಕನ್ನಡ ಜನಾಂತರಂಗದಿಂದ ವೃತ್ತಿ ಆರಂಭಸಿ, ವಿಜಯವಾಣಿ ದಿನಪತ್ರಿಕೆಯಲ್ಲಿ ಉಪ ಸಂಪಾದಕರಾಗಿ, ಹಿರಿಯ ಉಪ ಸಂಪಾದಕರಾಗಿ ಕಾರ್ಯನಿರ್ವಹಿಸಿ ಕಳೆದ 6 ತಿಂಗಳಿನಿಂದ ಬೆಳ್ತಂಗಡಿ ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ ಪ್ರಧಾನ ವರದಿಗಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.
ನ. 17 ರವಿವಾರ ತೀವ್ರ ಹೊಟ್ಟೆ ನೋವು ಹಾಗೂ ವಾಂತಿ ಕಾಣಿಸಿಕೊಂಡು ಆರೋಗ್ಯದಲ್ಲಿ ಏರುಪೇರಾದ ಕಾರಣ ಮೂಡುಬಿದ್ರೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದರು. ತಪಾಸಣೆ ವೇಳೆ ಪಿತ್ತಕೋಶದಲ್ಲಿ ಕಲ್ಲು ಇರುವುದರಿಂದ ಪ್ಯಾಂಕ್ರಿಯಾಸಿಸ್ ಇರುವುದು ಗೊತ್ತಾಗಿತ್ತು.
ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ನ.18ರ ಸೋಮವಾರ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ನ.19ರ ಮಂಗಳವಾರ ಚಿಕಿತ್ಸೆಗೆ ಸ್ಪಂದಿಸದೆ ನಿಧನ ಹೊಂದಿದ್ದಾರೆ ಎಂದು ತಿಳಿದು ಬಂದಿದೆ.
ಕರಾವಳಿ ಅಲೆ, ವೆಬ್ದುನಿಯಾ, ಕಸ್ತೂರಿ ಚಾನೆಲ್, ವಿಜಯವಾಣಿ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸಿದ್ದ ಭುವನೇಂದ್ರ ಅವರು ಕೆಲ ಸಮಯಗಳಿಂದ ಬೆಳ್ತಂಗಡಿ ಸುದ್ದಿ ಬಿಡುಗಡೆ ಪತ್ರಿಕೆಯಲ್ಲಿ ಮುಖ್ಯ ವರದಿಗಾರರಾಗಿದ್ದರು.
ಮೃತರು ತಂದೆ ನಾರಾಯಣ ಪೂಜಾರಿ, ತಾಯಿ ಮೋಹಿನಿ, ಪತ್ನಿ ಸುಜಾತಾ, ಇಬ್ಬರು ಪುತ್ರಿಯರನ್ನು ಮತ್ತು ಸಹೋದರ ಯತೀಂದ್ರ ಅವರನ್ನು ಅಗಲಿದ್ದಾರೆ.
ಭುವನೇಂದ್ರ ಅವರ ಪಾರ್ಥೀವ ಶರೀರವನ್ನು ನ.19ರ ಮಂಗಳವಾರ ಮಧ್ಯಾಹ್ನ ಮಂಗಳೂರು ಆಸ್ಪತ್ರೆಯಿಂದ ಪುದುವೆಟ್ಟು ಮನೆಗೆ ತಂದು ಅಂತಿಮ ವಿಧಿವಿಧಾನ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Sagara: ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪರನ್ನು ತಕ್ಷಣ ಬಂಧಿಸಿ; ಕಾಂಗ್ರೆಸ್ ಆಗ್ರಹ
Ullal: ನ್ಯೂಪಡ್ಪುವಿನಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ಉದ್ಘಾಟನೆ
Hosanagara: ನಗರದ ಹೋಬಳಿ ಆಸ್ಪತ್ರೆಯಲ್ಲಿ ಅವ್ಯವಸ್ಥೆ: ಬಿಜೆಪಿ ಪ್ರತಿಭಟನೆ
Mangaluru: ಪಿಲಿಕುಳದಲ್ಲಿ ಚಿಟ್ಟೆಪಾರ್ಕ್; ಪ್ರವಾಸಿಗರಿಗೆ ಹೊಸ ಆಕರ್ಷಣೆ
Mangaluru: ಕಾರು ಢಿಕ್ಕಿಯಾಗಿ ಮಹಿಳೆ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.