Karnataka: ಅನರ್ಹರ ಕಾರ್ಡ್ ಮಾತ್ರ ಎಪಿಎಲ್‌ಗೆ: ಮುನಿಯಪ್ಪ
Team Udayavani, Nov 21, 2024, 12:20 AM IST
ಕೋಲಾರ: ಬಿಪಿಎಲ್ ಕಾರ್ಡ್ ಪಡೆಯಲು ಅರ್ಹರಲ್ಲದವರ ಕಾರ್ಡ್‌ಗಳನ್ನು ಎಪಿಎಲ್‌ಗೆ ಬದಲಾಯಿಸುತ್ತೇವೆಯೇ ಹೊರತು, ಯಾವುದೇ ಕಾರಣಕ್ಕೂ ರದ್ದು ಮಾಡುವುದಿಲ್ಲ ಎಂದು ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಕೆ.ಎಚ್.ಮುನಿಯಪ್ಪ ಸ್ಪಷ್ಟಪಡಿಸಿದರು.
ನಗರದಲ್ಲಿ ಅವರು ಮಾತನಾಡಿ, ಆದಾಯ ತೆರಿಗೆ ಪಾವತಿಸುವವರು, ಸರಕಾರಿ ಕೆಲಸದಲ್ಲಿ ಇರುವವರು, ವಾರ್ಷಿಕ ಆದಾಯ 1.20 ಲಕ್ಷ ರೂ. ಮೇಲ್ಪಟ್ಟಿದ್ದರೆ ಅಂತಹವರನ್ನು ಗುರುತಿಸಿ ಎಪಿಎಲ್‌ನಲ್ಲಿ ಇಡಲಾಗುತ್ತದೆ. ಈ ಸಂಬಂಧ ಗುರುವಾರ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಲಾಗುವುದು. ಒಂದು ವೇಳೆ ಬಡವರಿಗೆ ತೊಂದರೆಯಾದಲ್ಲಿ ತಹಶೀಲ್ದಾರ್ ಗಮನಕ್ಕೆ ತಂದು ಸಮಸ್ಯೆ ಬಗೆಹರಿಸಲಾಗುವುದು ಎಂದರು.
ಮಾಜಿ ಸ್ಪೀಕರ್ ರಮೇಶ್‌ಕುಮಾರ್ ವಿರುದ್ಧ ಅರಣ್ಯ ಭೂಮಿ ಒತ್ತುವರಿ ಆರೋಪಕ್ಕೆ ಪ್ರತಿಕ್ರಿಯಿಸಿ, ಕಾನೂನು ಎಲ್ಲರಿಗೂ ಒಂದೇ. ಅರಣ್ಯ ಭೂಮಿ ಒತ್ತುವರಿ ಮಾಡಿಕೊಂಡಿದ್ದರೆ ಸರಕಾರ ಕಾನೂನು ಕ್ರಮ ಕೈಗೊಳ್ಳಲಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Byrathi Suresh: ಪವರ್ ಪಾಲಿಟಿಕ್ಸ್, ಶೇರಿಂಗ್, ಕೇರಿಂಗ್ ಯಾವುದೂ ಇಲ್ಲ
Kolara: ಹೈಕೋರ್ಟ್ ಅನುಮತಿ ಬಳಿಕ ಬಿಗಿ ಭದ್ರತೆಯಲ್ಲಿ ಆರೆಸ್ಸೆಸ್ ಪಥಸಂಚಲನ
Kolar: “ಗೃಹಲಕ್ಷ್ಮಿ’ಗೆ ಆಸಕ್ತಿ ತೋರದ 21 ಸಾವಿರ ಕೋಲಾರ ಸ್ತ್ರೀಯರು
Kolara: ಏಲಕ್ಕಿ ಬಾಳೆಕಾಯಿ ಬೆಲೆ ಕುಸಿತ: 3 ಎಕರೆ ಬೆಳೆ ಕಡಿದು ಹಾಕಿದ ರೈತ
Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!