Election: ಮಹಾರಾಷ್ಟ್ರ, ಜಾರ್ಖಂಡ್‌ ಅಸೆಂಬ್ಲಿಗೆ ಇಂದು ಚುನಾವಣೆ


Team Udayavani, Nov 20, 2024, 6:58 AM IST

Maharashtra, Jharkhand assembly election today

ಮುಂಬೈ/ರಾಂಚಿ: ಮಹಾರಾಷ್ಟ್ರ ಮತ್ತು ಜಾರ್ಖಂಡ್‌ ವಿಧಾನಸಭೆಗೆ ಬುಧವಾರ ಮತದಾನ ನಡೆಯಲಿದ್ದು, 288 ಕ್ಷೇತ್ರಗಳ ಮಹಾರಾಷ್ಟ್ರದಲ್ಲಿ 4136 ಹಾಗೂ 2ನೇ ಹಂತದಲ್ಲಿ ಚುನಾವಣೆ ನಡೆಯುತ್ತಿರುವ ಜಾರ್ಖಂಡ್‌ನ‌ 38 ಕ್ಷೇತ್ರಗಳಲ್ಲಿ 526 ಮಂದಿ ತಮ್ಮ ಅದೃಷ್ಟವನ್ನು ಪಣಕ್ಕೊಡ್ಡಿದ್ದಾರೆ.

ಮಹಾರಾಷ್ಟ್ರದಲ್ಲಿ ಅಧಿಕಾರದಲ್ಲಿರುವ ಮಹಾ ಯುತಿ ಮೈತ್ರಿಕೂಟ ಅಧಿಕಾರ ಉಳಿಸಿಕೊಳ್ಳಲು ಯೋಜನೆ ರೂಪಿಸಿದ್ದರೆ, ಮಹಾಘಟಬಂಧನ್‌ ಕೂಟ ಅಧಿಕಾರಕ್ಕೇರಲು ತಂತ್ರ ರೂಪಿಸಿದೆ. ಕಳೆದ ಚುನಾವಣೆಗೆ ಹೋಲಿಸಿದರೆ ರಾಜ್ಯದಲ್ಲಿ ಸ್ಪರ್ಧಿಗಳ ಸಂಖ್ಯೆಯಲ್ಲಿ ಶೇ.28ರಷ್ಟು ಏರಿಕೆಯಾಗಿದ್ದು, ಮತದಾರ ಯಾರ ಕೈಹಿಡಿಯಲಿದ್ದಾನೆ ಎಂಬ ಕುತೂಹಲ ಮೂಡಿದೆ.

ಮಹಾರಾಷ್ಟ್ರದಲ್ಲಿ ಬರೋಬ್ಬರಿ 2086 ಮಂದಿ ಪಕ್ಷೇ ತರರು ಕಣದಲ್ಲಿದ್ದು, ಇವರು ಚುನಾವಣೆಯ ಫ‌ಲಿ ತಾಂಶವನ್ನು ಬುಡಮೇಲು ಮಾಡುವ ತಾಕತ್ತು ಹೊಂದಿ ದ್ದಾರೆ ಎಂಬ ವಿಶ್ಲೇಷಣೆಗಳು ಕೇಳಿಬಂದಿವೆ. 9.7 ಕೋಟಿ ಮಂದಿ ತಮ್ಮ ಹಕ್ಕು ಚಲಾವಣೆ ಮಾಡಲಿದ್ದು, 1 ಲಕ್ಷಕ್ಕೂ ಅಧಿಕ ಮತಗಟ್ಟೆಗಳನ್ನು ಸ್ಥಾಪನೆ ಮಾಡಲಾಗಿದೆ.

ಜಾರ್ಖಂಡಲ್ಲಿ 2ನೇ ಹಂತದ ಮತದಾನ: ಜಾರ್ಖಂಡ್‌ ವಿಧಾನಸಭೆಯ 38 ಸ್ಥಾನಗಳಿಗೆ ಬುಧವಾರ ಮತದಾನ ನಡೆಯಲಿದೆ. ರಾಜ್ಯದಲ್ಲಿ ಒಟ್ಟು 14,218 ಮತಗಟ್ಟೆಗಳನ್ನು ಸ್ಥಾಪನೆ ಮಾಡಲಾಗಿದ್ದು, 1.23 ಕೋಟಿ ಮಂದಿ ಮತ ಚಲಾಯಿಸಲಿದ್ದಾರೆ. ಒಟ್ಟಾರೆ 528 ಮಂದಿ ಕಣದಲ್ಲಿದ್ದು, ಇದರಲ್ಲಿ 472 ಮಂದಿ ಪುರುಷರು ಹಾಗೂ 55 ಮಂದಿ ಮಹಿಳೆಯರಾಗಿದ್ದಾರೆ.

ಜಾರ್ಖಂಡ್‌ನ‌ಲ್ಲಿ ಅಧಿಕಾರ ಉಳಿಸಿಕೊಳ್ಳಲು ಇಂಡಿಯಾ ಮೈತ್ರಿಕೂಟದ ಕಾಂಗ್ರೆಸ್‌ ಜೆಎಂಎಂಗಳು ಸಕಲ ಸಿದ್ಧತೆ ನಡೆಸಿವೆ. ರಾಜ್ಯದಲ್ಲಿ ಭ್ರಷ್ಟಾಚಾರ ಹೆಚ್ಚಾಗುತ್ತಿದೆ ಎಂಬ ಆರೋಪ ಮಾಡುತ್ತಿರುವ ಬಿಜೆಪಿ ಬುಡಕಟ್ಟು ರಾಜ್ಯದಲ್ಲಿ ಮತ ಸೆಳೆಯಲು ಮುಂದಾಗಿದೆ.

4 ರಾಜ್ಯಗಳ 15 ಕ್ಷೇತ್ರಗಳಿಗೆ ಇಂದು ಉಪಚುನಾವಣೆ

ಮಹಾರಾಷ್ಟ್ರ, ಜಾರ್ಖಂಡ್‌ ವಿಧಾನಸಭೆ ಚುನಾವಣೆಯ ಜೊತೆಗೆ ಉತ್ತರ ಪ್ರದೇಶ, ಪಂಜಾಬ್‌, ಕೇರಳ ಮತ್ತು ಉತ್ತರಾಖಂಡ ರಾಜ್ಯಗಳ 15 ವಿಧಾನಸಭಾ ಕ್ಷೇತ್ರಗಳಿಗೂ ಬುಧ ವಾರ ಉಪಚುನಾವಣೆ ನಡೆಯಲಿದೆ. ಉತ್ತರ ಪ್ರದೇಶದ 9, ಪಂಜಾಬ್‌ನ 4 ಮತ್ತು ಕೇರಳದ 1 ಸ್ಥಾನಕ್ಕೆ ಉಪಚುನಾವಣೆ ನಡೆಯ ಲಿದೆ. ಎಲ್ಲಾ ವಿಧಾನಸಭೆ ಉಪಚುನಾವಣೆಗಳ ಫ‌ಲಿತಾಂಶ ನ.23ರಂದು ಪ್ರಕಟವಾಗಲಿದೆ.

ಟಾಪ್ ನ್ಯೂಸ್

1-wqewqe

BBK11: ದೊಡ್ಮನೆಯಲ್ಲಿ ಸೆಡೆ ಜಗಳ.. ಬಿಗ್ ಬಾಸ್ ನಿಂದ ಅಚೆ ಬರಲು ರೆಡಿಯಾದ ಸುರೇಶ್

1-wewqewq

Raichur; ರಾತೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು

1-shaa

Success ನಿಮ್ಮನ್ನು ಪ್ರತ್ಯೇಕಿಸಲು ಮತ್ತು ವೈಫಲ್ಯಕ್ಕೆ ಕಾರಣವಾಗಬಹುದು: ಶಾರುಖ್ ಖಾನ್

Arecanut

Hike Price: ಮಾರುಕಟ್ಟೆಯಲ್ಲಿ ಡಬ್ಬಲ್‌ ಚೋಲ್‌ ಚಾಲಿ ಅಡಿಕೆ ಧಾರಣೆ ಏರಿಕೆ

ANF-Coombing

History: ನಕ್ಸಲ್‌ ಚಳವಳಿಯ ರಕ್ತಸಿಕ್ತ ಇತಿಹಾಸ; ಸಾವಿನೊಂದಿಗೆ ಪೊಲೀಸ್‌-ನಕ್ಸಲ್‌ ಮುಖಾಮುಖಿ

Tirupathi

TTD Resolution: ಇನ್ನು ಹಿಂದೂಯೇತರರಿಂದ ತಿರುಮಲ ತಿರುಪತಿ ದೇವಸ್ಥಾನ ಮುಕ್ತ!

Naxal-Postmartam

Naxal Vikram Gowda: ಮೂರು ಬಾರಿ ತಪ್ಪಿಸಿಕೊಂಡವ ಹುಟ್ಟೂರಲ್ಲೇ ಪ್ರಾಣ ತೆತ್ತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tirupathi

TTD Resolution: ಇನ್ನು ಹಿಂದೂಯೇತರರಿಂದ ತಿರುಮಲ ತಿರುಪತಿ ದೇವಸ್ಥಾನ ಮುಕ್ತ!

Himachal-Bhavan

Order: ಬಾಕಿ ಹಣ ಕೊಡದ್ದಕ್ಕೆ ದಿಲ್ಲಿಯ ಹಿಮಾಚಲ ಭವನ ಹರಾಜು: ʼಕೈʼ ಸರಕಾರಕ್ಕೆ ಹಿನ್ನಡೆ

TTD: Using artificial intelligence to reduce waiting time for Tirupati darshan?

TTD: ತಿರುಪತಿ ದರ್ಶನ ಕಾಯುವಿಕೆ ಅವಧಿ ಇಳಿಕೆಗೆ ಕೃತಕ ಬುದ್ಧಿಮತ್ತೆ ಬಳಕೆ?

Air India pilot who didn’t fly because his work hours were over!

Pilot: ಕೆಲಸದ ಟೈಂ ಮುಗೀತು ಎಂದು ವಿಮಾನ ಹಾರಿಸದ ಏರ್‌ ಇಂಡಿಯಾ ಪೈಲಟ್‌!

A tiger named “Johnny” travelled 300 km in search of a mate!

Nanded: ಸಂಗಾತಿಯ ಅರಸುತ್ತಾ 300 ಕಿ.ಮೀ. ಸಂಚರಿಸಿದ “ಜಾನಿ’ ಎಂಬ ಹುಲಿ!

MUST WATCH

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

ಹೊಸ ಸೇರ್ಪಡೆ

8

Thirthahalli: ಪಾದರಕ್ಷೆ, ಮೊಬೈಲ್ ನದಿ ದಡದಲ್ಲಿಟ್ಟು ವ್ಯಕ್ತಿ ನಾಪತ್ತೆ ಪ್ರಕರಣ; ಶವ ಪತ್ತೆ

1-mag-1

Vertex Workspace ಸಂಸ್ಥೆಗೆ ಬೆಸ್ಟ್ ಇನ್ನೋವೇಟಿವ್ ಎಂಟರ್‌ಪೈಸ್ ಅವಾರ್ಡ್

de

Kulgeri: ಟ್ರ್ಯಾಕ್ಟರ್ ಹಿಂಬದಿಗೆ ಬೈಕ್ ಡಿಕ್ಕಿ; ಸವಾರ ಮೃತ್ಯು

1-wqewqe

BBK11: ದೊಡ್ಮನೆಯಲ್ಲಿ ಸೆಡೆ ಜಗಳ.. ಬಿಗ್ ಬಾಸ್ ನಿಂದ ಅಚೆ ಬರಲು ರೆಡಿಯಾದ ಸುರೇಶ್

7

Udupi: ನಮ್ಮ ಶೌಚಾಲಯ ನಮ್ಮ ಗೌರವ ತಿಂಗಳ ಆಂದೋಲನಕ್ಕೆ ಚಾಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.