Uppinangady: ಮಕ್ಕಳಿಗೆ ಚರಂಡಿ ಕೊಳಚೆಯಿಂದ ಮುಕ್ತಿ ಎಂದು?
ಉಪ್ಪಿನಂಗಡಿ ಪೇಟೆಯ ಸರಕಾರಿ ಮಾದರಿ ಶಾಲೆಯ ಪರಿಸರ;| ಎಸಿ ಸಹಿತ ಯಾರಲ್ಲಿ ಹೇಳಿದರೂ ಸಮಸ್ಯೆ ಪರಿಹಾರವಾಗಿಲ್ಲ
Team Udayavani, Nov 19, 2024, 1:02 PM IST
ಉಪ್ಪಿನಂಗಡಿ: ರಾಷ್ಟ್ರೀಯ ಹೆದ್ದಾರಿ 75 ರ ಸಮೀಪದ ಶತಮಾನದ ಇತಿಹಾಸವನ್ನು ಹೊಂದಿರುವ ಉಪ್ಪಿನಂಗಡಿ ಸರಕಾರಿ ಮಾದರಿ ಶಾಲಾ ವಠಾರದ ಪಕ್ಕದಲ್ಲಿರುವ ಚರಂಡಿಯಲ್ಲಿ ಕೊಳಚೆ ನೀರು ಶೇಖರಣೆಗೊಂಡು ಸಹಿಸಲಸಾಧ್ಯವಾದ ದುರ್ನಾತ ಬೀರುತ್ತಿದೆ. ಚರಂಡಿಯಲ್ಲಿ ಕೊಳಚೆ ನೀರು ಸರಾಗವಾಗಿ ಹರಿದು ಹೋಗದೆ ಅಲ್ಲಿಲ್ಲಿ ಕೊಳಚೆ ನೀರು ನಿಂತಿರುವುದರಿಂದ ಸೊಳ್ಳೆಗಳು ಭಾರೀ ಪ್ರಮಾಣದಲ್ಲಿ ಉತ್ಪಾದನೆಯಾಗಿದ್ದು ಸಾಂಕ್ರಮಿಕ ರೋಗಕ್ಕೆ ಕಾರಣವಾಗಿದೆ. ಇದರಿಂದಾಗಿ ಮಕ್ಕಳು ಪದೇಪದೆ ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ ಎಂದು ಪೋಷಕರು ಆಂತಕ ವ್ಯಕ್ತಪಡಿಸುತ್ತಿದ್ದಾರೆ.
ಈ ಮೊದಲು ಚರಂಡಿ ನೀರು ಸರಾಗವಾಗಿ ಹರಿದು ಹೊಗುತ್ತಿದ್ದು, ಇಲ್ಲಿನ ಹೆದ್ದಾರಿ ಚತುಷ್ಪಥ ರಸ್ತೆ ವಿಸ್ತರಣೆ ಕಾಮಗಾರಿಯ ಸಂದರ್ಭದಲ್ಲಿ ಚರಂಡಿಗೆ ತಡೆಯಾದ್ದರಿಂದ ಸದ್ಯಕ್ಕೆ ನೀರು ಹರಿದು ಹೋಗದೆ ಶೇಖರಣೆಗೊಳ್ಳುತ್ತಿದೆ. ಪಟ್ಟಣದ ವಾಣಿಜ್ಯ ಕಟ್ಟಡಗಳಲ್ಲಿನ ಮಲಿನ ತ್ಯಾಜ್ಯ ನೀರು ಈ ಚರಂಡಿ ಮೂಲಕ ಹರಿದು ಶಾಲಾ ವಠಾರದಲ್ಲಿ ಹಾದು ಹೋಗುವ ಬದಲು ಒಂದೆಡೆ ಶೇಖರಣೆಗೊಂಡು ಮಕ್ಕಳ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ.
ಇಲ್ಲಿನ ಸಮಸ್ಯೆಯ ಬಗ್ಗೆ ಉಪ್ಪಿನಂಗಡಿ ಗ್ರಾ.ಪಂ. ಸಾಮಾನ್ಯ ಸಭೆಯಲ್ಲಿಯೂ ಸದಸ್ಯರು ವಿಷಯ ಪ್ರಸ್ತಾವಿಸಿದ್ದರೂ ಏನೂ ಈ ವರೆಗೆ ಪ್ರಯೋಜನ ಆಗಿಲ್ಲ. ಅದಾದ ಬಳಿಕ ಶಾಲಾಭಿವೃದ್ಧಿ ಸಮಿತಿ ನಿಯೋಗ ಪುತ್ತೂರು ಸಹಾಯಕ ಕಮಿಷನರ್ ಬಳಿ ತೆರಳಿ ಮನವಿ ನೀಡಿತ್ತು. ಆದರೂ ಸಮಸ್ಯೆಗೆ ಯಾವುದೇ ಪರಿಹಾರ ದೊರೆತಿಲ್ಲ.
ಇತ್ತೀಚಿನ ದಿನಗಳಲ್ಲಿ ಡೆಂಗ್ಯೂ, ಮಲೇರಿಯಾದಂತಹ ಸಾಂಕ್ರಾಮಿಕ ರೋಗಗಳ ಸಂಖ್ಯೆ ಹೆಚ್ಚಾಗಿದ್ದು, ಆದಷ್ಟು ಬೇಗ ಸಂಬಂಧಪಟ್ಟ ಇಲಾಖೆ ಈ ಬಗ್ಗೆ ಗಮನ ಹರಿಸಿ ಕೊಳಚೆ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಪೋಷಕರು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Viral Video: ಟಿಕ್‌ಟಾಕ್ ಸ್ಟಾರ್ ಬಳಿಕ ಮತ್ತೊಬ್ಬ ಖ್ಯಾತ ನಟಿಯ ಖಾಸಗಿ ವಿಡಿಯೋ ಲೀಕ್
Shimoga: ಮುಸ್ಲಿಂ ಸಂತೃಪ್ತಿಗೆ ಖರ್ಗೆ ಆರ್ ಎಸ್‌ಎಸ್ ಹೇಳಿಕೆ: ಈಶ್ವರಪ್ಪ ಟೀಕೆ
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ… ನಕ್ಸಲ್ ಎನ್‌ಕೌಂಟರ್ ಬಗ್ಗೆ ಡಿಐಜಿ ಹೇಳಿದ್ದೇನು ?
Udupi: ಈಶ್ವರನಗರ-ಪರ್ಕಳ ರಸ್ತೆಯ ಹೊಂಡಗಳಿಗೆ ಕೊನೆಗೂ ತೇಪೆ
Udupi: ವಿಸಿಲ್ ಹೊಡೆದು, ಕೈ ಸನ್ನೆಯಲ್ಲೇ ಟ್ರಾಫಿಕ್ ನಿರ್ವಹಣೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.