Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ

40 ಪರ್ಸೆಂಟ್ ಕಮಿಷನ್‌ಗೆ ಸಂಬಂಧಿಸಿದ ದಾಖಲೆ ನಾಳೆ ನ್ಯಾ.ನಾಗಮೋಹನದಾಸ ಸಮಿತಿಗೆ ಸಲ್ಲಿಕೆ: ರಾಜ್ಯ ಗುತ್ತಿಗೆದಾರರ ಸಂಘದ ರಾಜ್ಯಾಧ್ಯಕ್ಷ

Team Udayavani, Nov 19, 2024, 8:18 PM IST

Contracters-Assoi

ಕಲಬುರಗಿ: ಈ ಹಿಂದಿನ ಬಿಜೆಪಿ ಸರ್ಕಾರ ಆಡಳಿತದಲ್ಲಿದ್ದಾಗ 40 ಪರ್ಸೆಂಟ್ ಕಮಿಷನ್ ಆರೋಪ ಸಂಬಂಧವಾಗಿ ಲೋಕಾಯುಕ್ತಗೆ ದೂರೇ ನೀಡಿಲ್ಲ ಎಂದು ರಾಜ್ಯ ಗುತ್ತಿಗೆದಾರರ ಸಂಘ (ಕಾಂಟ್ರಾಕ್ಟರ್ ಅಸೋಸಿಯೇಷನ್)ದ ರಾಜ್ಯಾಧ್ಯಕ್ಷ ಜಗನ್ನಾಥ ಶೇಗಜಿ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಬಿಬಿಎಂಪಿಗೆ ಸಂಬಂಧಿಸಿದಂತೆ ಮಾಡಿದ್ದ  40 ಪರ್ಸೆಂಟ್ ಕಮಿಷನ್ ಆರೋಪಗಳು ಶುದ್ಧ ಸುಳ್ಳೆಂದು ಲೋಕಾಯುಕ್ತ ತನಿಖಾ ಅಧಿಕಾರಿಗಳು ಸಲ್ಲಿಸಿರುವ ವರದಿಗೂ ಗುತ್ತಿಗೆದಾರರ ಸಂಘದ ಈ ಹಿಂದಿನ ರಾಜ್ಯಾಧ್ಯಕ್ಷ ದಿವಂಗತ ಕೆಂಪಣ್ಣ ಅವರು ಮಾಡಿರುವ ಆರೋಪಕ್ಕೂ ಸಂಬಂಧವಿಲ್ಲ. ಗುತ್ತಿಗೆದಾರರ ಸಂಘದ ಉಪಾಧ್ಯಕ್ಷ ಅಂಬಿಕಾಪತಿ ಬಿಬಿಎಂಪಿಗೆ ಸಂಬಂಧಿಸಿದಂತೆ ನೀಡಲಾದ ದೂರಿಗೆ ಲೋಕಾಯುಕ್ತ ತನಿಖಾಧಿಕಾರಿಗಳು ವರದಿ ನೀಡಿದ್ದಾರೆ ಎಂದರು.‌

ಪ್ರಮುಖವಾಗಿ ಅಂಬಿಕಾಪತಿ ನೀಡಿರುವ ದೂರನ್ನು ಸಂಘದ ರಾಜ್ಯ ಸಮಿತಿ ಗಮನಕ್ಕೆ ತಂದಿಲ್ಲ. ಜತೆಗೆ ಈಗ ಅಂಬಿಕಾಪತಿ ಮೃತಪಟ್ಟಿದ್ದಾರೆ. ಕೊನೆ ಪಕ್ಷ ಅಂಬಿಕಾಪತಿಯವರು ನೀಡಲಾಗಿರುವ ಬಿಬಿಎಂಪಿಗೆ ಸಂಬಂಧಿಸಿದಂತೆ ದೂರಿಗೆ ಲೋಕಾಯುಕ್ತ ತನಿಖಾಧಿಕಾರಿಗಳು ರಾಜ್ಯ ಗುತ್ತಿಗೆದಾರರ ಸಂಘವನ್ನಾದರೂ ಸಂಪರ್ಕಿಸಬೇಕಿತ್ತು. ಹೀಗಾಗಿ ಲೋಕಾಯುಕ್ತ ತನಿಖಾಧಿಕಾರಿಗಳು ನೀಡಿರುವ ಸುಳ್ಳು ವರದಿ ಸಂಘ ಒಪ್ಪುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ದಾಖಲೆ ಸಲ್ಲಿಕೆ:
ಗುತ್ತಿಗೆದಾರರ ಸಂಘದ ಹಿಂದಿನ ರಾಜ್ಯಾಧ್ಯಕ್ಷ ಕೆಂಪಣ್ಣ ಅವರು ಹಿಂದಿನ ಬಿಜೆಪಿ ಸರ್ಕಾರ ಆಡಳಿತ ಅವಧಿಯಲ್ಲಿ 40 ಪರ್ಸೆಂಟ್ ಕಮಿಷನ್ ಕುರಿತಾಗಿ ಪ್ರಧಾನಿಗೆ ಪತ್ರ ಬರೆಯುವುದರ ಜತೆಗೆ ತದ ನಂತರ ಸಿದ್ಧರಾಮಯ್ಯ ಅವರಿಗೂ ದೂರು ಸಲ್ಲಿಸಿದ್ದರ ಹಿನ್ನೆಲೆಯಲ್ಲಿ ನ್ಯಾಯಮೂರ್ತಿ ನಾಗಮೋಹನದಾಸ್ ಸಮಿತಿ ರಚನೆ ಮಾಡಲಾಗಿದೆ. ಈಗ ಸಮಿತಿ ಎಲ್ಲ ಕಡೆಯಿಂದ ಮಾಹಿತಿ ಮತ್ತು ಅಭಿಪ್ರಾಯ ಸಂಗ್ರಹಿಸುತ್ತಿದೆ. ಹೀಗಾಗಿ ನ. 20ರಂದು ನ್ಯಾ. ಮೋಹನದಾಸ್ ಸಮಿತಿ  ರಾಜ್ಯ ಗುತ್ತಿಗೆದಾರ ಸಂಘಕ್ಕೆ ಆಹ್ವಾನ ನೀಡಿ ಮಾಹಿತಿ ಪ್ರಮುಖವಾಗಿ ದಾಖಲೆಗಳ ಸಲ್ಲಿಸುವಂತೆ ತಿಳಿಸಿದೆ. ಈ ಹಿನ್ನೆಲೆಯಲ್ಲಿ 40 ಪರ್ಸೆಂಟ್ ಕಮಿಷನ್‌ಗೆ ಸಂಬಂಧಿಸಿದಂತೆ ರಾಜ್ಯಾದಾದ್ಯಂತ ಸಂಗ್ರಹಿಸಲಾದ ಎಲ್ಲ ದಾಖಲೆಗಳ ಸಮಿತಿಗೆ ಸಲ್ಲಿಸಲಿದೆ ಎಂದು ಶೇಗಜಿ ತಿಳಿಸಿದರು.

ಕೆಂಪಣ್ಣ  ಮೃತಪಡುವ ಮುನ್ನ ದಿನಗಳಲ್ಲಿ ತಾವು 40 ಪರ್ಸೆಂಟ್ ಕಮಿಷನ್‌ಗೆ ಸಂಬಂಧಿತ ಹೋರಾಟ ಮುಂದುವರಿಯಲಿ, ಸೂಕ್ತ ದಾಖಲೆಗಳ ಸಮಿತಿಗೆ ಸಲ್ಲಿಸಿ ಎಂದು ಹೇಳಿದ್ದರು. ತದ ನಂತರ ತಾವು ಅಧ್ಯಕ್ಷರಾದ ಮೇಲೆ ಶೇ.40 ಪರ್ಸೆಂಟ್ ಕಮಿಷನ್‌ಗೆ ಸಂಬಂಧಿಸಿದಂತೆ ಎಲ್ಲ ದಾಖಲೆಗಳ ಸಂಗ್ರಹಿಸಲಾಗಿದ್ದು, ಈಗ ಬುಧವಾರ ಬೆಂಗಳೂರಿನಲ್ಲಿ ಸಮಿತಿಗೆ ಎಲ್ಲ ದಾಖಲಾತಿಗಳನ್ನು ಸಲ್ಲಿಸಲಾಗುವುದು. 40 ಪರ್ಸೆಂಟ್ ಕಮಿಷನ್ ಹೋರಾಟ ಒಂದು ತಾರ್ಕಿಕ ಅಂತ್ಯಗೊಳಿಸುವವರೆಗೂ ಸಂಘ ಹಿಂದೆ ಬೀಳುವುದಿಲ್ಲ ಎಂದು ಪ್ರಕಟಿಸಿದರು.

ಬಿಬಿಎಂಪಿಗೆ ಸಂಬಂಧಿಸಿದಂತೆ ಮಾತ್ರ ಲೋಕಾಯುಕ್ತ ತನಿಖಾಧಿಕಾರಿಗಳು ನೀಡಿರುವ ಕಮಿಷನ್ ಆರೋಪ ಸುಳ್ಳು ಎಂದಿರುವುದನ್ನೇ ವಿಪಕ್ಷದವರು ಗುತ್ತಿಗೆದಾರರ ಸಂಘದ ಹಿಂದಿನ ರಾಜ್ಯಾಧ್ಯಕ್ಷ ಕೆಂಪಣ್ಣ ಆರೋಪ ಸುಳ್ಳೆಂದು ಬಿಂಬಿಸುತ್ತಿರುವುದು ಸರಿಯಲ್ಲ. ಸಂಘದ ಆರೋಪಕ್ಕೆ ಸದಾ ಬದ್ದವಿದ್ದು, ತಮ್ಮ ಬಳಿ ಎಲ್ಲ ಆಡಿಯ-ವಿಡಿಯೋಗಳ ಜತೆಗೆ ದಾಖಲೆಗಳನ್ನು ನ್ಯಾ. ನಾಗಮೋಹನದಾಸ್ ಸಮಿತಿಗೆ ಸಂಘದ ಎಲ್ಲ ಪದಾಧಿಕಾರಿಗಳೊಂದಿಗೆ ಸಲ್ಲಿಸಲಾಗುವುದು ಎಂದು ಜಗನ್ನಾಥ ಶೇಗಜಿ ಪುನರುಚ್ಚರಿಸಿದರು.

ಕಾಂಗ್ರೆಸ್ ಸರ್ಕಾರದಲ್ಲೂ ಕಮಿಷನ್‌
ಪ್ರಸ್ತುತ ಕಾಂಗ್ರೆಸ್ ಸರ್ಕಾರದಲ್ಲೂ ಶೇ.10ರಿಂದ 15ರವರೆಗೆ ಕಮಿಷನ್‌  ಕೇಳಿ ಬರುತ್ತಿದೆ. ಕೆಕೆಆರ್‌ಡಿಬಿ ಕಾಮಗಾರಿಯಲ್ಲಿ ಪ್ರಮುಖವಾಗಿ ಕೇಳಿ ಬಂದಿದೆ. ಇದರಲ್ಲಿ ಎಲ್ಲ ಪಕ್ಷದ ಶಾಸಕರು ಸೇರಿದ್ದಾರೆ. ಇದರ ಕುರಿತಾಗಿಯೂ ದಾಖಲೆಗಳ ಸಂಗ್ರಹಿಸಲಾಗುತ್ತಿದೆ ಎಂದು ಶೇಗಜಿ ತಿಳಿಸಿದರು. ಸಂಘದ ಪದಾಧಿಕಾರಿಗಳಾದ ಮೋಹಸೀನ್ ಪಟೇಲ್, ಸಂಜಯ್ ಆರ್.ಕೆ, ಗುರುನಂಜಯ್ಯ, ಶಿವಾನಂದ ಪಾಟೀಲ್, ರಾಜಶೇಖರ ಬುದ್ದಿವಂತ ಸೇರಿದಂತೆ ಇತರ ಪದಾಧಿಕಾರಿಗಳು ಹಾಜರಿದ್ದರು.

ಟಾಪ್ ನ್ಯೂಸ್

Bengaluru: ಇವಿ ಬೈಕ್‌ ಶೋ ರೂಮ್‌ನಲ್ಲಿ ಬೆಂಕಿ: ಯುವತಿ ದಾರುಣ ಸಾ*ವು

Bengaluru: ಇವಿ ಬೈಕ್‌ ಶೋ ರೂಮ್‌ನಲ್ಲಿ ಬೆಂಕಿ: ಯುವತಿ ದಾರುಣ ಸಾ*ವು

Naxal leader Vikram Gowda Encounter: ಕುದುರೆಮುಖ: ಶೋಧ ಕಾರ್ಯ ಚುರುಕು

Naxal leader Vikram Gowda Encounter: ಕುದುರೆಮುಖ: ಶೋಧ ಕಾರ್ಯ ಚುರುಕು

Naxal: ಎನ್‌ಕೌಂಟರ್‌ಗೆ ಜಾಲತಾಣದಲ್ಲಿ ಮಾಜಿ ನಕ್ಸಲ್‌ ಪತ್ನಿ ಆಕ್ರೋಶ

Naxal: ಎನ್‌ಕೌಂಟರ್‌ಗೆ ಜಾಲತಾಣದಲ್ಲಿ ಮಾಜಿ ನಕ್ಸಲ್‌ ಪತ್ನಿ ಆಕ್ರೋಶ

Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ

Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ

Maharashtra ಸರಕಾರ ವಿರುದ್ಧ ಮಾನನಷ್ಟ ಕೇಸ್‌: ಸಚಿವ ಡಾ| ಜಿ. ಪರಮೇಶ್ವರ್‌

Maharashtra ಸರಕಾರ ವಿರುದ್ಧ ಮಾನನಷ್ಟ ಕೇಸ್‌: ಸಚಿವ ಡಾ| ಜಿ. ಪರಮೇಶ್ವರ್‌

CT Ravi: ಹುಚ್ಚು ನಾಯಿ ಕಡಿದವರಿಂದ ವಿಷ ಹೇಳಿಕೆ

CT Ravi: ಹುಚ್ಚು ನಾಯಿ ಕಡಿದವರಿಂದ ವಿಷ ಹೇಳಿಕೆ

Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್‌: ಆರ್‌. ಅಶೋಕ್‌ ಆರೋಪ

Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್‌: ಆರ್‌. ಅಶೋಕ್‌ ಆರೋಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಇವಿ ಬೈಕ್‌ ಶೋ ರೂಮ್‌ನಲ್ಲಿ ಬೆಂಕಿ: ಯುವತಿ ದಾರುಣ ಸಾ*ವು

Bengaluru: ಇವಿ ಬೈಕ್‌ ಶೋ ರೂಮ್‌ನಲ್ಲಿ ಬೆಂಕಿ: ಯುವತಿ ದಾರುಣ ಸಾ*ವು

CT Ravi: ಹುಚ್ಚು ನಾಯಿ ಕಡಿದವರಿಂದ ವಿಷ ಹೇಳಿಕೆ

CT Ravi: ಹುಚ್ಚು ನಾಯಿ ಕಡಿದವರಿಂದ ವಿಷ ಹೇಳಿಕೆ

Karnataka govt: ರಾಜ್ಯದ 3 ಕಡೆ ಜಿಸಿಸಿ ಪಾರ್ಕ್‌ ಸ್ಥಾಪನೆ: ಸಿಎಂ ಸಿದ್ದರಾಮಯ್ಯKarnataka govt: ರಾಜ್ಯದ 3 ಕಡೆ ಜಿಸಿಸಿ ಪಾರ್ಕ್‌ ಸ್ಥಾಪನೆ: ಸಿಎಂ ಸಿದ್ದರಾಮಯ್ಯ

Karnataka govt: ರಾಜ್ಯದ 3 ಕಡೆ ಜಿಸಿಸಿ ಪಾರ್ಕ್‌ ಸ್ಥಾಪನೆ: ಸಿಎಂ ಸಿದ್ದರಾಮಯ್ಯ

MPR

Davanagere: ಶಾಸಕರ ಖರೀದಿ ಆರೋಪ; ತನಿಖೆಗೆ ಎಸ್‌ಐಟಿ ರಚಿಸಿ: ಎಂ.ಪಿ.ರೇಣುಕಾಚಾರ್ಯ

Naxal: ನಕ್ಸಲರ ನೆತ್ತರ ಹೆಜ್ಜೆ..: ರಾಜ್ಯದಲ್ಲಿ ನಕ್ಸಲ್‌ ಅಟ್ಟಹಾಸದ ಕರಾಳ ಇತಿಹಾಸ ಇಲ್ಲಿದೆ

Naxal: ನಕ್ಸಲರ ನೆತ್ತರ ಹೆಜ್ಜೆ..: ರಾಜ್ಯದಲ್ಲಿ ನಕ್ಸಲ್‌ ಅಟ್ಟಹಾಸದ ಕರಾಳ ಇತಿಹಾಸ ಇಲ್ಲಿದೆ

MUST WATCH

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

ಹೊಸ ಸೇರ್ಪಡೆ

police

Puttur: ಕಾಸರಗೋಡು ಮೂಲದ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ; ಪೋಕ್ಸೊ ಕೇಸು

Bengaluru: ಇವಿ ಬೈಕ್‌ ಶೋ ರೂಮ್‌ನಲ್ಲಿ ಬೆಂಕಿ: ಯುವತಿ ದಾರುಣ ಸಾ*ವು

Bengaluru: ಇವಿ ಬೈಕ್‌ ಶೋ ರೂಮ್‌ನಲ್ಲಿ ಬೆಂಕಿ: ಯುವತಿ ದಾರುಣ ಸಾ*ವು

police

Siddapura: ಕಂಟೇನರ್‌ ಲಾರಿ ಒಳರಸ್ತೆಗೆ ಬರದಿದ್ದಕ್ಕೆ ಚಾಲಕನಿಗೆ ಹಲ್ಲೆ

Naxal leader Vikram Gowda Encounter: ಕುದುರೆಮುಖ: ಶೋಧ ಕಾರ್ಯ ಚುರುಕು

Naxal leader Vikram Gowda Encounter: ಕುದುರೆಮುಖ: ಶೋಧ ಕಾರ್ಯ ಚುರುಕು

Naxal: ಎನ್‌ಕೌಂಟರ್‌ಗೆ ಜಾಲತಾಣದಲ್ಲಿ ಮಾಜಿ ನಕ್ಸಲ್‌ ಪತ್ನಿ ಆಕ್ರೋಶ

Naxal: ಎನ್‌ಕೌಂಟರ್‌ಗೆ ಜಾಲತಾಣದಲ್ಲಿ ಮಾಜಿ ನಕ್ಸಲ್‌ ಪತ್ನಿ ಆಕ್ರೋಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.