TTD Resolution: ಇನ್ನು ಹಿಂದೂಯೇತರರಿಂದ ತಿರುಮಲ ತಿರುಪತಿ ದೇವಸ್ಥಾನ ಮುಕ್ತ!

ದೇಗುಲದ ಅನ್ಯಧರ್ಮ ಸಿಬಂದಿಗೆ ವಿಆರ್‌ಎಸ್‌ ಸಲಹೆ, ಟಿಟಿಡಿ ನೂತನ ಆಡಳಿತ ಮಂಡಳಿಯ ಮೊದಲ ಸಭೆಯಲ್ಲಿ ಹಲವು ಮಹತ್ವದ ನಿರ್ಣಯ

Team Udayavani, Nov 20, 2024, 7:55 AM IST

Tirupathi

ತಿರುಪತಿ: ನೂತನವಾಗಿ ರಚನೆಯಾಗಿರುವ ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಬೋರ್ಡ್ ಈಗ ಸಂಪೂರ್ಣ “ಹಿಂದೂಮಯ’ ಆಗುವತ್ತ ಹೆಜ್ಜೆಯಿಟ್ಟಿದೆ.  ಟಿಟಿಡಿ ನೂತನ ಮುಖ್ಯಸ್ಥ ಬಿ.ಆರ್‌. ನಾಯ್ಡು ನೇತೃತ್ವದಲ್ಲಿ ನಡೆದ ಟ್ರಸ್ಟ್‌ನ ಮೊದಲ ಸಭೆಯಲ್ಲಿ ಹಲವು ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ.

ಅದರಂತೆ ಟಿಟಿಡಿಯ ಹಿಂದೂಯೇತರ ಉದ್ಯೋಗಿಗಳು ಸ್ವಯಂ ನಿವೃತ್ತಿ (ವಿಆರ್‌ಎಸ್‌) ತೆಗೆದುಕೊಳ್ಳಬೇಕು. ಇಲ್ಲದಿದ್ದರೆ ಆಂಧ್ರಪ್ರದೇಶ ಸರಕಾರದ ಇತರ ಇಲಾಖೆಗಳಿಗೆ ವರ್ಗಾವಣೆ ಆಗಬೇಕು ಎಂದು ಸೂಚಿಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ. ಅಷ್ಟೇ ಅಲ್ಲದೆ ದೇಗುಲದ ಆವರಣದಲ್ಲಿ ಹಿಂದೂ ವ್ಯಾಪಾರಿಗಳಿಗೆ ಮಾತ್ರ ಅಂಗಡಿಗಳನ್ನು ಇಡಲು ಅವಕಾಶ ಕಲ್ಪಿಸಲಾಗುವುದು. ಅಲ್ಲೂ ಇತರ ಧರ್ಮೀಯರಿಗೆ ಅವಕಾಶ ಇಲ್ಲ ಎಂಬ ತೀರ್ಮಾನಕ್ಕೆ ಬರಲಾಗಿದೆ.

ಈ ವರ್ಷದ ಜೂನ್‌ನಲ್ಲಿ ಆಂಧ್ರಪ್ರದೇಶದಲ್ಲಿ ಟಿಡಿಪಿ-ಜನಸೇನಾ-ಬಿಜೆಪಿ ಮೈತ್ರಿಕೂಟದ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಟಿಟಿಡಿ ಆಡಳಿತ ಮಂಡಳಿಯನ್ನು ಪುನಾರಚಿಸಲಾಗಿತ್ತು. ಅನಂತರ ನಡೆದ ಮಂಡಳಿಯ ಮೊದಲ ಸಭೆಯಲ್ಲಿ ಟಿಟಿಡಿಯಲ್ಲಿ ಹಿಂದೂ ಉದ್ಯೋಗಿಗಳು ಮಾತ್ರ ಇರಬೇಕು ಎಂಬ ತೀರ್ಮಾನ ಕೈಗೊಳ್ಳಲಾಗಿದೆ. ಒಟ್ಟು 7 ಸಾವಿರ ಮಂದಿ ಉದ್ಯೋಗಿಗಳು ಟಿಟಿಡಿಯಲ್ಲಿದ್ದು, ಈ ಪೈಕಿ 300 ಮಂದಿ ಹಿಂದೂಯೇತರರು ಇದ್ದಾರೆ ಎನ್ನಲಾಗಿದೆ.

ಉದ್ಯೋಗಿಗಳ ವಿವಿಧ ಸಂಘಟನೆಗಳ ಜತೆಗೆ ಮಾತುಕತೆ ನಡೆಸಿ ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿದೆ. ಜತೆಗೆ ಆಂಧ್ರಪ್ರದೇಶ ಧಾರ್ಮಿಕ ದತ್ತಿ ಮತ್ತು ತಿರುಪತಿ ತಿರುಮಲ ಕಾಯ್ದೆಯ ಅನ್ವಯ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಉದ್ಯೋಗಿಗಳ ಸಂಘದ ಪ್ರತಿನಿಧಿಯೊಬ್ಬರು ತಿಳಿಸಿದ್ದಾರೆ. ಹಿಂದೂ ಧಾರ್ಮಿಕ ಕೇಂದ್ರದಲ್ಲಿ ಅದಕ್ಕೆ ಸಂಬಂಧಪಟ್ಟವರೇ ಸಿಬಂದಿಯಾಗಿ ಇರಬೇಕು ಎಂಬ ಹಿನ್ನೆಲೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಇದೇ ವಿಷಯಕ್ಕೆ ಸಂಬಂಧಿಸಿದಂತೆ ತಿರುಪತಿ ತಿರುಮಲ ದೇವಸ್ಥಾನ ಕಾಯ್ದೆಗೆ 3 ಬಾರಿ ತಿದ್ದುಪಡಿ ತರಲಾಗಿತ್ತು.

ಮಾಧ್ಯಮ ಪ್ರತಿನಿಧಿಗಳಿಗೆ ಸಭೆಯ ವಿವರಗಳ ನೀಡಿದ ಟಿಟಿಡಿ ಟ್ರಸ್ಟ್ ಬೋರ್ಡ್ ಅಧ್ಯಕ್ಷ ಬಿ.ಆರ್. ನಾಯ್ಡು, ಟಿಟಿಡಿಯೊಂದಿಗೆ ಕೆಲಸ ಮಾಡುವ ಇತರ ಧರ್ಮದ ನೌಕರರೊಂದಿಗೆ ಸಮಾಲೋಚನೆ ನಡೆಸಲು ಮಂಡಳಿಯು ನಿರ್ಧಾರ ತೆಗೆದುಕೊಂಡಿದೆ. ಸ್ವಯಂ ನಿವೃತ್ತಿ ಪಡೆಯುವ ಅಥವಾ ಬೇರೆ ಯಾವುದೇ ಸರ್ಕಾರಿ ಇಲಾಖೆಗೆ ಸೇರುವ ಆಯ್ಕೆಯನ್ನು ಅವರಿಗೆ ನೀಡಲಾಗುವುದು ಎಂದು ತಿಳಿಸಿದರು.

ರಾಜ್ಯ ಸರಕಾರಕ್ಕೆ ಪತ್ರ
ತಿರುಮಲದಲ್ಲಿ ಕೆಲಸ ಮಾಡುತ್ತಿರುವ ಹಿಂದೂಯೇತರರ ಬಗ್ಗೆ ಸೂಕ್ತ ನಿರ್ಧಾರ ತೆಗೆದುಕೊಳ್ಳುವಂತೆ ರಾಜ್ಯ ಸರಕಾರಕ್ಕೆ ಪತ್ರ ಬರೆಯುತ್ತೇವೆ. ಟಿಟಿಡಿ ಹಿಂದೂ ಧಾರ್ಮಿಕ ಸಂಸ್ಥೆಯಾಗಿದ್ದು, ದೇವಸ್ಥಾನದಲ್ಲಿ ಕೆಲಸ ಮಾಡಲು ಹಿಂದೂಯೇತರರ  ನೇಮಿಸಿಕೊಳ್ಳಬಾರದು ಎಂದು ಮಂಡಳಿ ಅಭಿಪ್ರಾಯಪಟ್ಟಿದೆ. ಅವರನ್ನು ಬೇರೆ ಬೇರೆ ಇಲಾಖೆಗಳಲ್ಲಿ ಸೇರಿಸಿಕೊಳ್ಳಲು ಅಥವಾ ಅವರಿಗೆ ಸ್ವಯಂ ನಿವೃತ್ತಿ ಯೋಜನೆ ನೀಡಲು ನಾವು ಸರ್ಕಾರಕ್ಕೆ ಪತ್ರ ಬರೆಯುತ್ತೇವೆ ಎಂದು ಬಿ.ಆರ್ ನಾಯ್ದು ಹೇಳಿದ್ದಾರೆ.

ಟಿಟಿಡಿಯಿಂದ ಭೂಮಿಯನ್ನು ಗುತ್ತಿಗೆಗೆ ಪಡೆದಿರುವ ವಿಶಾಖ ಶಾರದಾ ಪೀಠವು ಹಲವಾರು ಉಲ್ಲಂಘನೆಗಳ ಮಾಡಿದೆ ಎಂದು ಪ್ರತಿಪಾದಿಸಿದ ಅವರು, ಜಮೀನು ಗುತ್ತಿಗೆ ರದ್ದುಗೊಳಿಸಲಾಗುವುದು ಮತ್ತು ಭೂಮಿಯಲ್ಲಿ ನಿರ್ಮಿಸಲಾದ ಕಟ್ಟಡ ನೆಲಸಮಗೊಳಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.


ಟಿಟಿಡಿ ಮಂಡಳಿ ನಿರ್ಣಯಗಳು

– ದೇಗುಲದ ಆವರಣದಲ್ಲಿ ಹಿಂದೂಯೇತರರ ಮಳಿಗೆಗಳಿಗೆ ನಿಷೇಧ

– ದರ್ಶನದ ಕಾಯುವಿಕೆ ಅವಧಿ ಇಳಿಸಲು ತಜ್ಞರ ಸಮಿತಿ ರಚನೆ

– ಖಾಸಗಿ ಬ್ಯಾಂಕ್‌ಗಳಲ್ಲಿರುವ ದೇಗುಲದ ಠೇವಣಿ ರಾಷ್ಟ್ರೀಕೃತ ಬ್ಯಾಂಕ್‌ಗಳಿಗೆ ವರ್ಗ

– ದೇಗುಲಕ್ಕೆ ಭೇಟಿ ನೀಡುವ ರಾಜಕೀಯ ನಾಯಕರು ಅಲ್ಲಿ ರಾಜಕೀಯ ಹೇಳಿಕೆ ನೀಡುವುದಕ್ಕೆ ನಿಷೇಧ

– ಈ ನಿಯಮ ಉಲ್ಲಂಘಿಸಿದವರ ವಿರುದ್ಧ ಕಾನೂನಿನ ಅನ್ವಯ ಕ್ರಮಕ್ಕೆ ಟಿಟಿಡಿ ತೀರ್ಮಾನ

– ಪವಿತ್ರ ಲಡ್ಡು ತಯಾರಿಕೆಗೆ ಉತ್ತಮ ಗುಣಮಟ್ಟದ ತುಪ್ಪ ಖರೀದಿಗೆ ಹೊಸ ಟೆಂಡರ್‌ ಕರೆಯಲು ತೀರ್ಮಾನ

ಟಾಪ್ ನ್ಯೂಸ್

1-bagalkote

Bagalkote: ಹೇರ್ ಡ್ರೈಯರ್ ಸ್ಪೋಟಗೊಂಡು ಮಹಿಳೆಯ ಎರಡು ಕೈ ತುಂಡು

Bengaluru Tech Summit: ರೋಗಿ ಕಣ್ಣು ಮಿಟುಕಿಸಿದರೆ ಮೊಬೈಲ್‌ಗೆ ಮೆಸೇಜ್‌!

Bengaluru Tech Summit: ರೋಗಿ ಕಣ್ಣು ಮಿಟುಕಿಸಿದರೆ ಮೊಬೈಲ್‌ಗೆ ಮೆಸೇಜ್‌!

Bengaluru Tech Summit: ನಾಯಿ, ಬೆಕ್ಕುಗಳಿಗೂ ಬಂತು ಕೃತಕ ಬುದ್ಧಿಮತ್ತೆ ಚಾಟ್‌ಬಾಟ್‌ 

Bengaluru Tech Summit: ನಾಯಿ, ಬೆಕ್ಕುಗಳಿಗೂ ಬಂತು ಕೃತಕ ಬುದ್ಧಿಮತ್ತೆ ಚಾಟ್‌ಬಾಟ್‌ 

1-supri

Crypto funds ಡೀಲ್ ಆಡಿಯೋ ಆರೋಪ: ನನ್ನ ಧ್ವನಿಯಲ್ಲ ಎಂದು ಕಿಡಿಯಾದ ಸುಪ್ರಿಯಾ ಸುಳೆ

1-leo

Football;ಕೇರಳದಲ್ಲಿ ಅಂತಾರಾಷ್ಟ್ರೀಯ ಪಂದ್ಯ ಆಡಲಿರುವ ದಿಗ್ಗಜ ಲಿಯೋನೆಲ್ ಮೆಸ್ಸಿ

delhi air

Delhi ಮಿತಿ ಮೀರಿದ ವಾಯು ಮಾಲಿನ್ಯ: ಸರಕಾರಿ ಕಚೇರಿಗಳ 50% ಸಿಬಂದಿಗಳಿಗೆ ಮನೆಯಿಂದಲೇ ಕೆಲಸ

1-wqewqe

BBK11: ದೊಡ್ಮನೆಯಲ್ಲಿ ಸೆಡೆ ಜಗಳ.. ಬಿಗ್ ಬಾಸ್ ನಿಂದ ಅಚೆ ಬರಲು ರೆಡಿಯಾದ ಸುರೇಶ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-supri

Crypto funds ಡೀಲ್ ಆಡಿಯೋ ಆರೋಪ: ನನ್ನ ಧ್ವನಿಯಲ್ಲ ಎಂದು ಕಿಡಿಯಾದ ಸುಪ್ರಿಯಾ ಸುಳೆ

delhi air

Delhi ಮಿತಿ ಮೀರಿದ ವಾಯು ಮಾಲಿನ್ಯ: ಸರಕಾರಿ ಕಚೇರಿಗಳ 50% ಸಿಬಂದಿಗಳಿಗೆ ಮನೆಯಿಂದಲೇ ಕೆಲಸ

Himachal-Bhavan

Order: ಬಾಕಿ ಹಣ ಕೊಡದ್ದಕ್ಕೆ ದಿಲ್ಲಿಯ ಹಿಮಾಚಲ ಭವನ ಹರಾಜು: ʼಕೈʼ ಸರಕಾರಕ್ಕೆ ಹಿನ್ನಡೆ

TTD: Using artificial intelligence to reduce waiting time for Tirupati darshan?

TTD: ತಿರುಪತಿ ದರ್ಶನ ಕಾಯುವಿಕೆ ಅವಧಿ ಇಳಿಕೆಗೆ ಕೃತಕ ಬುದ್ಧಿಮತ್ತೆ ಬಳಕೆ?

Air India pilot who didn’t fly because his work hours were over!

Pilot: ಕೆಲಸದ ಟೈಂ ಮುಗೀತು ಎಂದು ವಿಮಾನ ಹಾರಿಸದ ಏರ್‌ ಇಂಡಿಯಾ ಪೈಲಟ್‌!

MUST WATCH

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

ಹೊಸ ಸೇರ್ಪಡೆ

1-bagalkote

Bagalkote: ಹೇರ್ ಡ್ರೈಯರ್ ಸ್ಪೋಟಗೊಂಡು ಮಹಿಳೆಯ ಎರಡು ಕೈ ತುಂಡು

15

UV Fusion: ಬಣ್ಣದ ಛತ್ರಿ; ಇಲ್ಲೊಂದು ಕಥೆ

14

UV Fusion: ವಯೋಮಾನದ ಕಾಲಘಟ್ಟಕ್ಕೆ ಬದುಕಿನನುಭವದ ಸಾರ

13

UV Fusion: ಹಿರಿಜೀವಗಳ ಕಾಳಜಿ ವಹಿಸಿ

12

UV Fusion: ಇಂಗ್ಲೆಂಡ್‌ ಟು ಕೋಲ್ಕತಾ ಬಸ್‌ ಒಂದು ನೆನಪು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.