Dandeli: ವಿದ್ಯುತ್ ಕಂಬದ ಜಿಓಎಸ್ ಕಳವು ಮಾಡಿದ್ದ ಆರೋಪಿ;ಮಾಲು ಸಹಿತ ವಶಕ್ಕೆ ಪಡೆದ ಪೊಲೀಸರು
Team Udayavani, Nov 20, 2024, 2:51 PM IST
ದಾಂಡೇಲಿ: ನಗರದ ಹಲವು ಕಡೆಗಳಲ್ಲಿ ವಿದ್ಯುತ್ ಕಂಬದ ಜಿಓಎಸ್ ಕಳವು ಮಾಡಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾಲು ಸಹಿತ ಆರೋಪಿಯನ್ನು ಬಂಧಿಸಿರುವ ಘಟನೆ ನ.20ರ ಬುಧವಾರ ನಡೆದಿದೆ.
ಕಳೆದ ಕೆಲ ದಿನಗಳಿಂದ ನಗರದ ಐಪಿಎಂ, ಹಳೆ ದಾಂಡೇಲಿ ಕೋಗಿಲಬನ ಸೇರಿದಂತೆ ಹಲವು ಕಡೆಗಳಲ್ಲಿ ವಿದ್ಯುತ್ ಕಂಬಕ್ಕೆ ಅಳವಡಿಸಿರುವ ಜಿಓಎಸ್ ಕಳವು ಮಾಡಲಾಗಿತ್ತು. ಪ್ರತಿನಿತ್ಯ ಒಂದಲ್ಲ ಒಂದು ಕಡೆಗಳಲ್ಲಿ ವಿದ್ಯುತ್ ಕಂಬದ ಜಿಓಎಸ್ ಕಳವಾಗುತ್ತಿತ್ತು. ಈ ಕೃತ್ಯವನ್ನು ಹತ್ತಿಕ್ಕುವ ನಿಟ್ಟಿನಲ್ಲಿ ಹೆಸ್ಕಾಂ ಅಧಿಕಾರಿಗಳು ಒಂದು ತಂಡ ರಚಿಸಿ ಕಳವಾಗಿರುವ ವಿದ್ಯುತ್ ಕಂಬದ ಜಿಓಎಸ್ ಹುಡುಕುವ ಕಾರ್ಯಾಚರಣೆ ಆರಂಭಿಸಿತ್ತು.
ನ.20ರ ಬುಧವಾರ ಹೆಸ್ಕಾಂ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ತಂಡ ಪಟೇಲ್ ವೃತ್ತದ ಬಳಿಯಿರುವ ಸ್ಕ್ರಾಪ್ ಅಂಗಡಿಗೆ ತೆರಳಿ ಪರಿಶೀಲನೆ ನಡೆಸಿದಾಗ ಅಲ್ಲಿ ಜಿಓಎಸ್ ಗಳಿಗೆ ಸಂಬಂಧಿಸಿದ ಕೆಲ ಕಬ್ಬಿಣದ ಸಾಮಗ್ರಿಗಳು ದೊರತಿವೆ.
ಅಂಗಡಿ ನಡೆಸುತ್ತಿದ್ದವನಿಂದ ಇದು ಎಲ್ಲಿಂದ, ಯಾರಿಂದ ಬಂತು ಎಂಬ ಮಾಹಿತಿ ಕಲೆ ಹಾಕಿ, ಸ್ಕ್ರಾಪ್ ಅಂಗಡಿಯವನೇ ಜಿಓಎಸ್ ಕಳವು ಮಾಡಿದಾತನ ಮನೆಯನ್ನು ಹೆಸ್ಕಾಂ ಅಧಿಕಾರಿಗಳಿಗೆ ಮತ್ತು ಸಿಬ್ಬಂದಿಗಳಿಗೆ ಹಾಗೂ ಪೊಲೀಸರಿಗೆ ತೋರಿಸಿಕೊಟ್ಟಿದ್ದಾನೆ.
ಕಳವು ಮಾಡಿರುವ ಆರೋಪಿ ದಾಂಡೇಲಿ ನಗರದ ಬೈಲುಪಾರು ನಿವಾಸಿ ವಿಲ್ಸನ್ ಎಂಬಾತನಾಗಿದ್ದು, ಈತನ ಮನೆಯನ್ನು ಪರಿಶೀಲಿಸಿದಾಗ ಮನೆಯಲ್ಲಿಯೂ ವಿದ್ಯುತ್ ಕಂಬದ ಜಿಓಎಸ್ ಸಾಮಗ್ರಿಗಳು ದೊರೆತಿವೆ.
ಪಿಎಸ್ಐ ಕಿರಣ್ ಪಾಟೀಲ್ ನೇತೃತ್ವದಲ್ಲಿ ನಗರ ಠಾಣೆಯ ಪೊಲೀಸರು ಕಳವು ಮಾಡಿರುವ ವಸ್ತುಗಳನ್ನು ವಶಪಡಿಸಿಕೊಂಡು ಕಳವು ಮಾಡಿದ ಆರೋಪಿ ಮತ್ತು ಕಳವು ಮಾಡಿದ ವಸ್ತುಗಳನ್ನು ಖರೀದಿಸಿದ ಸ್ಕ್ರ್ಯಾಪ್ ಅಂಗಡಿಯಾತನನ್ನು ವಶಕ್ಕೆ ಪಡೆದು ಮುಂದಿನ ವಿಚಾರಣೆ ನಡೆಸುತ್ತಿದ್ದಾರೆ.
ಸ್ಥಳದಲ್ಲಿ ಹೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ದೀಪಕ್ ನಾಯಕ, ಶಾಖಾಧಿಕಾರಿ ಉದಯ ಹಾಗೂ ಹೆಸ್ಕಾಂ ಅಧಿಕಾರಿಗಳು ಮತ್ತು ಸಿಬ್ಬಂದಿಗಳು, ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Prabhutva Movie: ಮತದಾನದ ಮಹತ್ವ ತಿಳಿಸುವ ಪ್ರಭುತ್ವ…
Sandalwood: ಕನ್ನಡ ಚಿತ್ರರಂಗಕ್ಕಾಗಿ ಮಿಥ್ ಎಫ್ಎಕ್ಸ್ ಆರಂಭ
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
Kollywood: ಯೂಟ್ಯೂಬ್ ವಿಮರ್ಶೆ ಬ್ಯಾನ್ ಮಾಡಲು ತಮಿಳು ನಿರ್ಮಾಪಕರ ಸಂಘ ಆಗ್ರಹ
ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ಅನ್ಯಾಯವಾಗಿದೆ: ದಿನೇಶ್ ಗುಂಡೂರಾವ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.