Udupi: 10 ತಿಂಗಳಲ್ಲಿ 228 ಕಳವು ಕೇಸ್‌!

ಕಳೆದ ವರ್ಷಕ್ಕಿಂತ ಡಬ್ಬಲ್;‌ ವಿಶೇಷ ತಂಡ ರಚಿಸಿದರೂ ಕಳ್ಳರ ಪತ್ತೆಯಾಗುತ್ತಿಲ್ಲ!

Team Udayavani, Nov 20, 2024, 9:29 AM IST

13

ಉಡುಪಿ: ಜಿಲ್ಲೆಯಲ್ಲಿ ಪ್ರಸ್ತುತ ಸಾಲಿ ನಲ್ಲಿ ಅತ್ಯಧಿಕ ಕಳ್ಳತನ ಪ್ರಕರಣಗಳು ವರದಿಯಾಗಿದ್ದು, ಬೆರಳೆಣಿಕೆ ಪ್ರಕರಣಗಳನ್ನಷ್ಟೇ ಪೊಲೀಸರು ಪತ್ತೆ ಹಚ್ಚಿದ್ದಾರೆ. ಕಳೆದ ಎರಡು ವರ್ಷಕ್ಕೆ ಹೋಲಿಸಿದರೆ ಈ ವರ್ಷ ಕಳವು ಪ್ರಕರಣಗಳ ಸಂಖ್ಯೆ ವಿಪರೀತವಾಗಿದೆ. ಕೇವಲ 10 ತಿಂಗಳಲ್ಲೇ 228 ಪ್ರಕರಣಗಳು ದಾಖಲಾಗಿವೆ. ದುರಂತವೆಂದರೆ ಇವುಗಳಲ್ಲಿ ಹೆಚ್ಚಿನ ಪ್ರಕರಣಗಳು ಇನ್ನೂ ಪತ್ತೆಯಾಗಿಲ್ಲ!

ನಗರ ಠಾಣಾ ವ್ಯಾಪ್ತಿಯ ಅನತಿ ದೂರದಲ್ಲಿ ಕಂದಾಯ ಇಲಾಖೆಯ ಸಿ ದರ್ಜೆ ನೌಕರರ ವಸತಿ ಸಮುಚ್ಚಯದ ಆರು ಮನೆಗಳಲ್ಲಿ ಸೆ.29ರ ತಡರಾತ್ರಿ ಸರಣಿ ಕಳ್ಳತನ ನಡೆದಿತ್ತು. ಒಂದು ಮನೆಯಲ್ಲಿ ಸುಮಾರು 120 ಗ್ರಾಂ ಚಿನ್ನ, 20 ಸಾವಿರ ರೂ. ನಗದು, ಮತ್ತೂಂದು ಮನೆಯಲ್ಲಿ 20 ಸಾವಿರ ರೂ. ನಗದನ್ನು ಕಳ್ಳರು ದೋಚಿ ಪರಾರಿಯಾಗಿದ್ದರು. ಘಟನೆ ನಡೆದು 2 ತಿಂಗಳಾಗುತ್ತಿದ್ದರೂ ಪೊಲೀಸರಿಗೆ ಕಳ್ಳರ ಬಗ್ಗೆ ಒಂದೇ ಒಂದು ಕುರುಹು ಕೂಡ ಲಭ್ಯವಾಗಿಲ್ಲ. ಸಿಸಿಟಿವಿಯಲ್ಲಿಯೂ ಈ ಬಗ್ಗೆ ಯಾವುದೇ ಮಾಹಿತಿ ಪೊಲೀಸರಿಗೆ ಲಭಿಸಿಲ್ಲ ಎನ್ನಲಾಗಿದೆ.

ಮುಸುಕುಧಾರಿಗಳಿಂದ ಕಳವು
ಸಂತೆಕಟ್ಟೆಯಲ್ಲಿ ಮನೆಯೊಂದಕ್ಕೆ ನುಗ್ಗಿದ ಚಡ್ಡಿ ಗ್ಯಾಂಗ್‌ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣಗಳನ್ನು ದೋಚಿ ಪರಾರಿಯಾಗಿದ್ದರು. ಪೊಲೀಸರಿಗೆ ಈ ಪ್ರಕರಣವನ್ನೂ ಪತ್ತೆಹಚ್ಚಲು ಸಾಧ್ಯವಾಗಿಲ್ಲ. ಜು.31 ರಂದು ಬ್ರಹ್ಮಗಿರಿಯ ವಸತಿ ಸಮುಚ್ಚಯಗಳಿಗೆ ನಾಲ್ವರು ಮುಸುಕುಧಾರಿಗಳ ತಂಡವು ನುಗ್ಗಿ ಕಳ್ಳತನಕ್ಕೆ ವಿಫ‌ಲ ಯತ್ನ ನಡೆಸಿತ್ತು. ಫ್ಲ್ಯಾಟ್ ನ ಸಿಸಿಟಿವಿ ದೃಶ್ಯಾವಳಿಗಳಿಂದ ಕೃತ್ಯವು ಬೆಳಕಿಗೆ ಬಂದಿದ್ದರೂ ಕಳ್ಳರು ಪತ್ತೆಯಾಗಿಲ್ಲ.

ಸಾಮಾನ್ಯ ಕಳ್ಳತನ ಅಧಿಕ
ಜಿಲ್ಲೆಯಲ್ಲಿ ಈ ವರ್ಷದ ನವೆಂಬರ್‌ ಮೊದಲ ವಾರದವರೆಗೆ ಒಟ್ಟು 228 ಕಳವು ಪ್ರಕರಣಗಳು ನಡೆದಿವೆ. ಇದರಲ್ಲಿ 19 ಮನೆ ಕಳ್ಳತನ, 64 ರಾತ್ರಿ ವೇಳೆ ಕಳವು, 19 ಬೆಳಗ್ಗಿನ ವೇಳೆ ಕಳವು, 3 ಸರ ಕಳ್ಳತನ ಹಾಗೂ 9 ದರೋಡೆ ಪ್ರಕರಣಗಳು ಸೇರಿವೆ. ಕಳೆದ ವರ್ಷ 157 ಹಾಗೂ ಹಾಗೂ 2022ರಲ್ಲಿ 133 ಪ್ರಕರಣಗಳು ವರದಿಯಾಗಿತ್ತು. ಈಗಿನ ವೇಗ ನೋಡಿದರೆ ಕಳೆದ ಎರಡು ವರ್ಷಗಳ ಸಂಖ್ಯೆಯ ದ್ವಿಗುಣ ಪ್ರಕರಣಗಳು ದಾಖಲಾಗುವ ಸಾಧ್ಯತೆ ಇದೆ.

ರೈಲು ಮಾರ್ಗದ ಮೂಲಕ ಕನ್ನ
ಕಳ್ಳರು ರೈಲು ನಿಲ್ದಾಣ ಅಥವಾ ಹೆದ್ದಾರಿಯ ಮೂಲಕ ಬಂದು ಕಳ್ಳತನಕ್ಕೆ ಯತ್ನಿಸುತ್ತಿದ್ದಾರೆಯೇ ಎಂಬ ಅನುಮಾನಗಳೂ ವ್ಯಕ್ತವಾಗುತ್ತಿದೆ. ಬಹುತೇಕ ಪ್ರಕರಣಗಳು ಉಡುಪಿ ಹಾಗೂ ಮಣಿಪಾಲ ಭಾಗದಲ್ಲಿಯೇ ವರದಿಯಾಗುತ್ತಿರುವುದು ಇದಕ್ಕೆಲ್ಲ ಪ್ರಮುಖ ಕಾರಣವಾಗಿದೆ. ಇತ್ತೀಚೆಗಷ್ಟೇ ಮಣಿಪಾಲದಲ್ಲಿ ಅಂಗಡಿಯಲ್ಲಿ ಕಳವು ಮಾಡಿದ ಆರೋಪಿಗಳನ್ನು ಪೊಲೀಸರು ಪತ್ತೆಹಚ್ಚಿದ್ದರು. ಆದರೆ ಉಡುಪಿಯಲ್ಲಿ ನಡೆದ ಹಲವಾರು ಪ್ರಕರಣಗಳ ಆರೋಪಿಗಳ ಪತ್ತೆಕಾರ್ಯ ಇನ್ನೂ ಸಾಧ್ಯವಾಗದಿರುವುದು ಪೊಲೀಸರಿಗೂ ತಲೆನೋವಾಗಿ ಪರಿಣಮಿಸಿದೆ.

ತನಿಖೆ ಪ್ರಗತಿಯಲ್ಲಿ
ನಗರದ ಆಯಕಟ್ಟಿನ ಭಾಗಗಳಿಗೆ ಸಿಸಿ ಟಿವಿ ಅಳವಡಿಕೆ ಮಾಡುವಂತೆ ಈಗಾಗಲೇ ನಗರಸಭೆಗೆ ಸೂಚನೆ ನೀಡಲಾಗಿದೆ. ಕಳ್ಳರ ಪತ್ತೆಗೆ ವಿವಿಧ ವಿಶೇಷ ತಂಡಗಳನ್ನು ಈಗಾಗಲೇ ರಚನೆ ಮಾಡಲಾಗಿದ್ದು, ತನಿಖೆ ಪ್ರಕ್ರಿಯೆ ಚಾಲ್ತಿಯಲ್ಲಿದೆ.
-ಡಾ| ಕೆ. ಅರುಣ್‌, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ

ಟಾಪ್ ನ್ಯೂಸ್

Divorce: ಗಂಡನಿಂದ ವಿಚ್ಚೇದನ ಪಡೆದ ಎ.ಆರ್‌.ರೆಹಮಾನ್‌ ತಂಡದ ಸದಸ್ಯೆ ಮೋಹಿನಿ

Divorce: ಗಂಡನಿಂದ ವಿಚ್ಚೇದನ ಪಡೆದ ಎ.ಆರ್‌.ರೆಹಮಾನ್‌ ತಂಡದ ಸದಸ್ಯೆ ಮೋಹಿನಿ

Viral: ಮದುವೆ ಸಂಭ್ರಮದಲ್ಲಿ 20 ಲಕ್ಷ ರೂಪಾಯಿಯನ್ನು ಗಾಳಿಯಲ್ಲಿ ಎಸೆದ ಅತಿಥಿಗಳು.!

Viral: ಮದುವೆ ಸಂಭ್ರಮದಲ್ಲಿ 20 ಲಕ್ಷ ರೂಪಾಯಿಯನ್ನು ಗಾಳಿಯಲ್ಲಿ ಎಸೆದ ಅತಿಥಿಗಳು.!

3-raichur

Raichur: ರಾತ್ರೋರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ

Hit & Run: ಐಷಾರಾಮಿ ಕಾರಿಗೆ ಕ್ಯಾಮರಾಮ್ಯಾನ್ ಬಲಿ; 100 ಮೀ ದೂರದಲ್ಲಿ ಪತ್ತೆಯಾಯಿತು ಮೃತದೇಹ

Hit & Run: ಐಷಾರಾಮಿ ಕಾರಿಗೆ ಕ್ಯಾಮರಾಮ್ಯಾನ್ ಬಲಿ; 100 ಮೀ ದೂರದಲ್ಲಿ ಪತ್ತೆಯಾಯಿತು ಮೃತದೇಹ

1-bagalkote

Bagalkote: ಹೇರ್ ಡ್ರೈಯರ್ ಸ್ಪೋಟಗೊಂಡು ಮಹಿಳೆಯ ಎರಡು ಕೈ ತುಂಡು

Bengaluru Tech Summit: ರೋಗಿ ಕಣ್ಣು ಮಿಟುಕಿಸಿದರೆ ಮೊಬೈಲ್‌ಗೆ ಮೆಸೇಜ್‌!

Bengaluru Tech Summit: ರೋಗಿ ಕಣ್ಣು ಮಿಟುಕಿಸಿದರೆ ಮೊಬೈಲ್‌ಗೆ ಮೆಸೇಜ್‌!

Bengaluru Tech Summit: ನಾಯಿ, ಬೆಕ್ಕುಗಳಿಗೂ ಬಂತು ಕೃತಕ ಬುದ್ಧಿಮತ್ತೆ ಚಾಟ್‌ಬಾಟ್‌ 

Bengaluru Tech Summit: ನಾಯಿ, ಬೆಕ್ಕುಗಳಿಗೂ ಬಂತು ಕೃತಕ ಬುದ್ಧಿಮತ್ತೆ ಚಾಟ್‌ಬಾಟ್‌ 

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7

Udupi: ನಮ್ಮ ಶೌಚಾಲಯ ನಮ್ಮ ಗೌರವ ತಿಂಗಳ ಆಂದೋಲನಕ್ಕೆ ಚಾಲನೆ

Udupi: ಗೀತಾರ್ಥ ಚಿಂತನೆ-99: ತಿಳಿದುಕೊಂಡವರ ಹಾಗಿದ್ದ ಅರ್ಜುನ

Udupi: ಗೀತಾರ್ಥ ಚಿಂತನೆ-99: ತಿಳಿದುಕೊಂಡವರ ಹಾಗಿದ್ದ ಅರ್ಜುನ

Gangolli

Kaup: ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿ ಮೃತ್ಯು

16-roopa

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ… ನಕ್ಸಲ್‌ ಎನ್‌ಕೌಂಟರ್‌ ಬಗ್ಗೆ ಡಿಐಜಿ ಹೇಳಿದ್ದೇನು ?

13(2)

Udupi: ಈಶ್ವರನಗರ-ಪರ್ಕಳ ರಸ್ತೆಯ ಹೊಂಡಗಳಿಗೆ ಕೊನೆಗೂ ತೇಪೆ

MUST WATCH

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

ಹೊಸ ಸೇರ್ಪಡೆ

1-doct

Doctor; ಖ್ಯಾತ ಹೃದ್ರೋಗ ತಜ್ಞ ಡಾ.ಎಸ್.ಜಿ.ಸರ್ವೋತ್ತಮ ಪ್ರಭು ವಿಧಿವಶ

Divorce: ಗಂಡನಿಂದ ವಿಚ್ಚೇದನ ಪಡೆದ ಎ.ಆರ್‌.ರೆಹಮಾನ್‌ ತಂಡದ ಸದಸ್ಯೆ ಮೋಹಿನಿ

Divorce: ಗಂಡನಿಂದ ವಿಚ್ಚೇದನ ಪಡೆದ ಎ.ಆರ್‌.ರೆಹಮಾನ್‌ ತಂಡದ ಸದಸ್ಯೆ ಮೋಹಿನಿ

4-panaji

Panaji: 55ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಉದ್ಘಾಟನಾ ಸಮಾರಂಭಕ್ಕೆ ಕ್ಷಣಗಣನೆ ಆರಂಭ

Viral: ಮದುವೆ ಸಂಭ್ರಮದಲ್ಲಿ 20 ಲಕ್ಷ ರೂಪಾಯಿಯನ್ನು ಗಾಳಿಯಲ್ಲಿ ಎಸೆದ ಅತಿಥಿಗಳು.!

Viral: ಮದುವೆ ಸಂಭ್ರಮದಲ್ಲಿ 20 ಲಕ್ಷ ರೂಪಾಯಿಯನ್ನು ಗಾಳಿಯಲ್ಲಿ ಎಸೆದ ಅತಿಥಿಗಳು.!

3-raichur

Raichur: ರಾತ್ರೋರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.