Sagara ಉಪ ಅರಣ್ಯ ಸಂಕ್ಷಣಾಧಿಕಾರಿಗಳ ವಿರುದ್ಧ ಉಗ್ರ ಪ್ರತಿಭಟನೆ;ರತ್ನಾಕರ ಹೊನಗೋಡು ಎಚ್ಚರಿಕೆ
Team Udayavani, Nov 19, 2024, 3:09 PM IST
ಸಾಗರ: ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರಕರಣವೊಂದರಲ್ಲಿ ನನ್ನ ಒತ್ತಡವಿದೆ ಎಂದು ಹೇಳುವ ಮೂಲಕ ಜನರಲ್ಲಿ ತಪ್ಪು ಭಾವನೆಯುಂಟು ಮಾಡುವ ಪ್ರಯತ್ನ ನಡೆಸುತ್ತಿರುವುದು ಖಂಡನೀಯ ಎಂದು ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಹಾಗೂ ಬಿಜೆಪಿ ಮುಖಂಡ ರತ್ನಾಕರ ಹೊನಗೋಡು ತಿಳಿಸಿದ್ದಾರೆ.
ನ.19ರ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅನಗತ್ಯವಾಗಿ ನನ್ನ ಹೆಸರು ಉಪಯೋಗಿಸಿ ನನ್ನ ಬಗ್ಗೆ ಜನರಲ್ಲಿ ತಪ್ಪು ಭಾವನೆ ಮೂಡಿಸುವುದರ ಹಿಂದೆ ಯಾರಿದ್ದಾರೆ ಎಂದು ಒಂದು ವಾರದೊಳಗೆ ಸ್ಪಷ್ಟಪಡಿಸದೆ ಹೋದಲ್ಲಿ ಸಾಗರ ಉಪ ಅರಣ್ಯ ಸಂಕ್ಷಣಾಧಿಕಾರಿ ವಿರುದ್ಧ ಉಗ್ರ ಪ್ರತಿಭಟನೆ ನಡೆಸುತ್ತೇವೆ ಎಂದು ಎಚ್ಚರಿಕೆ ನೀಡಿದರು.
ಹೊಸೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸಾಗುವಾನಿ ಮರ ಕಡಿತಕ್ಕೆ ಸಂಬಂಧಪಟ್ಟಂತೆ ನ. 7ಕ್ಕೆ ಪ್ರಕರಣ ದಾಖಲಾಗಿದೆ. ಮರ ಮತ್ತು ವಾಹನವನ್ನು ವಶಪಡಿಸಿಕೊಳ್ಳಲಾಗಿದೆ. ಒಂದು ವಾರವಾದರೂ ವಾಹನವನ್ನು ಬಿಡಲಿಲ್ಲ. ಈ ಪ್ರಕರಣಕ್ಕೂ ನನಗೂ ಸಂಬಂಧವಿಲ್ಲ. ಆದರೆ ಡಿಎಫ್‌ಓ ಮೋಹನ್ ಕುಮಾರ್ ಎಂಬ ಗ್ರಾಮಸ್ಥರೊಬ್ಬರು ಹೋಗಿ ಕೇಳಿದಾಗ ನಿಮ್ಮ ವಿರುದ್ಧ ಪ್ರಕರಣ ದಾಖಲಿಸಲು ರತ್ನಾಕರ ಹೊನಗೋಡು ಅವರ ಒತ್ತಡವಿದೆ. ಪ್ರಕರಣ ದಾಖಲಿಸದೆ ಹೋದಲ್ಲಿ ಪ್ರತಿಭಟನೆ ಮಾಡುವ ಎಚ್ಚರಿಕೆ ನೀಡಿದ್ದಾರೆ ಎಂದು ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ.
ನನಗೆ ಸಂಬಂಧವೇ ಇಲ್ಲದ ಪ್ರಕರಣದಲ್ಲಿ ಅನಗತ್ಯವಾಗಿ ನನ್ನ ಹೆಸರು ಎಳೆದು ತಂದು ಅಶಾಂತಿ ಸೃಷ್ಟಿಸುವ ಕೆಲಸ ಯಾರೋ ಮಾಡುತ್ತಿದ್ದಾರೆ. ತಕ್ಷಣ ಡಿಎಫ್‌ಓ ಸ್ಪಷ್ಟನೆ ನೀಡದೆ ಹೋದಲ್ಲಿ ಉಪವಿಭಾಗಾಧಿಕಾರಿಗಳ ಕಚೇರಿ, ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸುವ ಜೊತೆಗೆ ಸರ್ಕಾರಕ್ಕೆ ಸಂಬಂಧಪಟ್ಟ ಇಲಾಖೆಯ ಮೇಲಾಧಿಕಾರಿಗಳಿಗೆ ಪತ್ರ ಬರೆಯಲಾಗುತ್ತದೆ ಎಂದರು.
ತಾಲೂಕಿನಲ್ಲಿ ಸೇಡಿನ ರಾಜಕಾರಣ ನಡೆಯುತ್ತಿದೆ. ಬಿಜೆಪಿಯವರನ್ನು ಬಗ್ಗಿಸಲು ಆಡಳಿತ ನಡೆಸುವವರು ಇಂತಹ ಷಡ್ಯಂತ್ರ ಮಾಡುತ್ತಿದ್ದಾರೆ ಎನ್ನುವ ಚರ್ಚೆ ವ್ಯಾಪಕವಾಗಿದೆ. ತಮ್ಮ ವಿರುದ್ಧ ಇದ್ದವರನ್ನು ಶಾಸಕರು ರೌಡಿಶೀಟ್‌ಗೆ ಸೇರಿಸುವುದು, ಖಾಲಿ ಲಾರಿಯನ್ನು ಹಿಡಿದು ಅದರಲ್ಲಿ ಮರಳು ತುಂಬಿ ಕೇಸ್ ಹಾಕಿಸುವ ಪ್ರಕರಣ ಹೆಚ್ಚುತ್ತಿದೆ. ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳು ಅನಗತ್ಯವಾಗಿ ಅಧಿಕಾರಸ್ತರ ಮಾತು ಕೇಳಿ ತೊಂದರೆ ಕೊಡುತ್ತಿದ್ದಾರೆ. ಜನಪ್ರತಿನಿಧಿಗಳು ಇರುವುದು ಕೇವಲ 5 ವರ್ಷ. ಅಧಿಕಾರಿಗಳು ಅವರ ಮಾತು ಕೇಳಿ ತಮ್ಮ ಅಧಿಕಾರ ದುರುಪಯೋಗಪಡಿಸಿಕೊಳ್ಳಬಾರದು ಎಂದರು.
ಕ್ಷೇತ್ರವ್ಯಾಪ್ತಿಯಲ್ಲಿ 2013 ರಿಂದ 2023 ರವರೆಗೆ ಸೇಡಿಗಾಗಿ ರೌಡಿಶೀಟರ್ ಸೇರಿಸುವ ಕೆಲಸವಾಗಿರಲಿಲ್ಲ. ಈಗ ಅದು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ತಾವು ಬಂದರೆ ವೈನ್‌ಶಾಪ್ ಬಂದ್ ಮಾಡುತ್ತೇವೆ ಎಂದು ಶಾಸಕರು ಹೇಳಿದ್ದರು. ಈಗ ಅವರ ಹಿಂಬಾಲಕರೇ ಹಳ್ಳಿಹಳ್ಳಿಗಳಿಗೆ ಬಾಕ್ಸ್‌ಗಟ್ಟಲೆ ಅಕ್ರಮ ಮದ್ಯವನ್ನು ಸಾಗಾಣಿಕೆ ಮಾಡುತ್ತಿದ್ದಾರೆ. ಮರಳು ಲಾರಿ, ಕಲ್ಲುಕ್ವಾರೆ, ಮದ್ಯದಂಗಡಿಗಳಿಗೆ ತಿಂಗಳಿಗೆ ಮಾಮೂಲಿ ಫಿಕ್ಸ್ ಮಾಡಲಾಗಿದೆ. ಸ್ವತಃ ಕಾಂಗ್ರೆಸ್ ಪಕ್ಷದವರೇ ಶಾಸಕರ ವರ್ತನೆಗೆ ಬೇಸತ್ತು ಹೋಗಿದ್ದಾರೆ. ಲಕ್ಷಾಂತರ ರೂ. ಕೊಟ್ಟು ಇಲ್ಲಿಗೆ ವರ್ಗಾವಣೆಯಾಗಿ ಬಂದವರು ತಾವು ಕೊಟ್ಟ ಹಣ ವಾಪಾಸ್ ಪಡೆಯಲು ಶಾಸಕರ ಹೆಸರು ಹೇಳಿ ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ. ಮುಂದಿನ ದಿನಗಳಲ್ಲಿ ಬಿಜೆಪಿ ವತಿಯಿಂದ ಇದರ ವಿರುದ್ಧ ಜನಾಂದೋಲನಾ ಹಾಗೂ ಪ್ರತಿಭಟನೆ ಹಮ್ಮಿಕೊಳ್ಳುವ ಎಚ್ಚರಿಕೆ ನೀಡಿದರು.
ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ದೇವೇಂದ್ರಪ್ಪ ಯಲಕುಂದ್ಲಿ ಮಾತನಾಡಿದರು.
ಗೋಷ್ಠಿಯಲ್ಲಿ ಭರ್ಮಪ್ಪ ಅಂದಾಸುರ, ಮೋಹನ್ ಕುಮಾರ್, ಶಾಂತಪ್ಪ ಗೌಡ, ಬಿ.ಟಿ.ರವೀಂದ್ರ, ನಟರಾಜ ಗೇರುಬೀಸು, ಪರಮೇಶಿ ಕಣ್ಣೂರು, ಚಂದ್ರು, ರಮೇಶ್ ಹೊಸೂರು ಇನ್ನಿತರರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Naxal: ಸರ್ಕಾರಿ ಬಸ್ ಅಡ್ಡ ಹಾಕಿ ಬೆಂಕಿ ಹಚ್ಚಿ ಕರಪತ್ರ ಹಂಚಿದ್ದ ವಿಕ್ರಂಗೌಡ ಮತ್ತು ತಂಡ!
Shimoga: ಮುಸ್ಲಿಂ ಸಂತೃಪ್ತಿಗೆ ಖರ್ಗೆ ಆರ್ ಎಸ್‌ಎಸ್ ಹೇಳಿಕೆ: ಈಶ್ವರಪ್ಪ ಟೀಕೆ
Thirthahalli: ಪಾದರಕ್ಷೆ, ಮೊಬೈಲ್ ನದಿ ದಡದಲ್ಲಿ ಬಿಟ್ಟು ವ್ಯಕ್ತಿ ನದಿಗೆ; ಶಂಕೆ
Sagara: ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪರನ್ನು ತಕ್ಷಣ ಬಂಧಿಸಿ; ಕಾಂಗ್ರೆಸ್ ಆಗ್ರಹ
Hosanagara: ನಗರದ ಹೋಬಳಿ ಆಸ್ಪತ್ರೆಯಲ್ಲಿ ಅವ್ಯವಸ್ಥೆ: ಬಿಜೆಪಿ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Naxal: ನಕ್ಸಲರ ನೆತ್ತರ ಹೆಜ್ಜೆ..: ರಾಜ್ಯದಲ್ಲಿ ನಕ್ಸಲ್ ಅಟ್ಟಹಾಸದ ಕರಾಳ ಇತಿಹಾಸ ಇಲ್ಲಿದೆ
Mahaveera Hanuma: ಆಲ್ಬಂನಲ್ಲಿ ಹನುಮ ಗಾನ
Tribanadhari Barbarik: ತ್ರಿಬಾಣಧಾರಿ ಬಾರ್ಬರಿಕದಲ್ಲಿ ವಸಿಷ್ಠ
Naxal: ಸರ್ಕಾರಿ ಬಸ್ ಅಡ್ಡ ಹಾಕಿ ಬೆಂಕಿ ಹಚ್ಚಿ ಕರಪತ್ರ ಹಂಚಿದ್ದ ವಿಕ್ರಂಗೌಡ ಮತ್ತು ತಂಡ!
Wine Merchants: ನಾಳೆಯ ಮದ್ಯ ಮಾರಾಟ ಬಂದ್ ನಿರ್ಧಾರ ವಾಪಸ್ ಪಡೆದ ಅಸೋಸಿಯೇಷನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.